ಇಬ್ರಿಯರಿಗೆ 11:3 - ಪರಿಶುದ್ದ ಬೈಬಲ್3 ದೇವರು ತನ್ನ ಆಜ್ಞೆಯಿಂದ ಈ ಲೋಕವನ್ನು ಸೃಷ್ಟಿಸಿದನೆಂಬುದನ್ನು ಅರ್ಥಮಾಡಿಕೊಳ್ಳಲು ನಂಬಿಕೆ ನಮಗೆ ಸಹಾಯ ಮಾಡುತ್ತದೆ. ಹೇಗೆಂದರೆ ನಮ್ಮ ಕಣ್ಣಿಗೆ ಕಾಣುವಂಥ ವಸ್ತುಗಳಿಂದ ಈ ಜಗತ್ತು ಸೃಷ್ಟಿಯಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಈ ಕಾರಣದಿಂದ ಕಾಣಿಸುವ ಈ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ವಿಶ್ವವು ದೇವರ ವಾಣಿಯಿಂದ ಉಂಟಾಯಿತು ಎಂಬುದನ್ನು ಮತ್ತು ಗೋಚರವಾದವುಗಳು ಅಗೋಚರವಾದವುಗಳಿಂದ ಉಂಟಾದವು ಎಂಬುದನ್ನು ವಿಶ್ವಾಸದಿಂದಲೇ ತಿಳಿಯುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಂಬಿಕೆಯಿಂದಲೇ ನಾವು ತಿಳಿದುಕೊಂಡು ಕಾಣಿಸುವ ಈ ಜಗತ್ತು ದೃಶ್ಯ ವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ವಿಶ್ವವು ದೇವರ ವಾಕ್ಯದಿಂದ ಉಂಟಾದವೆಂದೂ ಕಾಣುವಂತವುಗಳು ಕಾಣದವುಗಳಿಂದ ಉಂಟಾದವು ಎಂಬುದನ್ನು ನಾವು ನಂಬಿಕೆಯಿಂದ ತಿಳಿದುಕೊಂಡದ್ದರಿಂದ ಗ್ರಹಿಸುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಹ್ಯೊ ಜಗ್ ದೆವಾಚ್ಯಾ ಗೊಸ್ಟಿ ವೈನಾಚ್ ಉತ್ಪನ್ನ್ ಹೊಲೊ ಮನ್ತಲೆ ವಿಶ್ವಾಸಾನುಚ್ ಕಳ್ವುನ್ ಘೆವ್ನ್ ದಿಸ್ತಲ್ಯಾ ವಸ್ತಾಂಚ್ಯಾಕ್ನಾ ಹೊವ್ಕ್ ನಾ ಮನುನ್ ಕಳ್ವುನ್ ಘೆತಾಂವ್. ಅಧ್ಯಾಯವನ್ನು ನೋಡಿ |
“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.