ಇಬ್ರಿಯರಿಗೆ 11:37 - ಪರಿಶುದ್ದ ಬೈಬಲ್37 ಕೆಲವರನ್ನು ಕಲ್ಲೆಸೆದು ಕೊಂದರು, ಕೆಲವರನ್ನು ಅರ್ಧಕತ್ತರಿಸಿ ಎರಡು ಭಾಗ ಮಾಡಿದರು. ಕೆಲವರನ್ನು ಕತ್ತಿಗಳಿಂದ ಇರಿದುಕೊಂದರು. ಇವರಲ್ಲಿ ಕೆಲವರು ಕುರಿ ಮತ್ತು ಹೋತಗಳ ಚರ್ಮಗಳನ್ನು ತೊಟ್ಟುಕೊಂಡಿದ್ದರು; ಕೆಲವರು ಬಡವರಾಗಿದ್ದರು; ಹಿಂಸೆಗೆ ಒಳಗಾಗಿದ್ದರು ಮತ್ತು ಜನರ ಕ್ರೂರ ವರ್ತನೆಗೆ ಗುರಿಯಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಮತ್ತೆ ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಗರಗಸದಿಂದ ಸೀಳಿ ಸಾಯಿಸಿದರು; ಖಡ್ಗದಿಂದ ಕಡಿದುಹಾಕಿದರು. ಇನ್ನೂ ಕೆಲವರು ನಿರ್ಗತಿಕರಾಗಿ ಕುರಿಮೇಕೆಗಳ ಚರ್ಮಗಳನ್ನು ಹೊದ್ದುಕೊಂಡು ಅಲೆದಾಡಿದರು. ಬಡತನಕ್ಕೂ ಹಿಂಸೆಬಾಧೆಗಳಿಗೂ ಕಷ್ಟಸಂಕಟಗಳಿಗೂ ಈಡಾದರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಕೆಲವರನ್ನು ಗರಗಸದಿಂದ ಕೊಯ್ದು ಕೊಂದರು; ದೇವದ್ರೋಹಿಗಳಾಗಿ ಪ್ರಾಣವನ್ನು ಉಳಿಸಿಕೊಳ್ಳಿರೆಂದು ಕೆಲವರನ್ನು ಪ್ರೇರೇಪಿಸಿದರು; ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ತಿರುಗಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಕೆಲವರ ಮೇಲೆ ಕಲ್ಲೆಸೆದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಸಾಯಿಸಿದರು, ಕೆಲವರನ್ನು ಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು, ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಥೊಡ್ಯಾಕ್ನಿ ಲೊಕಾನಿ ಗುಂಡೆ ಮಾರುನ್ ಜಿವ್ ಕಾಡ್ಲ್ಯಾನಿ, ಥೊಡಾಕ್ನಿ ಕಾಪುನ್ ದೊನ್ ತುಕ್ಡೆ ಕರ್ಲ್ಯಾನಿ, ತೆಂಕಾ ಕೊಯ್ತ್ಯಾನ್ ತೊಡುನ್ ಜಿವ್ ಕಾಡ್ಲ್ಯಾನಿ, ತ್ಯಾತುರ್ ಉಲ್ಲಿ ಲೊಕಾ ಬಕ್ರ್ಯಾಂಚೆ ಅನಿ ಶೆಳಿಯಾಂಚೆ ಚಮ್ಡೆ ನೆಸಿ ಸಾರ್ಕೆ ಹೊಲೆ, ಥೊಡಿ ಲೊಕಾ ಗರಿಬ್ ಹೊಲಿ, ಅನಿ ಥೊಡಿ ಲೊಕಾ, ತರಾಸಾತ್ ಹೊತ್ತಿ, ಅನಿ ಥೊಡೆ ಲೊಕಾಂಚ್ಯಾ ಖಟೊರ್ ಚಲ್ನುಕಿತ್ ಗಾವ್ಲೆ. ಅಧ್ಯಾಯವನ್ನು ನೋಡಿ |
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.
ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)