ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)
ದಾವೀದನು ಗತ್ ಊರನ್ನು ಬಿಟ್ಟು ಅದುಲ್ಲಾಮ್ ಗವಿಗೆ ಓಡಿಹೋದನು. ದಾವೀದನು ಅದುಲ್ಲಾಮಿನಲ್ಲಿರುವುದು ಅವನ ಅಣ್ಣಂದಿರಿಗೂ ಬಂಧುಗಳಿಗೂ ತಿಳಿಯಿತು. ಅವರು ದಾವೀದನನ್ನು ನೋಡಲು ಅಲ್ಲಿಗೆ ಹೋದರು.
ನೀತಿವಂತರು ಇಲ್ಲವಾಗುವರು; ಯಾರೂ ಅದನ್ನು ಗಮನಿಸರು. ಸದ್ಭಕ್ತರು ಗತಿಸಿಹೋಗುವರು; ಅದಕ್ಕೆ ಕಾರಣವೇನೆಂದು ಯಾರೂ ಗ್ರಹಿಸರು. ಕೇಡಿನಿಂದ ಪಾರಾಗಲೆಂದೇ ಸದ್ಭಕ್ತರಿಗೆ ಹೀಗಾಯಿತು ಎಂದು ಯಾರೂ ಯೋಚಿಸರು.
ನಾನು ಏನು ಮಾಡಿದೆನೆಂಬುದು ನಿನಗೆ ತಿಳಿಯಲಿಲ್ಲವೇ? ಯೆಹೋವನ ಪ್ರವಾದಿಗಳನ್ನು ಈಜೆಬೆಲಳು ಕೊಲ್ಲುತ್ತಿದ್ದಾಗ ನೂರು ಮಂದಿ ಪ್ರವಾದಿಗಳನ್ನು ನಾನು ಗುಹೆಗಳಲ್ಲಿ ಅಡಗಿಸಿಟ್ಟೆನು. ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿಯನ್ನು ಮತ್ತೊಂದು ಗುಹೆಯಲ್ಲಿಯೂ ನಾನು ಅಡಗಿಸಿಟ್ಟೆನು. ಅವರಿಗೆ ಆಹಾರವನ್ನೂ ನೀರನ್ನೂ ನಾನು ತಂದುಕೊಡುತ್ತಿದ್ದೆನು.
ಜೀಫಿನ ಜನರು ಸೌಲನನ್ನು ನೋಡುವುದಕ್ಕಾಗಿ ಗಿಬೆಯಕ್ಕೆ ಹೋದರು. ಅವರು ಸೌಲನಿಗೆ, “ದಾವೀದನು ಹಕೀಲಾ ಬೆಟ್ಟದ ಮೇಲೆ ಅಡಗಿಕೊಂಡಿದ್ದಾನೆ. ಈ ಬೆಟ್ಟವು ಜೆಸಿಮೋನ್ ಅರಣ್ಯಕ್ಕೆ ಎದುರಿನಲ್ಲಿದೆ” ಎಂದು ಹೇಳಿದರು.
ದಾವೀದನು ಅಡಗಿಕೊಳ್ಳತಕ್ಕ ಎಲ್ಲಾ ಸ್ಥಳಗಳನ್ನು ಕಂಡುಹಿಡಿಯಿರಿ. ನೀವು ಹಿಂದಿರುಗಿ ನನ್ನ ಬಳಿಗೆ ಬಂದು ಎಲ್ಲವನ್ನೂ ನನಗೆ ತಿಳಿಸಿ. ಅನಂತರ ನಾನು ನಿಮ್ಮೊಂದಿಗೆ ಬರುತ್ತೇನೆ. ದಾವೀದನು ಆ ಪ್ರಾಂತ್ಯದಲ್ಲಿದ್ದರೆ, ನಾನು ಅವನನ್ನು ಕಂಡು ಹಿಡಿಯುತ್ತೇನೆ. ಅವನು ಯೆಹೂದ ಕುಲಗಳಲ್ಲಿ ಎಲ್ಲೇ ಇದ್ದರೂ ಸಹ ನಾನು ಅವನನ್ನು ಕಂಡುಹಿಡಿಯುತ್ತೇನೆ” ಎಂದು ಹೇಳಿದನು.
ಜೀಫಿನ ಜನರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು, “ದಾವೀದನು ನಮ್ಮ ಪ್ರಾಂತ್ಯದಲ್ಲಿ ಅಡಗಿಕೊಂಡಿದ್ದಾನೆ. ಅವನು ಹೋರೆಷಿನ ಕೋಟೆಯಲ್ಲಿದ್ದಾನೆ. ಅವನು ಜೆಸಿಮೋನಿನ ದಕ್ಷಿಣಕ್ಕಿರುವ ಹಕೀಲಾ ಬೆಟ್ಟದ ಮೇಲಿದ್ದಾನೆ.
ಮಿದ್ಯಾನ್ಯರು ಬಹಳ ಬಲಶಾಲಿಗಳಾಗಿದ್ದು ಇಸ್ರೇಲರಿಗೆ ಕ್ರೂರಿಗಳಾಗಿದ್ದರು. ಆದ್ದರಿಂದ ಇಸ್ರೇಲರು ಅಡಗಿಕೊಳ್ಳುವುದಕ್ಕಾಗಿ ಬೆಟ್ಟಗಳಲ್ಲಿ ಸ್ಥಳಗಳನ್ನು ಮಾಡಿಕೊಂಡರು. ಕಂಡುಹಿಡಿಯಲಾಗದ ಸ್ಥಳಗಳಲ್ಲಿ ಅವರು ತಮ್ಮ ಆಹಾರವನ್ನು ಬಚ್ಚಿಡುತ್ತಿದ್ದರು.
ಇಷ್ಮಾಯೇಲನು ಶವಗಳನ್ನು ಆ ಬಾವಿಯೊಳಗೆ ಹಾಕಿದನು. ಆ ಬಾವಿಯು ಬಹಳ ದೊಡ್ಡದಾಗಿತ್ತು. ಅದನ್ನು ಯೆಹೂದದ ರಾಜನಾದ ಆಸನು ತೋಡಿಸಿದ್ದನು. ಯುದ್ಧದ ಸಮಯದಲ್ಲಿ ನಗರದಲ್ಲಿ ನೀರು ಸಾಕಷ್ಟು ಇರಬೇಕೆಂಬ ಉದ್ದೇಶದಿಂದ ರಾಜನಾದ ಆಸನು ಈ ಬಾವಿಯನ್ನು ತೋಡಿಸಿದ್ದನು. ರಾಜನಾದ ಆಸನು ತನ್ನ ನಗರವನ್ನು ಇಸ್ರೇಲಿನ ರಾಜನಾದ ಬಾಷನಿಂದ ರಕ್ಷಿಸುವುದಕ್ಕಾಗಿ ಇದನ್ನು ಕಟ್ಟಿಸಿದ್ದನು.