Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:4 - ಪರಿಶುದ್ದ ಬೈಬಲ್‌

4 ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ವಿಶ್ವಾಸವಿದ್ದುದರಿಂದಲೇ ಹೇಬೆಲನು ಕಾಯಿನನಿಗಿಂತ ಉತ್ತಮವಾದ ಬಲಿಯನ್ನು ದೇವರಿಗೆ ಸಮರ್ಪಿಸಿದನು. ವಿಶ್ವಾಸದಿಂದಲೇ ತಾನು ಸತ್ಪುರುಷನೆಂದು ಸನ್ಮಾನಿತನಾದನು. ಅವನ ಕಾಣಿಕೆ ತಮಗೆ ಸ್ವೀಕೃತವಾಯಿತೆಂದು ದೇವರೇ ಸಾದರಪಡಿಸಿದರು. ಅವನು ಮೃತನಾಗಿದ್ದರೂ ಅವನ ವಿಶ್ವಾಸದ ಮೂಲಕ ಇಂದಿಗೂ ಮಾತನಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ತಾನು ನೀತಿವಂತನೆಂದು ಸಾಕ್ಷಿಹೊಂದಿದನು; ದೇವರು ಅವನ ಕಾಣಿಕೆಗಳನ್ನು ಅಂಗೀಕಾರಮಾಡಿದ್ದೇ ಆ ಸಾಕ್ಷಿ. ಅವನು ಸತ್ತಿದ್ದರೂ ಅವನ ನಂಬಿಕೆಯ ಮೂಲಕ ಇನ್ನೂ ಮಾತಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಉತ್ತಮ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ಅವನು ನೀತಿವಂತನೆಂದು ಸಾಕ್ಷಿಹೊಂದಿದನು. ದೇವರು ಸಹ ಅವನ ಕಾಣಿಕೆಗಳನ್ನು ಸ್ವೀಕಾರಮಾಡಿದರು. ಅವನು ಸತ್ತು ಹೋಗಿದ್ದರೂ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ವಿಶ್ವಾಸಾನುಚ್ ಅಬೆಲಾನ್ ಕಾಯಿನಾಚ್ಯಾನ್ ಬಿ ಬರೊ ಬಲಿ ದೆವಾಕ್ ದಿಲ್ಯಾನ್, ತೆಚ್ಯಾ ವೈನಾ ಅಪ್ನಿ ನಿತಿವಂತ್ ಮನುನ್ ಸಾಕ್ಷಿ ಘೆಟ್ಲ್ಯಾನ್. ದೆವಾನ್ ತೆಜಿ ಕಾನಿಕ್ ಒಪ್ಪುನ್ ಘೆಟಲ್ಲೆಚ್ ತಿ ಸಾಕ್ಷಿ ತೊ ಮರುನ್ ಗೆಲ್ಯಾರ್ಬಿ ವಿಶ್ವಾಸಾನ್ ಅಜುನ್‍ಬಿ ಬೊಲುನ್ಗೆತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:4
21 ತಿಳಿವುಗಳ ಹೋಲಿಕೆ  

ದೇವರಿಂದ ಹೊಸ ಒಡಂಬಡಿಕೆಯನ್ನು ತಂದಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮ ಸಂಗತಿಗಳನ್ನು ನಮಗೆ ತಿಳಿಸುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಅದಕ್ಕೆ ಯೆಹೋವನು, “ನೀನು ಮಾಡಿದ್ದೇನು? ನೀನು ನಿನ್ನ ತಮ್ಮನನ್ನೇ ಕೊಲೆಮಾಡಿದೆ! ಅವನ ರಕ್ತವು ಭೂಮಿಯ ಕಡೆಯಿಂದ ನನ್ನನ್ನು ಕೂಗುತಿದೆ.


ಅವರಿಗೆ ದುರ್ಗತಿಯಾಗುವುದು. ಈ ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಈ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ.


“ಆದ್ದರಿಂದ ಭೂಮಿಯ ಮೇಲೆ ಕೊಲ್ಲಲ್ಪಟ್ಟ ಎಲ್ಲಾ ಸತ್ಪುರುಷರ ಕೊಲೆಯ ಅಪರಾಧಕ್ಕೆ ನೀವು ಗುರಿಯಾಗುವಿರಿ. ಸತ್ಪುರುಷನಾದ ಹೇಬೆಲನನ್ನು ಮೊದಲುಗೊಂಡು ಬರಕೀಯನ ಮಗನಾದ ಜಕರೀಯನನ್ನು ಕೊಂದದ್ದಕ್ಕೆ ನೀವು ಅಪರಾಧಿಗಳಾಗುವಿರಿ. ಜಕರೀಯನು ದೇವಾಲಯಕ್ಕೂ ಯಜ್ಞವೇದಿಕೆಗೂ ನಡುವೆ ಕೊಲ್ಲಲ್ಪಟ್ಟನು.


ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.


ಬಹುಮಟ್ಟಿಗೆ ಪ್ರತಿಯೊಂದೂ ರಕ್ತದಿಂದ ಪರಿಶುದ್ಧವಾಗಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ರಕ್ತವಿಲ್ಲದೆ ಪಾಪಗಳನ್ನು ಕ್ಷಮಿಸಲು ಸಾಧ್ಯವಿಲ್ಲ.


ಅದಕ್ಕೆ ಯೆಹೋವನು ಕಾಯಿನನಿಗೆ, “ಆ ರೀತಿ ಆಗದಂತೆ ನಾನು ನೋಡಿಕೊಳ್ಳುವೆ! ಕಾಯಿನನೇ, ನಿನ್ನನ್ನು ಯಾವನಾದರೂ ಕೊಂದರೆ, ನಾನು ಅವನನ್ನು ಏಳರಷ್ಟು ಶಿಕ್ಷಿಸುವೆನು” ಎಂದು ಹೇಳಿದನು. ಆಮೇಲೆ ಯೆಹೋವನು ಕಾಯಿನನ ಮೇಲೆ ಒಂದು ಗುರುತಿಟ್ಟನು. ಅವನನ್ನು ಯಾರೂ ಕೊಲ್ಲಕೂಡದೆಂದು ಆ ಗುರುತು ಸೂಚಿಸುತ್ತಿತ್ತು.


ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಕಾಯಿನನು ಮತ್ತು ಹೇಬೆಲನು ಹೊಲಕ್ಕೆ ಹೋದರು. ಅಲ್ಲಿ ಕಾಯಿನನು ತನ್ನ ತಮ್ಮನ ಮೇಲೆರಗಿ ಅವನನ್ನು ಕೊಂದುಹಾಕಿದನು.


ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.


ಹೇಬೆಲನನ್ನು ಕೊಂದದ್ದಕ್ಕಾಗಿಯೂ ಜಕರೀಯನನ್ನು ಕೊಂದದ್ದಕ್ಕಾಗಿಯೂ ನಿಮಗೆ ದಂಡನೆಯಾಗುವುದು. ಜಕರೀಯನನ್ನು ಯಜ್ಞವೇದಿ ಮತ್ತು ದೇವಾಲಯದ ನಡುವೆ ಕೊಲ್ಲಲಾಯಿತು. ಹೌದು, ಅವರೆಲ್ಲರ ಕೊಲೆಗಳಿಗಾಗಿ ಈಗ ಜೀವಿಸುತ್ತಿರುವ ನಿಮಗೆ ದಂಡನೆ ಆಗುವುದು.


ಕೆಡುಕನ ಯಜ್ಞಗಳು ಯೆಹೋವನಿಗೆ ಅಸಹ್ಯ. ಯಾಕೆಂದರೆ ಅವು ದುರುದ್ದೇಶದಿಂದ ಕೂಡಿವೆ.


ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಗಳನ್ನು, ಸೌದೆಯನ್ನು, ಕಲ್ಲುಗಳನ್ನು ಮತ್ತು ಯಜ್ಞವೇದಿಕೆಯ ಸುತ್ತಲಿನ ಮಣ್ಣನ್ನೆಲ್ಲ ದಹಿಸಿತು. ಆ ಹಳ್ಳದಲ್ಲಿದ್ದ ನೀರನ್ನೆಲ್ಲ ಬೆಂಕಿಯು ದಹಿಸಿ ಒಣಗಿಸಿತು.


ಯೆಹೋವನ ಬಳಿಯಿಂದ ಬೆಂಕಿಯು ಬಂದು ವೇದಿಕೆಯ ಮೇಲಿದ್ದ ಸರ್ವಾಂಗಹೋಮವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿದಾಗ, ಅವರು ಆನಂದದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.


ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಲು, ಆಕೆಗೆ ಮತ್ತೊಬ್ಬ ಮಗ ಹುಟ್ಟಿದನು. ಹವ್ವಳು, “ದೇವರು ನನಗೆ ಮತ್ತೊಬ್ಬ ಮಗನನ್ನು ಕೊಟ್ಟನು. ಕಾಯಿನನು ಕೊಂದ ಹೇಬೆಲನಿಗೆ ಬದಲಾಗಿ ದೇವರು ನನಗೆ ಗಂಡುಮಗುವನ್ನು ಕೊಟ್ಟನು” ಎಂದು ಹೇಳಿ ಆ ಮಗುವಿಗೆ ಸೇತ ಎಂದು ಹೆಸರಿಟ್ಟಳು.


ದೇವರ ಬಗ್ಗೆ ತಮಗೆ ತಿಳಿದಿದೆಯೆಂದು ಅವರು ಹೇಳಿದರೂ ಅವರು ದೇವರನ್ನು ತಿಳಿದಿಲ್ಲವೆಂದು ಅವರ ಕೆಟ್ಟಕಾರ್ಯಗಳೇ ಸ್ಪಷ್ಟಪಡಿಸುತ್ತವೆ. ಅವರು ಭಯಂಕರವಾದ ಜನರು ಮತ್ತು ಅವಿಧೇಯರು. ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೂ ಅವರು ಯೋಗ್ಯರಲ್ಲ.


ಪ್ರತಿಯೊಬ್ಬ ಯೆಹೂದ್ಯ ಪ್ರಧಾನಯಾಜಕನೂ ಮನುಷ್ಯರೊಳಗಿಂದ ಆರಿಸಲ್ಪಟ್ಟು ದೇವರಿಗೆ ಸಂಬಂಧಿಸಿದ ಕಾರ್ಯಗಳನ್ನು ಮನುಷ್ಯರಿಗೋಸ್ಕರ ಮಾಡಲು ನೇಮಿಸಲ್ಪಡುತ್ತಾನೆ. ಆ ಯಾಜಕನು ಪಾಪಗಳಿಗಾಗಿ ದೇವರಿಗೆ ಕಾಣಿಕೆಗಳನ್ನೂ ಯಜ್ಞಗಳನ್ನೂ ಅರ್ಪಿಸಬೇಕು.


ಬಹಳ ಹಿಂದಿನ ಕಾಲದಲ್ಲಿ ಜೀವಿಸಿದ್ದ ಜನರಲ್ಲಿ ಈ ರೀತಿಯ ನಂಬಿಕೆಯಿದ್ದುದರಿಂದ ದೇವರು ಅವರ ವಿಷಯದಲ್ಲಿ ಸಂತೋಷಪಟ್ಟನು.


(ಲೋಟನು ನೀತಿವಂತನಾಗಿದ್ದನು. ಆದರೆ ಅವನು ಪ್ರತಿದಿನವೂ ಆ ದುಷ್ಟಜನರ ಮಧ್ಯೆ ಜೀವಿಸುತ್ತಿದ್ದನು. ಕೆಟ್ಟಕಾರ್ಯಗಳನ್ನು ನೋಡಿ ಮತ್ತು ಕೇಳಿ ಅವನ ಒಳ್ಳೆಯ ಹೃದಯವು ವೇದನೆಗೆ ಒಳಗಾಗಿತ್ತು.)


ಅವರು ನಿನಗೆ ಉಪದೇಶಮಾಡಿ ಬುದ್ಧಿ ಹೇಳುವರು; ತಾವು ಕಲಿತುಕೊಂಡದ್ದನ್ನು ನಿನಗೆ ಹೇಳಿಕೊಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು