Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:17 - ಪರಿಶುದ್ದ ಬೈಬಲ್‌

17 ನಿಮಗೇ ತಿಳಿದಿರುವಂತೆ, ಆ ಬಳಿಕ ಅವನು ತನ್ನ ತಂದೆಯ ಆಶೀರ್ವಾದವನ್ನು ಪಡೆದುಕೊಳ್ಳಲು ಬಹಳವಾಗಿ ಗೋಳಾಡಿದನು. ಏಸಾವನು ತಾನು ಮಾಡಿದ್ದನ್ನು ಬದಲಾಯಿಸಲಾಗದ್ದರಿಂದ ತಂದೆಯ ಆಶೀರ್ವಾದವು ಅವನಿಗೆ ದೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅನಂತರ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯಲು ಕಣ್ಣೀರಿಟ್ಟು ಕೇಳಿಕೊಂಡರೂ ಪ್ರಯೋಜನವಾಗಲಿಲ್ಲ; ತಂದೆಯ ತೀರ್ಮಾನವನ್ನು ಮಾರ್ಪಡಿಸುವ ಸಾಧ್ಯತೆಯೂ ಇರಲಿಲ್ಲ. ಇದು ನಿಮಗೆ ತಿಳಿದ ವಿಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ನಡೆದದ್ದನ್ನು ಇಲ್ಲದ ಹಾಗೆ ಮಾಡುವದಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ತರುವಾಯ ಅವನು ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಬಯಸಿ, ಕಣ್ಣೀರನ್ನು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲಾದವನೆಂದು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾನಾ ತೊ ಅಪ್ನಾಚ್ಯಾ ಬಾಬಾಚೊ ಆಶಿರ್ವಾದ್ ಘೆವ್ಕ್ ಗೆಲ್ಯಾ ತನ್ನಾ ಬಾಬಾನ್ ತೆಕಾ ಆಶಿರ್ವಾದ್ ದಿಯ್‍ನಸ್ತಾನಾ ಫಾಟಿ ಧಾಡ್ಲ್ಯಾನ್, ತೆ ತುಮ್ಕಾ ಗೊತ್ತ್ ಹಾಯ್, ತೊ ಆಶಿರ್ವಾದ್ ಘೆವ್ಕ್ ಸಾಟ್ನಿ ಮನುನ್ ದುಖಾ ಗಳ್ವುನ್ ತಳ್ಮಳ್ಲೊ ಹೊಲ್ಯಾರ್‍ಬಿ ಕಸ್ಲ್ಯಾ ಫಾಯ್ದ್ಯಾಕ್ ಪಡುಕ್‍ ನಾ, ಕಶ್ಯಾಕ್ ಮಟ್ಲ್ಯಾರ್, ಮನ್ ಬದ್ಲುಕ್ ತೆಕಾ ಕಸ್ಲೊ ಅವಕಾಸ್ ಗಾವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:17
10 ತಿಳಿವುಗಳ ಹೋಲಿಕೆ  

ಆದರೆ ನಾನು ಅವರಿಗೆ, ‘ಅಧರ್ಮಿಗಳೇ, ನನ್ನಿಂದ ತೊಲಗಿರಿ. ನೀವು ಯಾರೋ ನನಗೆ ತಿಳಿಯದು’ ಎಂದು ಸ್ಪಷ್ಟವಾಗಿ ಹೇಳಿಬಿಡುವೆನು.


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಯನ್ನೂ ಬೆಳೆಸಿದರೆ ನಿಷ್ಪ್ರಯೋಜಕವಾಗಿ ದೇವರ ಶಾಪಕ್ಕೆ ಗುರಿಯಾಗುತ್ತದೆ. ಆ ಭೂಮಿಯನ್ನು ಬೆಂಕಿಯಿಂದ ಸುಟ್ಟು ನಾಶಮಾಡಲಾಗುವುದು.


ನನ್ನ ಜನರನ್ನು ‘ತಿರಸ್ಕರಿಸಲಾದ ಬೆಳ್ಳಿ’ ಎಂದು ಕರೆಯಲಾಗುವದು. ಏಕೆಂದರೆ ಯೆಹೋವನು ಅವರನ್ನು ಸ್ವಿಕರಿಸಲಿಲ್ಲ.”


ಅಪಕಾರ ಮಾಡಿದವನಿಗೆ ಅಪಕಾರ ಮಾಡದೆ, ನಿಂದಿಸಿದವನನ್ನು ನಿಂದಿಸದೆ, ಅವನನ್ನು ಆಶೀರ್ವದಿಸುವಂತೆ ದೇವರಲ್ಲಿ ಬೇಡಿಕೊಳ್ಳಿರಿ. ಏಕೆಂದರೆ ಆಶೀರ್ವಾದವನ್ನು ಹೊಂದಿಕೊಳ್ಳಲು ನೀವು ಕರೆಯಲ್ಪಟ್ಟವರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು