19 ನೀವು ತುತೂರಿಯ ಧ್ವನಿಯ ಬಳಿಗಾಗಲಿ ಅಥವಾ ನಿಮ್ಮೊಂದಿಗೆ ಮಾತನಾಡುವ ಸ್ವರದ ಬಳಿಗಾಗಲಿ ಬಂದಿಲ್ಲ. ಜನರು ಆ ಧ್ವನಿಯನ್ನು ಕೇಳಿದಾಗ, ಮತ್ತೊಂದು ಮಾತನ್ನು ತಮಗೆ ಹೇಳಬಾರದೆಂದು ಬೇಡಿಕೊಂಡರು.
ನೀವು ಕೇಳಿದ ಪ್ರಕಾರ ದೇವರು ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವನು. ನೀವು ಹೋರೇಬ್ ಎಂಬ ಸೀನಾಯಿ ಪರ್ವತದಲ್ಲಿ ಒಟ್ಟಾಗಿ ಸೇರಿದಾಗ ದೇವರ ಸ್ವರಕ್ಕೆ ಭಯಪಟ್ಟಿರಿ; ಪರ್ವತದಲ್ಲಿದ್ದ ಬೆಂಕಿಯನ್ನು ನೋಡಿಯೂ ತತ್ತರಿಸಿದಿರಿ. ಆಗ ನೀವು, ‘ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ತಿರುಗಿ ಕೇಳದ ಹಾಗೆ ಮಾಡು. ನಾವು ತಿರುಗಿ ಆ ಮಹಾ ಬೆಂಕಿಯ ಜ್ವಾಲೆಯನ್ನು ನೋಡದ ಹಾಗೆ ಮಾಡು; ಇಲ್ಲವಾದರೆ ನಾವು ಸಾಯುತ್ತೇವೆ!’ ಎಂದು ನನ್ನನ್ನು ಕೇಳಿಕೊಂಡಿರಿ.
ಇದಕ್ಕೆ ಕೇವಲ ಒಂದು ಕ್ಷಣಕಾಲ ಸಾಕು. ರೆಪ್ಪೆಬಡಿಯುವಷ್ಟು ವೇಗವಾಗಿ ನಾವು ಮಾರ್ಪಾಟಾಗುವೆವು. ಕಡೇ ತುತ್ತೂರಿಯನ್ನು ಊದಿದಾಗ ಇದು ಸಂಭವಿಸುವುದು. ತುತ್ತೂರಿಯನ್ನು ಊದಲಾಗುವುದು; ಆಗ ಸತ್ತುಹೋಗಿದ್ದ ವಿಶ್ವಾಸಿಗಳು ಸದಾಕಾಲ ಜೀವಿಸುವುದಕ್ಕಾಗಿ ಎಬ್ಬಿಸಲ್ಪಡುವರು ಮತ್ತು ನಾವು ಮಾರ್ಪಾಟಾಗುವೆವು.
ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.
ದೇವರು ಮಾತನಾಡುವಾಗ ಆಲಿಸದೆ ಇರಬೇಡಿ. ಆತನು ಇಸ್ರೇಲರಿಗೆ ಈ ಲೋಕದಲ್ಲಿ ಎಚ್ಚರಿಕೆ ನೀಡಿದಾಗ, ಅವರು ಆತನ ಮಾತನ್ನು ಕೇಳಲಿಲ್ಲ. ಆದರೆ ಅವರು ತಪ್ಪಿಸಿಕೊಳ್ಳಲಾಗಲಿಲ್ಲ. ಈಗ ದೇವರು ಪರಲೋಕದಿಂದ ಮಾತಾಡುತ್ತಿದ್ದಾನೆ. ಆತನ ಮಾತನ್ನು ಆಲಿಸದ ಜನರು ಹೇಗೆ ತಪ್ಪಿಸಿಕೊಳ್ಳಲಾದೀತು?