ಇಬ್ರಿಯರಿಗೆ 12:2 - ಪರಿಶುದ್ದ ಬೈಬಲ್2 ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಜೆಜುಚ್ಯಾ ಸಾರ್ಕೆ ಅಮಿ ಚಲುಚೆ ಅಮ್ಚ್ಯಾ ವಿಶ್ವಾಸಾಚ್ಯಾ ವರ್ತಿ ಅನಿ ಫುರಾ ಕರ್ತಲೊ ವಾಡ್ವುನ್ ದಿತಲೊ ತೊ ತೆಚಾ ವರ್ತಿ ಥವಲ್ಲಿ ಕುಶಿ ಸಾಟ್ನಿ ಮರ್ಯಾದಿಕ್ ಬಗಿನಸ್ತಾನಾ ಕುರ್ಸಾಚೆ ಮರಾನ್ ತಾಳುನ್ ಘೆಟ್ಲ್ಯಾನ್, ಅತ್ತಾ ತೊ ದೆವಾಚ್ಯಾ ಸಿವಾಸನಾಚ್ಯಾ ಉಜ್ವ್ಯಾಕ್ಡೆ ಬಸಲ್ಲೊ ರ್‍ಹಾತಾ. ಅಧ್ಯಾಯವನ್ನು ನೋಡಿ |
ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.
ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.