ಇಬ್ರಿಯರಿಗೆ 12:22 - ಪರಿಶುದ್ದ ಬೈಬಲ್22 ಆದರೆ ನೀವು ಅಂಥ ಸ್ಥಳಕ್ಕೆ ಬಂದಿಲ್ಲ. ನೀವು ಬಂದಿರುವ ಹೊಸ ಸ್ಥಳ ಚೀಯೋನ್ ಬೆಟ್ಟ, ಜೀವಸ್ವರೂಪನಾದ ದೇವರು ವಾಸವಾಗಿರುವ ಪರಲೋಕದ ಜೆರುಸಲೇಮಿಗೂ ಸಹಸ್ರಾರು ದೇವದೂತರು ಸಂತೋಷದಿಂದ ಒಟ್ಟುಗೂಡಿರುವ ಸ್ಥಳಕ್ಕೂ ಬಂದಿರುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇವಿುಗೂ ಉತ್ಸವಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಖರೆ ತುಮಿ ಸಿಯೊನ್ ಮಡ್ದಿಕ್, ಝಿತ್ತೊ ದೆವ್ ರಾತಲ್ಯಾ ಶಾರಾತ್ ಸರ್ಗಾಚ್ಯಾ ಜೆರುಜಲೆಮಾಕ್ ಯೆಲ್ಲ್ಯಾಸಿ, ತುಮಿ ಹಜಾರಾನಿ ಹಜಾರ್ ದೆವ್‍ದುತಾ ಖುಶಿ ಕರ್ತಾಲ್ಯಾ ಜಾಗ್ಯಾರ್ ಯೆಲ್ಯಾಸಿ. ಅಧ್ಯಾಯವನ್ನು ನೋಡಿ |
ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.
ನಂತರ ಬೇರೊಬ್ಬ ದೇವದೂತನು ಪೂರ್ವದಿಕ್ಕಿನ ಕಡೆಯಿಂದ ಬರುತ್ತಿರುವುದನ್ನು ನಾನು ನೋಡಿದೆನು. ಜೀವಸ್ವರೂಪನಾದ ದೇವರ ಮುದ್ರೆಯು ಈ ದೇವದೂತನ ಬಳಿಯಿತ್ತು. ಈ ದೇವದೂತನು ನಾಲ್ಕುಮಂದಿ ದೇವದೂತರನ್ನು ಗಟ್ಟಿಯಾದ ಧ್ವನಿಯಲ್ಲಿ ಕರೆದನು. ಭೂಮಿಗೆ ಮತ್ತು ಸಮುದ್ರಕ್ಕೆ ತೊಂದರೆ ಮಾಡುವುದಕ್ಕೆ ಅಧಿಕಾರವನ್ನು ದೇವರು ಈ ನಾಲ್ವರು ದೇವದೂತರಿಗೆ ನೀಡಿದ್ದನು. ಆ ದೇವದೂತನು ಈ ನಾಲ್ವರು ದೇವದೂತರಿಗೆ,
ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.