ಇಬ್ರಿಯರಿಗೆ 12:23 - ಪರಿಶುದ್ದ ಬೈಬಲ್23 ದೇವರ ಚೊಚ್ಚಲು ಮಕ್ಕಳ ಸಭೆಗೆ ನೀವು ಬಂದಿರುವಿರಿ. ಅವರ ಹೆಸರುಗಳನ್ನು ಪರಲೋಕದಲ್ಲಿ ಬರೆಯಲಾಗಿದೆ. ನೀವು ಜನರಿಗೆಲ್ಲ ತೀರ್ಪು ನೀಡುವ ದೇವರ ಬಳಿಗೂ ಪರಿಪೂರ್ಣರನ್ನಾಗಿ ಮಾಡಲ್ಪಟ್ಟ ಒಳ್ಳೆಯ ಜನರ ಆತ್ಮಗಳ ಬಳಿಗೂ ಬಂದಿರುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಪರಲೋಕದಲ್ಲಿ ಹೆಸರು ಬರಸಿಕೊಂಡಿರುವ ಚೊಚ್ಚಲಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಸಿದ್ಧಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಪರಲೋಕದಲ್ಲಿ ಹೆಸರು ದಾಖಲಾಗಿರುವ ಮಂಡಳಿಗೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೂ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಪರಿಪೂರ್ಣವಾಗಿರುವ ನೀತಿವಂತರ ಆತ್ಮಗಳ ಬಳಿಗೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತುಮಿ ಪೈಲೆ ಉಪಾಜಲ್ಲ್ಯಾ ದೆವಾಚ್ಯಾ ಲೊಕಾಚ್ಯಾ ತಾಂಡ್ಯಾಕ್ ಸರ್‍ಗಾ ವರ್ತಿ ತೆಂಚಿ ನಾವಾ ಲಿವಲ್ಲಿ ಹಾತ್, ತುಮಿ ದೆವಾಕ್ಡೆ ಯೆಲ್ಯಾಸಿ, ತೊ ಸಗ್ಳ್ಯಾಂಚಿ ನ್ಯಾಯ್ ಕರ್ನಾರೊ, ನಿತಿವಂತಾಂಚೆ ಆತ್ಮೆ ಸಂಪುರ್ನ್ ಕರ್ತಲ್ಯಾಂಚ್ಯಾ ಇದ್ರಾಕ್ ಇಬೆ ಹಾಸಿ, ಅಧ್ಯಾಯವನ್ನು ನೋಡಿ |
ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.
ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.