ಇಬ್ರಿಯರಿಗೆ 12:24 - ಪರಿಶುದ್ದ ಬೈಬಲ್24 ದೇವರಿಂದ ಹೊಸ ಒಡಂಬಡಿಕೆಯನ್ನು ತಂದಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮ ಸಂಗತಿಗಳನ್ನು ನಮಗೆ ತಿಳಿಸುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕ್ಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾರಕ್ತದ ಬಳಿಗೆ ನೀವು ಬಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ, ಪ್ರೋಕ್ಷಿಸಿದ ರಕ್ತದ ಬಳಿಗೂ ಬಂದಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ನ್ಹವ್ಯಾ ಕರಾರಾಚೊ ಮಧ್ಯಸ್ತ್ ಜೆಜುಕ್ಡೆ ಅನಿ ಅಬೆಲಾಚ್ಯಾ ರಗ್ತಾಚ್ಯಾನ್ಕಿ ಜಾಸ್ತಿ ಅರ್ಥಾಚ್ಯಾ ಸಿಪಡಲ್ಲ್ಯಾ ರಗ್ತಾಕ್ಡೆ ತುಮಿ ಯೆಲ್ಲ್ಯಾಸಿ. ಅಧ್ಯಾಯವನ್ನು ನೋಡಿ |
ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.
ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.