Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:25 - ಪರಿಶುದ್ದ ಬೈಬಲ್‌

25 ದೇವರು ಮಾತನಾಡುವಾಗ ಆಲಿಸದೆ ಇರಬೇಡಿ. ಆತನು ಇಸ್ರೇಲರಿಗೆ ಈ ಲೋಕದಲ್ಲಿ ಎಚ್ಚರಿಕೆ ನೀಡಿದಾಗ, ಅವರು ಆತನ ಮಾತನ್ನು ಕೇಳಲಿಲ್ಲ. ಆದರೆ ಅವರು ತಪ್ಪಿಸಿಕೊಳ್ಳಲಾಗಲಿಲ್ಲ. ಈಗ ದೇವರು ಪರಲೋಕದಿಂದ ಮಾತಾಡುತ್ತಿದ್ದಾನೆ. ಆತನ ಮಾತನ್ನು ಆಲಿಸದ ಜನರು ಹೇಗೆ ತಪ್ಪಿಸಿಕೊಳ್ಳಲಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೀವು ಮಾತಾಡುತ್ತಿರುವಾತನ ಮಾತನ್ನು ಕೇಳಲೊಲ್ಲೆವೆಂದು ಹೇಳಬಾರದು. ಭೂವಿುಯ ಮೇಲೆ ದೈವೋಕ್ತಿಗಳನ್ನಾಡಿದವನಿಗೆ ಕಿವಿಗೊಡ ಮನಸ್ಸಿಲ್ಲದೆ ಇದ್ದ ಇಸ್ರಾಯೇಲ್ಯರು ದಂಡನೆಗೆ ತಪ್ಪಿಸಿಕೊಳ್ಳದಿದ್ದರೆ ಪರಲೋಕದಿಂದ ಮಾತಾಡುವವನಿಗೆ ನಾವು ಕಿವಿಗೊಡ ಮನಸ್ಸಿಲ್ಲದೆ ತೊಲಗಿದರೆ ಹೇಗೆ ತಪ್ಪಿಸಿಕೊಂಡೇವು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಹುರ್ಶಾಕಿನ್ ರ್‍ಹಾವಾ ತುಮ್ಚಾಕ್ಡೆ ಬೊಲ್ತಲ್ಯಾಕ್ ಆಯ್ಕುನ್ ಇನ್‍ಕಾರ್ ಕರುಚೆ ನ್ಹಯ್, ದೆವಾಚ್ಯಾ ನಾವಾನ್ ಜಗಾತ್ ಬೊಲ್ತಲ್ಯಾಕ್ ಆಯ್ಕುಕ್ ಇನ್‍ಕಾರ್ ಕರಲ್ಲ್ಯಾ ಇಸ್ರಾಯೆಲ್ ಕಾರಾಕ್ನಿ ತೆನಿ ಕರಲ್ಲ್ಯಾಚಿ ಶಿಕ್ಷಾ ಚುಕುಕ್ ನಾ, ತಸೆ ರ್‍ಹಾಲ್ಯಾರ್ ಸರ್ಗಾವೈನಾ ಬೊಲ್ತಲ್ಯಾಕ್ ಅಮಿ ಆಯ್ಕುಕ್ ಇನ್‍ಕಾರ್ ಕರ್‍ಲಾಂವ್ ತರ್ ಕವ್ಡಿ ಮೊಟ್ಟಿ ಶಿಕ್ಷಾ ಗಾವ್ತಾ ಅಸಿಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:25
36 ತಿಳಿವುಗಳ ಹೋಲಿಕೆ  

ಈ ಯಾಜಕರು ಮಾಡುವ ಕಾರ್ಯಗಳು ಪರಲೋಕದಲ್ಲಿನ ಕಾರ್ಯಗಳ ನಿಜವಾದ ಪ್ರತಿರೂಪಗಳೂ ಛಾಯೆಗಳೂ ಆಗಿವೆ. ಮೋಶೆಯು ದೇವದರ್ಶನ ಗುಡಾರವನ್ನು ನಿರ್ಮಿಸಲು ಸಿದ್ಧನಾದಾಗ ದೇವರು ಅವನಿಗೆ, “ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಎಚ್ಚರಿಕೆಯಿಂದ ನಿರ್ಮಿಸಬೇಕು” ಎಂದು ಹೇಳಿದ್ದು ಈ ಕಾರಣದಿಂದಲೇ.


ಕಣ್ಣಿಗೆ ಇನ್ನೂ ಕಾಣದಿದ್ದ ಸಂಗತಿಗಳ ಬಗ್ಗೆ ದೇವರು ನೋಹನನ್ನು ಎಚ್ಚರಿಸಿದನು. ನೋಹನು ದೇವರಲ್ಲಿ ನಂಬಿಕೆಯಿಟ್ಟಿದ್ದನು ಮತ್ತು ಭಕ್ತಿಯುಳ್ಳವನಾಗಿದ್ದನು. ಆದ್ದರಿಂದ ಅವನು ತನ್ನ ಕುಟುಂಬ ರಕ್ಷಣೆಗಾಗಿ ದೊಡ್ಡ ನಾವೆಯನ್ನು ಕಟ್ಟಿ, ಈ ಲೋಕದ ತಪ್ಪನ್ನು ತೋರ್ಪಡಿಸಿದನು. ಹೀಗೆ, ನಂಬಿಕೆಯ ಮೂಲಕ ನೀತಿವಂತರಾದ ಜನರಲ್ಲಿ ಅವನೂ ಒಬ್ಬನಾದನು.


ಆದರೆ ಆ ಜನರು ಈ ಮಾತುಗಳನ್ನು ಕೇಳಲಿಲ್ಲ. ಆತನು ಹೇಳಿದ ಹಾಗೆ ನಡೆಯಲಿಲ್ಲ. ದೇವರು ಹೇಳುವುದು ತಮಗೆ ಕೇಳದಂತೆ ತಮ್ಮ ಕಿವಿಗಳನ್ನು ಮುಚ್ಚಿಕೊಂಡರು.


ಶಿಕ್ಷೆಯನ್ನು ಕಡೆಗಣಿಸುವವನು ಬಡವನಾಗುವನು; ಅವಮಾನ ಹೊಂದುವನು. ತಿದ್ದುಪಡಿಯನ್ನು ಸ್ವೀಕರಿಸಿಕೊಳ್ಳುವವನು ಗೌರವವನ್ನೂ ಐಶ್ವರ್ಯವನ್ನೂ ಪಡೆದುಕೊಳ್ಳುವನು.


ಆದರೆ ನೀವು ಯೆಹೋವನಿಗೆ ವಿಮುಖರಾಗಿ ಆತನಿಗೆ ಕಿವಿಗೊಡದೆ ಹೋದರೆ, ಬೇರೆ ದೇವರುಗಳನ್ನು ಆರಾಧಿಸಲು ಮತ್ತು ಸೇವೆಮಾಡಲು ಹೋದರೆ,


ಆಗ ಯೆಹೋವನು ಈ ಸಂಗತಿಗಳನ್ನು ಇಸ್ರೇಲರಿಗೆ ತಿಳಿಸಲು ಮೋಶೆಗೆ ಆಜ್ಞಾಪಿಸಿದನು: “ನಾನು ಪರಲೋಕದಿಂದ ನಿಮ್ಮ ಸಂಗಡ ಮಾತಾಡಿದ್ದನ್ನು ನೀವು ನೋಡಿದ್ದೀರಿ.


ಯೇಸು ಅವನಿಗೆ, “ಇದು ಹೇಗಾಯಿತೆಂಬುದನ್ನು ಯಾರಿಗೂ ಹೇಳಬೇಡ. ಈಗ ನೀನು ಹೋಗಿ ಯಾಜಕನಿಗೆ ನಿನ್ನ ಮೈಯನ್ನು ತೋರಿಸು. ಗುಣಹೊಂದಿದವರು ಮೋಶೆಯ ಆಜ್ಞೆಗನುಸಾರವಾಗಿ ಕೊಡತಕ್ಕ ಕಾಣಿಕೆಯನ್ನು ಅರ್ಪಿಸು. ನೀನು ಗುಣವಾದದ್ದಕ್ಕೆ ಅದು ಸಾಕ್ಷಿಯಾಗಿರುವುದು” ಎಂದು ಹೇಳಿದನು.


ನನ್ನ ಉಪದೇಶಗಳನ್ನು ಕೇಳಿ ಜ್ಞಾನವಂತರಾಗಿರಿ. ಕಿವಿಗೊಡದಿರಬೇಡಿ!


“ಮೂಢರು ಜ್ಞಾನವನ್ನು ತಿರಸ್ಕರಿಸುವುದರಿಂದ ಸಾವಿಗೀಡಾಗುವರು; ಅವರ ಉದಾಸೀನತೆಯೇ ಅವರನ್ನು ನಾಶಪಡಿಸುವುದು.


“ಆದರೆ ನೀವು ನನಗೆ ಗಮನಕೊಡಲಿಲ್ಲ. ನಾನು ಸಹಾಯಮಾಡಲು ಪ್ರಯತ್ನಿಸಿದೆ. ನಾನು ಕೈಚಾಚಿದೆ; ಆದರೆ ನೀವು ನನ್ನ ಸಹಾಯವನ್ನು ತೆಗೆದುಕೊಳ್ಳದೆ ತಿರಸ್ಕರಿಸಿದಿರಿ.


“ಆದರೆ ನಾನು ಕೊಟ್ಟ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ನೀನು ಮೀರಿ ಇತರ ದೇವರುಗಳನ್ನು ಪೂಜಿಸಿದರೆ,


ಇಸ್ರೇಲಿನ ಜನರೆಲ್ಲರೂ ಹೊಸರಾಜನು ತಮ್ಮ ಮಾತಿಗೆ ಕಿವಿಗೊಡಲಿಲ್ಲವೆಂಬುದನ್ನು ನೋಡಿದರು. ಆದ್ದರಿಂದ ಜನರೆಲ್ಲರೂ ರಾಜನಿಗೆ, “ದಾವೀದನ ಕುಟುಂಬದಲ್ಲಿ ನಾವೆಲ್ಲರೂ ಭಾಗಿಗಳೇ? ಇಲ್ಲ! ಇಷಯನ ಭೂಮಿಯಲ್ಲಿ ನಮಗೇನಾದರೂ ಪಾಲು ಸಿಕ್ಕುತ್ತದೆಯೇ? ಇಲ್ಲ! ಇಸ್ರೇಲರೇ, ನಮ್ಮ ಮನೆಗಳಿಗೆ ನಾವು ಹೋಗೋಣ ನಡೆಯಿರಿ. ದಾವೀದನ ಮಗನು ತನ್ನ ಜನರನ್ನು ತಾನೇ ಆಳಲಿ!” ಎಂದು ಹೇಳಿದರು. ಇಸ್ರೇಲಿನ ಜನರೆಲ್ಲರೂ ಮನೆಗಳಿಗೆ ಹೋದರು.


“ಇಸ್ರೇಲರೆಲ್ಲರೂ ನಿಮ್ಮನ್ನು ಕೇಳುವುದೇನೆಂದರೆ, ‘ಇಸ್ರೇಲಿನ ದೇವರ ವಿರುದ್ಧವಾಗಿ ನೀವು ಹೀಗೆ ಮಾಡಿದ್ದೇಕೆ? ನೀವು ಯೆಹೋವನ ವಿರುದ್ಧವಾಗಿ ತಿರುಗಿದ್ದೇಕೆ? ನಿಮಗಾಗಿ ಯಜ್ಞವೇದಿಕೆಯನ್ನು ಕಟ್ಟಿಕೊಂಡದ್ದೇಕೆ? ಇದು ದೇವರ ಉಪದೇಶಗಳಿಗೆ ವಿರುದ್ಧವಾಗಿದೆ ಎಂಬುದನ್ನು ನೀವು ಬಲ್ಲಿರಿ.


ನೀವು ಆತನನ್ನು ಹಿಂಬಾಲಿಸದೆ ಹೋದರೆ, ಆತನು ಇಸ್ರೇಲರನ್ನು ಮರುಭೂಮಿಯಲ್ಲಿ ಇನ್ನೂ ಹೆಚ್ಚು ಕಾಲ ಬಿಟ್ಟುಬಿಡುವನು. ಈ ಜನರೆಲ್ಲರ ನಾಶನಕ್ಕೆ ನೀವೇ ಕಾರಣರಾಗುವಿರಿ” ಎಂದು ಹೇಳಿದನು.


ನೋಡಿರಿ, ಯೆಹೋವನು ಸಬ್ಬತ್ ದಿನವನ್ನು ನಿಮಗೆ ವಿಶ್ರಾಂತಿ ದಿನವನ್ನಾಗಿ ಮಾಡಿದ್ದಾನೆ. ಆದ್ದರಿಂದ ಯೆಹೋವನು ಶುಕ್ರವಾರದಂದು ನಿಮಗೆ ಎರಡು ದಿನಗಳಿಗೆ ಬೇಕಾದಷ್ಟು ಆಹಾರವನ್ನು ಕೊಡುವನು. ಆದ್ದರಿಂದ ಸಬ್ಬತ್ತಿನಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ಕುಳಿತುಕೊಂಡು ವಿಶ್ರಮಿಸಿಕೊಳ್ಳಬೇಕು. ನೀವು ಇರುವಲ್ಲೇ ಇರಿ” ಎಂದು ಹೇಳಿದನು.


ಜನರು ಸತ್ಯವನ್ನು ಕೇಳದೆ ಸುಳ್ಳುಕಥೆಗಳನ್ನು ಕೇಳಲಾರಂಭಿಸುತ್ತಾರೆ.


ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ; ಒಬ್ಬರಿಗೊಬ್ಬರಿಗೆ ಮತ್ತು ಎಲ್ಲರಿಗೆ ಯಾವಾಗಲೂ ಒಳ್ಳೆಯದನ್ನು ಮಾಡಲು ಪ್ರಯತ್ನಿಸಿರಿ.


“ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.


ಜೆರುಸಲೇಮಿನ ನಿವಾಸಿಗಳು ನನ್ನ ಆಜ್ಞೆಗಳಿಗೆ ದಂಗೆ ಎದ್ದಿದ್ದಾರೆ. ಅವರು ಇತರ ಜನಾಂಗಗಳಿಗಿಂತ ಕೆಟ್ಟವರು. ಅವರು ತಮ್ಮ ಸುತ್ತಲಿರುವ ಬೇರೆ ದೇಶಗಳಿಗಿಂತ ಹೆಚ್ಚಾಗಿ ನನ್ನ ಕಟ್ಟಳೆಗಳನ್ನು ಉಲ್ಲಂಬಿಸಿದ್ದಾರೆ. ಅವರು ನನ್ನ ಆಜ್ಞೆಗಳನ್ನು ತಿರಸ್ಕರಿಸಿದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ.”


ಅವರು ತಮ್ಮ ಪೂರ್ವಿಕರು ಮಾಡಿದ ಪಾಪಗಳನ್ನೇ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನ ಸಂದೇಶವನ್ನು ಕೇಳಲು ಒಪ್ಪಲಿಲ್ಲ. ಅವರು ಬೇರೆ ದೇವರುಗಳನ್ನು ಅನುಸರಿಸಿ ಪೂಜಿಸಿದರು. ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಯೆಹೂದ ಮತ್ತು ಇಸ್ರೇಲ್ ವಂಶದವರು ಮೀರಿದ್ದಾರೆ.”


ಯೆಹೋವನೇ, ನಮ್ಮ ಮೇಲೆ ಸಿಟ್ಟಿನಿಂದಲೇ ಇರಬೇಡ. ನಮ್ಮ ಪಾಪಗಳನ್ನು ನಿನ್ನ ನೆನಪಿನಲ್ಲಿಟ್ಟುಕೊಂಡೇ ಇರಬೇಡ. ದಯಮಾಡಿ ನಮ್ಮ ಕಡೆಗೆ ನೋಡು. ನಾವು ನಿನ್ನ ಜನರೇ.


“ನಡೆದದ್ದನ್ನು ನೀವು ಕಣ್ಣಾರೆ ನೋಡಿದಿರಿ; ಕಿವಿಯಾರೆ ಕೇಳಿದಿರಿ. ಆದ್ದರಿಂದ ನೀವು ಇತರರಿಗೆ ಸುದ್ದಿಯನ್ನು ತಿಳಿಸಬೇಕು. ನೀವು ಈವರೆಗೆ ತಿಳಿಯದಿರುವ ಗುಪ್ತವಿಷಯಗಳನ್ನು ಈಗ ನಿಮಗೆ ತಿಳಿಸುವೆನು.


ಶಿಕ್ಷೆಯನ್ನು ಒಪ್ಪದವನು ತನಗೇ ಕೇಡುಮಾಡಿಕೊಳ್ಳುತ್ತಾನೆ. ಗದರಿಕೆಯನ್ನು ಕೇಳುವವನು ತಿಳುವಳಿಕೆಯನ್ನು ಪಡೆದುಕೊಳ್ಳುವನು.


ನಲವತ್ತು ವರ್ಷಗಳ ಕಾಲ ದೇವರು ಯಾರ ಮೇಲೆ ಕೋಪಗೊಂಡಿದ್ದನು? ಪಾಪವನ್ನು ಮಾಡಿದವರ ಮೇಲಲ್ಲವೇ? ಅವರೆಲ್ಲರೂ ಮರುಭೂಮಿಯಲ್ಲಿ ಸತ್ತುಹೋದರು.


ಪೇತ್ರನು ಮಾತಾಡುತ್ತಿರುವಾಗಲೇ ಪ್ರಕಾಶಮಾನವಾದ ಒಂದು ಮೋಡವು ಅವರ ಮೇಲೆ ಕವಿಯಿತು ಮತ್ತು ಆ ಮೋಡದೊಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ನಾನು ಈತನನ್ನು ಬಹಳ ಮೆಚ್ಚಿಕೊಂಡಿದ್ದೇನೆ. ಈತನಿಗೆ ವಿಧೇಯರಾಗಿರಿ!” ಎಂದು ಹೇಳಿತು.


ಆದರೆ ಆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ನಾನು ನಿನ್ನಂತೆ, ಈ ಪುಸ್ತಕದಲ್ಲಿರುವ ವಾಕ್ಯಗಳಿಗೆ ವಿಧೇಯರಾಗಿರುವ ಎಲ್ಲ ಜನರಂತೆ ಮತ್ತು ನಿನ್ನ ಸಹೋದರರಾದ ಪ್ರವಾದಿಗಳಂತೆ ಒಬ್ಬ ಸೇವಕನು. ನೀನು ದೇವರನ್ನು ಆರಾಧಿಸಬೇಕು!” ಎಂದು ಹೇಳಿದನು.


ಆಗ ನಾನು ದೇವದೂತನನ್ನು ಆರಾಧಿಸಲು ಅವನ ಪಾದದ ಮುಂದೆ ಅಡ್ಡಬಿದ್ದೆನು. ಆದರೆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ಯೇಸುವಿನ ಸತ್ಯವನ್ನು ಹೊಂದಿರುವ ನಿನ್ನಂತೆಯೂ ನಿನ್ನ ಸಹೋದರರಂತೆಯೂ ನಾನು ಒಬ್ಬ ಸೇವಕನಾಗಿದ್ದೇನೆ. ಆದ್ದರಿಂದ ದೇವರನ್ನು ಆರಾಧಿಸು! ಏಕೆಂದರೆ ಯೇಸುವಿನ ಸತ್ಯವೇ ಪ್ರವಾದನೆಯ ಸಾಕ್ಷಿಯಾಗಿದೆ” ಎಂದು ಹೇಳಿದನು.


ನೀವು ಸತ್ಯಕ್ಕೆ ವಿಧೇಯರಾಗಿರುವುದರ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡಿಕೊಂಡಿದ್ದೀರಿ. ಈಗ ನಿಮ್ಮ ಸಹೋದರ ಸಹೋದರಿಯರನ್ನು ನಿಜವಾಗಿಯೂ ಪ್ರೀತಿಸಬಲ್ಲವರಾಗಿದ್ದೀರಿ. ಆದ್ದರಿಂದ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿ ಪ್ರೀತಿಸಿರಿ.


ಆಕಾಶದಿಂದ ಆತನ ಮಾತುಗಳನ್ನು ನೀವು ಕೇಳುವಂತೆ ಮಾಡಿದನು; ಭೂಮಿಯ ಮೇಲೆ ಒಂದು ದೊಡ್ಡ ಬೆಂಕಿಯನ್ನು ನೋಡುವಂತೆ ಮಾಡಿದನು; ಮತ್ತು ಅದರೊಳಗಿಂದ ನಿಮ್ಮೊಡನೆ ಮಾತನಾಡಿದನು. ನಿಮಗೆ ಪಾಠಗಳನ್ನು ಕಲಿಸುವುದಕ್ಕಾಗಿ ಇವೆಲ್ಲವನ್ನು ಮಾಡಿದನು.


ಈ ಪ್ರವಾದಿಯು ನನ್ನ ಪ್ರತಿನಿಧಿಯಾಗಿ ಮಾತನಾಡುವನು. ಅವನು ಮಾತಾಡುವಾಗ ಯಾವನಾದರೂ ನನ್ನ ಆಜ್ಞೆಗಳನ್ನು ಕೇಳದೆಹೋದರೆ ನಾನು ಅವನನ್ನು ಶಿಕ್ಷಿಸುವೆನು.’


ಪೂರ್ವಕಾಲದಲ್ಲಿ ದೇವರು ಪ್ರವಾದಿಗಳ ಮೂಲಕ ನಮ್ಮ ಜನರೊಂದಿಗೆ ಹಲವಾರು ವಿಧದಲ್ಲಿ ಅನೇಕ ಸಲ ಮಾತನಾಡಿದನು.


ಆದ್ದರಿಂದ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಯಾರೂ ಕೆಟ್ಟಬುದ್ಧಿಯುಳ್ಳವರಾಗದಂತೆ, ನಂಬದವರಾಗದಂತೆ, ಜೀವಸ್ವರೂಪನಾದ ದೇವರನ್ನು ತೊರೆಯದಂತೆ ಎಚ್ಚರಿಕೆಯಿಂದಿರಿ.


ನೀವು ತುತೂರಿಯ ಧ್ವನಿಯ ಬಳಿಗಾಗಲಿ ಅಥವಾ ನಿಮ್ಮೊಂದಿಗೆ ಮಾತನಾಡುವ ಸ್ವರದ ಬಳಿಗಾಗಲಿ ಬಂದಿಲ್ಲ. ಜನರು ಆ ಧ್ವನಿಯನ್ನು ಕೇಳಿದಾಗ, ಮತ್ತೊಂದು ಮಾತನ್ನು ತಮಗೆ ಹೇಳಬಾರದೆಂದು ಬೇಡಿಕೊಂಡರು.


ಈ ಹತ್ತು ಮಂದಿ ಗಿಲ್ಯಾದಿಗೆ ಹೋಗಿ ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಜೊತೆಗೆ ಮಾತನಾಡಿ ಹೀಗೆಂದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು