ಇಬ್ರಿಯರಿಗೆ 12:5 - ಪರಿಶುದ್ದ ಬೈಬಲ್5 ನೀವು ದೇವರ ಮಕ್ಕಳಾಗಿದ್ದೀರಿ. ಆತನು ನಿಮಗೆ ನೆಮ್ಮದಿಯ ಮಾತುಗಳನ್ನು ನುಡಿಯುತ್ತಾನೆ. ನೀವು ಆ ಮಾತುಗಳನ್ನು ಮರೆತಿರುವಿರಿ: “ಮಗನೇ, ಪ್ರಭುವಿನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಪ್ರಭುವು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ, “ನನ್ನ ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮಕ್ಕಳಿಗೆ ಹೇಳುವಂತೆ ದೇವರು ನಿಮಗೆ ಹೇಳಿರುವ ಎಚ್ಚರಿಕೆಯ ಮಾತನ್ನು ನೀವು ಮರೆತುಬಿಟ್ಟಿರೋ? “ಸುಕುಮಾರಾ, ಸರ್ವೇಶ್ವರ ಕೊಡುವ ಶಿಕ್ಷೆಯನ್ನು ತಾತ್ಸಾರ ಮಾಡದಿರು ಅವರು ನಿನ್ನನ್ನು ದಂಡಿಸುವಾಗ ಧೈರ್ಯಗೆಡದಿರು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ - ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಒಬ್ಬ ತಂದೆ ಮಕ್ಕಳಾಗಿರುವ ನಿಮಗೆ ಎಚ್ಚರಿಸಲಾದ ಮಾತನ್ನು ನೀವು ಮರೆತಿದ್ದೀರಿ. ಅದು, “ನನ್ನ ಮಗನೇ, ಕರ್ತದೇವರ ಶಿಕ್ಷೆಯನ್ನು ಹಗುರವಾಗಿ ಎಣಿಸಬೇಡ. ಅವರು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ದೆವಾಚಿ ಪೊರಾ ತುಮಿ ಹೊಲ್ಯಾಶಿ, ತೊ ಸುಖಾಚೆ ಬೊಲ್ನೆ ಬೊಲ್ತಾ, ತಿ ಗೊಸ್ಟಿಯಾ ಸಗ್ಳಿ ಇಸರ್ತ್ಯಾಶಿ. ತೆಕಾ ಧನಿಯಾಚಿ ಶಿಕ್ಷಾ ತಿರಸ್ಕಾರ್ ಕರುನಕ್ಕೊ, ಧನಿ ತುಮ್ಕಾ ಗಾಳಿಯಾ ದಿತಾನಾ ಬೆಜಾರ್ ಕರುನಕ್ಕೊ. ಅಧ್ಯಾಯವನ್ನು ನೋಡಿ |
“ಎಫ್ರಾಯೀಮ್ ಅಳುವುದನ್ನು ನಾನು ಕೇಳಿದ್ದೇನೆ. ಎಫ್ರಾಯೀಮು ಹೀಗೆ ಹೇಳುವದನ್ನು ನಾನು ಕೇಳಿದ್ದೇನೆ. ‘ಯೆಹೋವನೇ, ನೀನು ನಿಜವಾಗಿ ನನ್ನನ್ನು ದಂಡಿಸಿದೆ. ನಾನು ಪಾಠವನ್ನು ಕಲಿತೆನು. ನಾನು ತರಬೇತಿ ಹೊಂದದ ಒಂದು ಹೋರಿಯುಂತಿದ್ದೆನು. ನನ್ನನ್ನು ದಂಡಿಸುವದನ್ನು ದಯವಿಟ್ಟು ನಿಲ್ಲಿಸು. ನಾನು ನಿನ್ನಲ್ಲಿಗೆ ಹಿಂದಿರುಗಿ ಬರುತ್ತೇನೆ. ನಿಜವಾಗಿಯೂ ನೀನೇ ನನ್ನ ದೇವರಾದ ಯೆಹೋವನು.