ಇಬ್ರಿಯರಿಗೆ 13:15 - ಪರಿಶುದ್ದ ಬೈಬಲ್15 ಆದ್ದರಿಂದ ಆತನ ಮೂಲಕ ನಾವು ದೇವರಿಗೆ ಯಜ್ಞಗಳನ್ನು ಅರ್ಪಿಸುವುದನ್ನು ನಿಲ್ಲಿಸಬಾರದು. ಆತನೇ ಪ್ರಭುವೆಂದು ನಮ್ಮ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದದರಿಂದ ಆತನ ಮೂಲಕವಾಗಿಯೇ ದೇವರಿಗೆ ಸ್ತೋತ್ರಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಆತನು ಕರ್ತನೆಂದು ಬಾಯಿಂದ ಪ್ರತಿಜ್ಞೆಮಾಡುವದೇ ನಾವು ಅರ್ಪಿಸುವ ಯಜ್ಞವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಅದು ದೇವರ ಹೆಸರಿಗೆ ಸಲ್ಲಿಸುವ ಕೃತಜ್ಞತೆಯೆಂಬ ತುಟಿಗಳ ಫಲವೇ ಆಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತಸೆ ಹೊಲ್ಯಾರ್ ಜೆಜುಚ್ಯಾ ವೈನಾ ದೆವಾಕ್ ಹೊಗ್ಳಾಪ್ ದಿತಲಿ ಬಲಿ ಅಮಿ ಸದ್ದಿಚ್ ಭೆಟ್ವುವಾ, ಹಿಚ್ ತೆಚೆ ನಾವ್ ಒಪ್ಪುನ್ ಘೆಟಲ್ಲ್ಯಾಂಚ್ಯಾ ಹೊಟ್ಟಾಂಚಿ ಉಪ್ಕಾರ್ ಸ್ತುತಿ. ಅಧ್ಯಾಯವನ್ನು ನೋಡಿ |
ಯಾಜಕರು ತಮ್ಮ ಕೆಲಸಗಳನ್ನು ಮಾಡಲು ತಮ್ಮ ತಮ್ಮ ಸ್ಥಳಗಳಲ್ಲಿ ತಯಾರಾಗಿ ನಿಂತಿದ್ದರು. ಲೇವಿಕುಲದ ಗಾಯಕರು ತಮ್ಮ ವಾದ್ಯಗಳೊಂದಿಗೆ ದೇವರನ್ನು ಸ್ತುತಿಸಲು ನಿಂತಿದ್ದರು. ಆ ವಾದ್ಯಗಳನ್ನು ಅರಸನಾದ ದಾವೀದನು ದೇವರನ್ನು ಸ್ತುತಿಸುವದಕ್ಕೋಸ್ಕರ ತಯಾರಿಸಿದ್ದನು. ಯಾಜಕರೂ ಲೇವಿಯರೂ, “ದೇವರಾದ ಯೆಹೋವನ ಕೃಪೆಯು ನಿರಂತರವಾದದ್ದು” ಎಂದು ಹೇಳುತ್ತಿದ್ದರು. ಯಾಜಕರು ಲೇವಿಯರಿಗೆ ಎದುರಾಗಿ ನಿಂತುಕೊಂಡು ತುತ್ತೂರಿಯನ್ನು ಊದಿದರು. ಇಸ್ರೇಲರೆಲ್ಲರೂ ನಿಂತುಕೊಂಡರು.
ಜನರಿಗೆ ತಿಳಿದಿರುವ ಉದಾಹರಣೆಯ ಮೂಲಕ ನಾನು ಇದನ್ನು ನಿಮಗೆ ವಿವರಿಸುತ್ತೇನೆ. ಹಿಂದಿನ ಕಾಲದಲ್ಲಿ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೂ ದುಷ್ಟತ್ವಕ್ಕೂ ಗುಲಾಮರನ್ನಾಗಿ ಒಪ್ಪಿಸಿಕೊಟ್ಟಿದ್ದಿರಿ. ನೀವು ದುಷ್ಟತ್ವಕ್ಕಾಗಿ ಮಾತ್ರ ಜೀವಿಸಿದಿರಿ. ಅದೇ ರೀತಿಯಲ್ಲಿ ಈಗ ನೀವು ನಿಮ್ಮ ದೇಹದ ಅಂಗಗಳನ್ನು ನೀತಿಗೆ ಗುಲಾಮರನ್ನಾಗಿ ಒಪ್ಪಿಸಿಕೊಡಬೇಕು. ಆಗ ನೀವು ದೇವರಿಗಾಗಿ ಮಾತ್ರ ಜೀವಿಸುತ್ತೀರಿ.
ಬಳಿಕ ಯೇಸು ಪವಿತ್ರಾತ್ಮನ ಮೂಲಕ ಬಹಳ ಸಂತೋಷಗೊಂಡು ಹೀಗೆ ಪ್ರಾರ್ಥಿಸಿದನು: “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಾನು ನಿನ್ನನ್ನು ಸ್ತುತಿಸುತ್ತೇನೆ. ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಸಂಗತಿಗಳನ್ನು ಮರೆಮಾಡಿದ್ದಕ್ಕಾಗಿ ನಾನು ನಿನ್ನನ್ನು ಸ್ತುತಿಸುತ್ತೇನೆ. ಆದರೆ ನೀನು ಚಿಕ್ಕಮಕ್ಕಳಂತಿರುವ ಜನರಿಗೆ ಈ ಸಂಗತಿಗಳನ್ನು ಪ್ರಕಟಮಾಡಿದೆ. ಹೌದು, ತಂದೆಯೇ, ಅದೇ ನಿನ್ನ ಅಪೇಕ್ಷೆಯಾಗಿತ್ತು.
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.