ಇಬ್ರಿಯರಿಗೆ 13:18 - ಪರಿಶುದ್ದ ಬೈಬಲ್18 ನಮಗೋಸ್ಕರ ಪ್ರಾರ್ಥಿಸುವುದನ್ನು ಮುಂದುವರಿಸಿರಿ. ನಾವು ಯಾವಾಗಲೂ ಉತ್ತಮ ಕಾರ್ಯಗಳನ್ನು ಮಾಡಲು ಪ್ರಯತ್ನಿಸುವುದರಿಂದ, ನಮ್ಮ ಹೃದಯಗಳು ಶುದ್ಧವಾಗಿವೆ ಎಂಬ ನಂಬಿಕೆ ನಮಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಮಗಾಗಿಯೂ ಪ್ರಾರ್ಥಿಸಿರಿ. ಎಲ್ಲಾ ವಿಷಯಗಳಲ್ಲಿ ನಾವು ಸಜ್ಜನರಾಗಿ ನಡೆದುಕೊಳ್ಳಬೇಕೆಂಬುದೇ ನಮ್ಮ ಅಪೇಕ್ಷೆ. ನಮ್ಮ ಮನಸ್ಸಾಕ್ಷಿ ಶುದ್ಧವಾಗಿದೆಯೆಂಬ ದೃಢನಂಬಿಕೆ ನಮಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಮನಸ್ಸಿನಿಂದ ಒಳ್ಳೇ ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಶುದ್ಧಮನಸ್ಸಾಕ್ಷಿಯಿಂದ ಪ್ರತಿಯೊಂದರಲ್ಲಿಯೂ ಪ್ರಾಮಾಣಿಕವಾಗಿ ಇರಲು ಬಯಸುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಅಮ್ಚ್ಯಾಸಾಟ್ನಿ ಕನ್ನಾಬಿ ಮಾಗ್ನೆ ಕರುಂಗೆತ್ ರ್‍ಹಾವಾ ಸಗ್ಳ್ಯಾ ಸಂಗ್ತಿಯಾತ್ನಿ, ಅನಿ ಪರಿಸ್ಥಿತಿತ್ನಿ ಖಲೆ ಬರೆ ಹಾಯ್ ತೆ ಎವ್ಡೆಚ್ ಕರುಚೆ ಮನ್ತಲಿ ಅಮ್ಚಿ ಆಶಾ. ತಸೆ ಮನುನ್ ಅಮ್ಚೊ ಭುತ್ತುರ್ಲೊ ಮನ್ ನಿತಳ್ ಹಾಯ್ ಮನುನ್ ಅಮ್ಕಾ ಖಾತ್ರಿ ಹಾಯ್. ಅಧ್ಯಾಯವನ್ನು ನೋಡಿ |
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.