ಇಬ್ರಿಯರಿಗೆ 13:4 - ಪರಿಶುದ್ದ ಬೈಬಲ್4 ಮದುವೆಯನ್ನು ಜನರೆಲ್ಲರೂ ಗೌರವಿಸಬೇಕು. ಗಂಡ ಹೆಂಡತಿಯರ ಸಂಬಂಧ ಪರಿಶುದ್ಧವಾಗಿರಬೇಕು. ಲೈಂಗಿಕ ಪಾಪಗಳನ್ನು ಮಾಡುವವರು ಮತ್ತು ವ್ಯಭಿಚಾರವನ್ನು ಮಾಡುವವರು ದೇವರ ತೀರ್ಪಿಗೆ ಒಳಗಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಗಂಡಹೆಂಡರ ಸಂಬಂಧವು ನಿಷ್ಕಳಂಕವಾಗಿರಬೇಕು. ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತುಮ್ಚ್ಯಾ ಮದ್ದಿ ಲಗ್ನಾಚ್ಯಾ ಜಿವನಾಕ್ ಪಾಜೆ ಹೊಲ್ಲೊ ಮಾನ್ ಗಾವುಂದಿತ್ ಅನಿ ಘೊವ್ ಬಾಯ್ಕೊಚ್ಯಾ ಮದ್ಲೊ ವಿಶ್ವಾಸ್ ಕಪಟ್ ನಸಲ್ಲೊ ಹೊವ್ನ್ ರಾಂವ್ದಿತ್; ಕಶ್ಯಾಕ್ ಮಟ್ಲ್ಯಾರ್, ಪೊಜ್ಡೆಪಾನ್ ಅನಿ ವೆಭಿಚಾರ್ ಕರ್‍ತಲ್ಯಾಂಚಿ ದೆವ್ ಝಡ್ತಿ ಕರ್‍ತಾ. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.