ಇಬ್ರಿಯರಿಗೆ 2:14 - ಪರಿಶುದ್ದ ಬೈಬಲ್14 ಆ ಮಕ್ಕಳು ಭೌತಿಕ ಶರೀರ ಹೊಂದಿದ್ದರು. ಆದ್ದರಿಂದ ಯೇಸು ತಾನೇ ಅವರಂತಾದನು. ಆತನು ತನ್ನ ಸಾವಿನ ಮೂಲಕ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಗೊಳಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14-15 ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳಾಗಿರುವದರಿಂದ ಆತನೂ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ಅಡಗಿಸಿಬಿಡುವದಕ್ಕೂ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಪೊರಾ ಸ್ವಾಭಾವಿಕ್ ಮಾನ್ಸಾ ಹೊವ್ನ್ ಹಾತ್, ಅನಿ ಜೆಜುನ್ಬಿ ಮಾನ್ಸಾಚ್ಯಾ ವರ್ತಿ ಪದ್ವಿ ಚಾಲುತಲ್ಯಾ ಗಿರ್‍ಯಾಕ್ ಅಪ್ನಾಚ್ಯಾ ಮರ್‍ನಾಚ್ಯಾ ವೈನಾ ಹಾರ್ವುನ್ ಟಾಕ್ಲ್ಯಾನ್. ಅಧ್ಯಾಯವನ್ನು ನೋಡಿ |
ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.
ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.