ಇಬ್ರಿಯರಿಗೆ 2:17 - ಪರಿಶುದ್ದ ಬೈಬಲ್17 ಈ ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದದರಿಂದ ಆತನು ಎಲ್ಲಾ ವಿಷಯಗಳಲ್ಲಿ ತನ್ನ ಸಹೋದರರಿಗೆ ಸಮಾನನಾಗಬೇಕಾಗಿ ಬಂತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣಮಾಡುವದಕ್ಕಾಗಿ ದೇವರ ಕಾರ್ಯಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾಯಾಜಕನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಅಶೆ ರಾತಾನಾ ಸಗ್ಳ್ಯಾತ್ಬಿ ತೆನಿ ಅಪ್ನಿಚ್ ಅಪ್ನಾಚ್ಯಾ ಭಾವಾಂಚ್ಯಾ ಸಾರ್ಕೆ ಹೊತಲೆ ಪಡ್ಲೆ. ಹೆಚ್ಯಾ ವೈನಾ ಲೊಕಾನಿ ಪಾಪಾಂಚಿ ಮಾಪಿ ಖಮ್ವುನ್ ಘೆವ್‍ಸಾಟ್ನಿ ದೆವಾಚ್ಯಾ ಸೆವೆತ್ ದಯಾ ದಾಕ್ವುತಲೊ ಅನಿ ವಿಶ್ವಾಸಿ ಶ್ರೆಸ್ಟ್ ಯಾಜಕ್ ತೊ ಹೊವ್ಕ್ ಪಾವ್ಲೊ. ಅಧ್ಯಾಯವನ್ನು ನೋಡಿ |
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.
ಆದರೆ ವಿಶೇಷವಾದ ಹಬ್ಬದ ಆಚರಣೆಗಳಿಗಾಗಿ ಅಧಿಪತಿಯು ಕಾಣಿಕೆಗಳನ್ನು ಕೊಡಲೇಬೇಕು. ಅಧಿಪತಿಯು ಪಾಪಪರಿಹಾರಕಯಜ್ಞಗಳನ್ನೂ ಧಾನ್ಯಾರ್ಪಣೆಗಳನ್ನೂ ಪಾನದ್ರವ್ಯಾರ್ಪಣೆಗಳನ್ನೂ ಕೊಡಬೇಕು. ಈ ಕಾಣಿಕೆಗಳನ್ನು ಪ್ರತಿಯೊಂದು ಹಬ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಬ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಬ್ಬಗಳಲ್ಲಿಯೂ ಅರ್ಪಿಸಬೇಕು. ಇಸ್ರೇಲ್ ಸಂತತಿಯ ಜನರನ್ನು ಶುದ್ಧೀಕರಿಸುವುದಕ್ಕಾಗಿ ಅಧಿಪತಿಯು ಈ ಕಾಣಿಕೆಗಳನ್ನು ಕೊಡಬೇಕು.”
ಆದರೆ ಕ್ರಿಸ್ತನು ಈಗಾಗಲೇ ಪ್ರಧಾನಯಾಜಕನಾಗಿ ಬಂದಿದ್ದಾನೆ. ಈಗ ನಾವು ಹೊಂದಿರುವ ಉತ್ತಮ ಸಂಗತಿಗಳಿಗೆ ಆತನು ಪ್ರಧಾನಯಾಜಕನಾಗಿದ್ದಾನೆ. ಇತರ ಯಾಜಕರಾದರೊ ಗುಡಾರದಲ್ಲಿ ಸೇವೆಯನ್ನು ಮಾಡಿದರು. ಆದರೆ ಕ್ರಿಸ್ತನು ಗುಡಾರದಲ್ಲಿ ಸೇವೆ ಮಾಡದೆ ಅದಕ್ಕಿಂತಲೂ ಶ್ರೇಷ್ಠವಾದ ಸ್ಥಳದಲ್ಲಿ ಸೇವೆ ಮಾಡುತ್ತಾನೆ. ಅದು ಮತ್ತಷ್ಟು ಪರಿಪೂರ್ಣವಾದದ್ದು. ಅದು ಮನುಷ್ಯರಿಂದ ನಿರ್ಮಿತವಾದದ್ದಲ್ಲ. ಲೋಕಕ್ಕೆ ಸೇರಿದ್ದೂ ಅಲ್ಲ.