Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:9 - ಪರಿಶುದ್ದ ಬೈಬಲ್‌

9 ಕೇವಲ ಸ್ವಲ್ಪಕಾಲದವರೆಗೆ ಯೇಸುವು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಲ್ಪಟ್ಟನು. ಆದರೆ ನಾವೀಗ ವೈಭವ, ಗೌರವಗಳೆಂಬ ಕಿರೀಟ ಧರಿಸಿರುವ ಆತನನ್ನು ನೋಡುತ್ತೇವೆ. ಏಕೆಂದರೆ ದೇವರ ಕೃಪೆಯ ನಿಮಿತ್ತ ಆತನು ಎಲ್ಲರಿಗೋಸ್ಕರ ಸಂಕಟ ಅನುಭವಿಸಿ ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು, ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ. ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು. ಆತನು ದೇವರ ಕೃಪೆಯಿಂದ ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಲೇಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೂ ದೇವದೂತರಿಗಿಂತ ಸ್ವಲ್ಪಕಾಲ ಕಡಿಮೆಯಾಗಿ ಮಾಡಲಾದ ಆ ಒಬ್ಬಾತನು ಯೇಸುವೇ. ಈ ಯೇಸು ಬಾಧೆಪಟ್ಟು ಮೃತಪಟ್ಟಿದ್ದರಿಂದಲೇ ಮಹಿಮೆಯನ್ನೂ ಮಾನವನ್ನೂ ಕಿರೀಟವಾಗಿ ಹೊಂದಿದರೆಂದು ಎಂದು ನಾವು ಕಾಣುತ್ತೇವೆ. ದೇವರ ಕೃಪೆಯಿಂದಲೇ ಎಲ್ಲರಿಗೋಸ್ಕರ ಮರಣವನ್ನು ಈ ಯೇಸು ಅನುಭವಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ಜೆಜುಕ್ ಉಲ್ಲ್ಯಾಸ್ಯಾ ಎಳಾಸಾಟಿ ದೆವ್‍ದುತಾಂಚ್ಯಾನ್‍ಬಿ ಖಾಯ್ಲ್ಯಾ ಜಾಗ್ಯಾರ್ ಹಾನಲ್ಲೆ ಅಮಿ ಬಗಟ್ಲಾಂವ್; ಕಶ್ಯಾಕ್ ಮಟ್ಲ್ಯಾರ್, ದೆವಾಚ್ಯಾ ಉದಾರ್ ಇಚ್ಚ್ಯಾ ಪರ್‍ಕಾರ್ ಜೆಜುನ್ ಹರ್ ಎಕ್ ಮಾನ್ಸಾಂಚ್ಯಾಸಾಟ್ನಿ ಮರಾನ್ ಸೊಸ್ತಲೆ ಹೊತ್ತೆ. ತೆನಿ ಮರಾನ್ ಸೊಸ್ಲ್ಯಾನ್ ತಸೆ ಮನುನ್ ತೆನಿ ಮಹಿಮೆಚೆ ಅನಿ ಮಾನಾಚೆ ಮುಕುಟ್ ಖಮ್ವುನ್ ಘೆಟಲ್ಲೆ ಅಮಿ ಬಗುಲಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:9
39 ತಿಳಿವುಗಳ ಹೋಲಿಕೆ  

ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ನಮ್ಮ ಪಾಪಗಳ ನಿವಾರಣೆಗೂ ಎಲ್ಲಾ ಜನರ ಪಾಪಗಳ ನಿವಾರಣೆಗೂ ಯೇಸುವೇ ಮಾರ್ಗವಾಗಿದ್ದಾನೆ.


ಹೀಗಿರಲಾಗಿ, ಆದಾಮನ ಒಂದು ಪಾಪವು ಎಲ್ಲಾ ಜನರಿಗೆ ಮರಣದಂಡನೆಯನ್ನು ತಂದಿತು. ಆದರೆ ಅದೇ ರೀತಿಯಲ್ಲಿ, ಕ್ರಿಸ್ತನು ಮಾಡಿದ ಒಂದೇ ಒಳ್ಳೆಯ ಕಾರ್ಯವು, ಎಲ್ಲಾ ಜನರನ್ನು ನೀತಿವಂತರನ್ನಾಗಿ ಮಾಡುತ್ತದೆ. ಮತ್ತು ಆ ಜನರಿಗೆ ಅದು ನಿಜವಾದ ಜೀವವನ್ನು ತರುತ್ತದೆ.


ಯೇಸು ಪರಲೋಕಕ್ಕೆ ಎತ್ತಲ್ಪಟ್ಟನು. ಈಗ ಯೇಸು ದೇವರೊಂದಿಗಿದ್ದಾನೆ, ದೇವರ ಬಲಗಡೆಯಲ್ಲಿದ್ದಾನೆ. ಈಗ ತಂದೆಯು (ದೇವರು) ಪವಿತ್ರಾತ್ಮನನ್ನು ಯೇಸುವಿಗೆ ಕೊಟ್ಟಿದ್ದಾನೆ. ಪವಿತ್ರಾತ್ಮನನ್ನು ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದನು. ಆದ್ದರಿಂದ ಯೇಸು ಈಗ ಆ ಆತ್ಮನನ್ನು ಸುರಿಸಿದ್ದಾನೆ. ನೀವು ನೋಡುತ್ತಿರುವುದು ಮತ್ತು ಕೇಳುತ್ತಿರುವುದು ಇದನ್ನೇ.


ಹೌದು, ದೇವರು ಲೋಕವನ್ನು ಎಷ್ಟೋ ಪ್ರೀತಿಸಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಹೊಂದಬೇಕೆಂದು ಆತನನ್ನು ಕೊಟ್ಟನು.


ಜೀವಿಸುವವರು ಇನ್ನು ಮೇಲೆ ತಮಗೋಸ್ಕರ ಜೀವಿಸಬಾರದೆಂದು ಕ್ರಿಸ್ತನು ಎಲ್ಲಾ ಜನರಿಗಾಗಿ ಸತ್ತನು. ಆ ಜನರು ತನಗೋಸ್ಕರ ಜೀವಿಸಲೆಂದು ಆತನು ಅವರಿಗೋಸ್ಕರ ಸತ್ತನು ಮತ್ತು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನು.


ಕ್ರಿಸ್ತನು ಈ ಲೋಕದಲ್ಲಿ ಪ್ರತ್ಯಕ್ಷನಾದಾಗ ಹೇಳಿದ್ದೇನೆಂದರೆ: “ದೇವರೇ, ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ. ಆದರೆ ನೀನು ನನಗಾಗಿ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ.


ಆದರೆ ನಾವು ಇನ್ನೂ ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟನು. ದೇವರಿಗೆ ನಮ್ಮ ಮೇಲಿರುವ ಮಹಾ ಪ್ರೀತಿಯನ್ನು ಇದು ವ್ಯಕ್ತಪಡಿಸಿದೆ.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ನಾನು ಭೂಮಿಯಿಂದ ಮೇಲೆತ್ತಲ್ಪಡುವೆನು. ಆಗ ನಾನು ಎಲ್ಲಾ ಜನರನ್ನು ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.


ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.


ನೀವು ಕ್ರಿಸ್ತನ ಮೂಲಕ ದೇವರನ್ನು ನಂಬಿದ್ದೀರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ನಂತರ ದೇವರು ಆತನಿಗೆ ಪ್ರಭಾವವನ್ನು ದಯಪಾಲಿಸಿದನು. ಆದ್ದರಿಂದ ನಿಮ್ಮ ನಂಬಿಕೆ ಮತ್ತು ನಿರೀಕ್ಷೆಗಳು ದೇವರಲ್ಲಿರಲಿ.


ಪ್ರತಿಯೊಬ್ಬ ಪ್ರಧಾನಯಾಜಕನೂ ದೇವರಿಗೆ ಯಜ್ಞಗಳನ್ನೂ ಕಾಣಿಕೆಗಳನ್ನೂ ಅರ್ಪಿಸಬೇಕು. ಆದ್ದರಿಂದ ನಮ್ಮ ಪ್ರಧಾನ ಯಾಜಕನೂ ದೇವರಿಗೆ ಏನನ್ನಾದರೂ ಅರ್ಪಿಸಲೇಬೇಕು.


ಯೇಸುವು ಜನರೆಲ್ಲರ ಪಾಪಗಳಿಗೆ ತನ್ನನ್ನೇ ಉಚಿತವಾಗಿ ಒಪ್ಪಿಸಿಕೊಟ್ಟನು. ಜನರೆಲ್ಲರೂ ರಕ್ಷಣೆ ಹೊಂದಬೇಕೆಂಬ ದೇವರ ಅಪೇಕ್ಷೆಗೆ ಯೇಸುವು ತಕ್ಕಕಾಲದಲ್ಲಿ ಸಾಕ್ಷಿನೀಡಿದನು.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ದೇವರು ತನ್ನ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೊಸ್ಕರ ಕೊಟ್ಟನು. ಆದ್ದರಿಂದ ಈಗ, ದೇವರು ಯೇಸುವಿನೊಂದಿಗೆ ನಮಗೆ ಎಲ್ಲವನ್ನು ಖಂಡಿತವಾಗಿ ಕೊಡುತ್ತಾನೆ.


ಆದರೆ ತಕ್ಕ ಕಾಲ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿದನು. ದೇವರ ಮಗನು ಸ್ತ್ರೀಯಲ್ಲಿ ಜನಿಸಿ, ಧರ್ಮಶಾಸ್ತ್ರದ ಅಧೀನದಲ್ಲಿ ಜೀವಿಸಿದನು.


ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.


ನನ್ನ ಒಡೆಯನಾದ ದೇವರು ನಿಮಗೊಂದು ಗುರುತನ್ನು ಕೊಡುವನು: ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನಿಗೆ ಜನ್ಮ ನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.


ತಂದೆಯು ನನ್ನನ್ನು ಪ್ರೀತಿಸುತ್ತಾನೆ. ಏಕೆಂದರೆ ನಾನು ನನ್ನ ಪ್ರಾಣವನ್ನು ಮತ್ತೆ ಪಡೆದುಕೊಳ್ಳುವುದಕ್ಕಾಗಿ ಕೊಡುತ್ತೇನೆ.


ಯೆಹೂದ್ಯರು ಆತನಿಗೆ, “ನಿನ್ನೊಳಗೆ ದೆವ್ವವಿದೆ ಎಂದು ಈಗ ನಮಗೆ ತಿಳಿಯಿತು! ಅಬ್ರಹಾಮನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಆದರೆ ‘ನನ್ನ ಉಪದೇಶಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ’ ಎಂದು ನೀನು ಹೇಳುತ್ತಿರುವೆ.


ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಈಗ ಇಲ್ಲಿ ನಿಂತಿರುವ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದೊಡನೆ ಬರುವುದನ್ನು ನೋಡುವ ತನಕ ಸಾಯುವುದಿಲ್ಲ” ಎಂದು ಹೇಳಿದನು.


ಆತನ ಕಣ್ಣುಗಳು ಉರಿಯುವ ಕೆಂಡಗಳಂತಿದ್ದವು. ಆತನ ತಲೆಯ ಮೇಲೆ ಅನೇಕ ಕಿರೀಟಗಳಿದ್ದವು. ಆತನ ಮೇಲೆ ಒಂದು ಹೆಸರನ್ನು ಬರೆಯಲಾಗಿತ್ತು, ಆದರೆ ಆ ಹೆಸರಿನ ಅರ್ಥ ಆತನೊಬ್ಬನಿಗೆ ಮಾತ್ರ ತಿಳಿದಿತ್ತೇ ಹೊರತು ಬೇರೆ ಯಾರಿಗೂ ತಿಳಿದಿರಲಿಲ್ಲ.


ಕೇವಲ ಸ್ವಲ್ಪಕಾಲದವರೆಗೆ ನೀನು ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆ ಮಾಡಿದೆ. ನೀನು ಅವನಿಗೆ ವೈಭವವನ್ನೂ ಗೌರವವನ್ನೂ ಕಿರೀಟವಾಗಿ ಇಟ್ಟಿರುವೆ.


ನಾನು ಸತ್ಯವನ್ನು ಹೇಳುತ್ತೇನೆ. ಇಲ್ಲಿ ನಿಂತಿರುವ ಕೆಲವರು ತಾವು ಸಾಯುವುದಕ್ಕಿಂತ ಮೊದಲು ದೇವರ ರಾಜ್ಯವನ್ನು ನೋಡುವರು” ಎಂದು ಹೇಳಿದನು.


ಆಮೇಲೆ ಯೇಸು ಜನರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇಲ್ಲಿ ನಿಂತಿರುವ ನಿಮ್ಮಲ್ಲಿ ಕೆಲವು ಜನರು ತಾವು ಸಾಯುವುದಕ್ಕೆ ಮುಂಚೆ ದೇವರ ರಾಜ್ಯವು ಅಧಿಕಾರದೊಡನೆ ಬರುವುದನ್ನು ನೋಡುತ್ತಾರೆ” ಎಂದು ಹೇಳಿದನು.


“ಬಟ್ಟೆಗಾಗಿ ಚಿಂತಿಸುವುದೇಕೆ? ಹೊಲದಲ್ಲಿರುವ ಹೂವುಗಳನ್ನು ನೋಡಿ. ಅವು ಬೆಳೆಯುವ ಬಗೆಯನ್ನು ಗಮನಿಸಿ. ಅವು ದುಡಿಯುವುದಿಲ್ಲ ಅಥವಾ ತಮಗಾಗಿ ಬಟ್ಟೆಗಳನ್ನು ನೇಯುವುದಿಲ್ಲ.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು. ಆ ಕೊಂಬೆಯು ಇಷಯನ ಬೇರಿನಿಂದ ಬೆಳೆಯುವುದು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ವಾಕ್ಯಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ” ಎಂದು ಉತ್ತರಕೊಟ್ಟನು.


ನೀನು ಒಳ್ಳೆಯದನ್ನು ಪ್ರೀತಿಸುವೆ, ಕೆಟ್ಟದ್ದನ್ನು ದ್ವೇಷಿಸುವೆ. ಆದ್ದರಿಂದ ದೇವರು, ಹೌದು, ನಿನ್ನ ದೇವರೇ ನಿನ್ನನ್ನು ನಿನ್ನ ಸಂಗಡಿಗರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದದ ತೈಲದಿಂದ ಅಭಿಷೇಕಿಸಿದ್ದಾನೆ.”


ಹನೋಕನು ಸಾವನ್ನು ಅನುಭವಿಸದೆ ಈ ಲೋಕದಿಂದ ಮೇಲೋಕಕ್ಕೆ ಒಯ್ಯಲ್ಪಟ್ಟನು. ಪವಿತ್ರ ಗ್ರಂಥವು ಹೇಳುವಂತೆ, ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರಿಗೆ ನಿಜವಾಗಿಯೂ ಮೆಚ್ಚಿಕೆಯಾಗಿದ್ದನು. ತರುವಾಯ ಜನರಿಗೆ ಅವನು ಸಿಕ್ಕಲೇ ಇಲ್ಲ. ಅವನ ನಂಬಿಕೆಯ ದೆಸೆಯಿಂದ ದೇವರು ಅವನನ್ನು ತನ್ನೊಡನಿರಲು ಕೊಂಡೊಯ್ದನು.


ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು