Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:11 - ಪರಿಶುದ್ದ ಬೈಬಲ್‌

11 ‘ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲ’ ಎಂದು ನಾನು ಕೋಪಗೊಂಡು ಪ್ರಮಾಣ ಮಾಡಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೀಗಿರಲು ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ ಎಂದು ಸಿಟ್ಟುಗೊಂಡು ಶಪಥ ಮಾಡಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹೀಗಿರಲು ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ, ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ!’ ಎಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅಶೆ ಮಾಜ್ಯಾ ರಾಗಾನ್ ಆನ್ ಘಾಲುನ್ ಮಿಯಾ ಮಟ್ಲೊ ಮಿಯಾ ತೆನಿ ಆರಾಮ್ ಘೆವ್ಕ್ ಮನುನ್ ತಯಾರ್ ಕರುನ್ ಥವಲ್ಲ್ಯಾ ಗಾಂವಾತ್ ಕನ್ನಾಚ್ ಭುತ್ತುರ್ ಗುಸಿನ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:11
13 ತಿಳಿವುಗಳ ಹೋಲಿಕೆ  

ನಂಬುವವರಾದ ನಾವು ದೇವರ ವಿಶ್ರಾಂತಿಯಲ್ಲಿ ಸೇರಲು ಸಮರ್ಥರಾಗಿದ್ದೇವೆ. ದೇವರು ಹೇಳಿದಂತೆ: “ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲವೆಂದು ನಾನು ಕೋಪಗೊಂಡು ಪ್ರಮಾಣ ಮಾಡಿದೆನು.” ಈ ಲೋಕವನ್ನು ಸೃಷ್ಟಿಸಿದ ನಂತರ ತನ್ನ ಕಾರ್ಯಗಳು ಮುಗಿದುಹೋಗಿದ್ದರೂ ದೇವರು ಹೀಗೆ ಹೇಳಿದನು.


ಕಾದೇಶ್‌ಬರ್ನೇಯದಿಂದ ಜೆರೆದ್ ಕಣಿವೆಯನ್ನು ದಾಟಿ ಆಗಲೇ ಮೂವತ್ತೆಂಟು ವರ್ಷಗಳು ದಾಟಿದ್ದವು. ನಮ್ಮ ಸಮೂಹದಲ್ಲಿದ್ದ ಯುದ್ಧಭಟರೆಲ್ಲಾ ಸತ್ತುಹೋಗಿದ್ದರು. ಹೀಗೆ ಆಗುವುದೆಂದು ದೇವರು ಪ್ರಮಾಣ ಮಾಡಿದ್ದನು.


ದೇವಜನರಿಗೋಸ್ಕರವಿರುವ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಬರಲಿದೆ ಎಂಬುದನ್ನು ಇದು ತೋರ್ಪಡಿಸುತ್ತದೆ.


ಪವಿತ್ರ ಗ್ರಂಥದ ಇನ್ನೊಂದು ಭಾಗದಲ್ಲಿ ಆತನು, “ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲ” ವೆಂದೂ ಹೇಳಿದ್ದಾನೆ.


ಆದ್ದರಿಂದ ನಾನು ಕೋಪಗೊಂಡು ನನ್ನ ವಿಶ್ರಾಂತಿಯ ನಾಡನ್ನು ಅವರು ಪ್ರವೇಶಿಸಕೂಡದೆಂದು ನಾನು ಪ್ರಮಾಣ ಮಾಡಿದೆನು.”


“ಇದು ಯೆಹೋವನೆಂಬ ನಾನು ಹೇಳಿದ ಮಾತು. ನನಗೆ ವಿರೋಧವಾಗಿ ಕೂಡಿಕೊಂಡಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಖಂಡಿತವಾಗಿ ಮಾಡುತ್ತೇನೆ. ಈ ಮರುಭೂಮಿಯಲ್ಲಿಯೇ ಇವರೆಲ್ಲರೂ ಸಾಯಬೇಕು” ಎಂದು ಹೇಳಿದನು.


ಅಮಾಲೇಕ್ಯರೂ ಕಾನಾನ್ಯರೂ ಆ ಕಣಿವೆಯಲ್ಲಿ ವಾಸವಾಗಿದ್ದಾರೆ. ಆದ್ದರಿಂದ ಕೆಂಪುಸಮುದ್ರಕ್ಕೆ ಹೋಗುವ ದಾರಿಯ ಮೂಲಕ ಮರುಭೂಮಿಗೆ ಮರಳಿ ಪ್ರಯಾಣ ಮಾಡಬೇಕು” ಎಂದು ಹೇಳಿದನು.


ಆದ್ದರಿಂದ ಅವರು ಅರಣ್ಯದಲ್ಲಿ ಸಾಯುವುದಾಗಿ ದೇವರು ಪ್ರಮಾಣ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು