ಇಬ್ರಿಯರಿಗೆ 3:14 - ಪರಿಶುದ್ದ ಬೈಬಲ್14 ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವೆ. ಆರಂಭದಲ್ಲಿ ನಮಗಿದ್ದ ದೃಢನಂಬಿಕೆಯನ್ನು ಅಂತ್ಯದವರೆಗೂ ಬಲವಾಗಿ ಹಿಡಿದುಕೊಳ್ಳುವುದಾದರೆ ಇದು ನಿಜವಾಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮೊದಲಿಂದಿರುವ ಭರವಸವನ್ನು ಅಂತ್ಯದವರೆಗೂ ದೃಢವಾಗಿ ಹಿಡಿದುಕೊಳ್ಳುವ ಪಕ್ಷಕ್ಕೆ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಮೊದಲಿನಿಂದಿರುವ ನಮ್ಮ ನಿರೀಕ್ಷೆಯನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡಿದುಕೊಳ್ಳುವುದಾದರೆ ಕ್ರಿಸ್ತ ಯೇಸುವಿನ ಭಾಗಿಗಳಾಗಿದ್ದೇವಲ್ಲಾ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಕಶ್ಯಾಕ್ ಮಟ್ಲ್ಯಾರ್, ಅದ್ದಿ ಅಮ್ಕಾ ಗಾವಲ್ಲೆ ವಿಶ್ವಾಸಿಪಾನ್ ಅಮಿ ಸರ್ತ್ಯಾ ಎಳಾರ್ ಪತರ್ ಸಂಬಾಳುನ್ ಘೆವ್ನ್ ಜಾತಾಂವ್ ಮನ್ತಲ್ಯಾ ಗೊಸ್ಟಿ ವೈನಾ ಅಮಿ ಕ್ರಿಸ್ತಾಚ್ಯಾ ವಾಂಗ್ಡಾ ಎಕ್ ವಾಟೊ ಘೆತಲೆ ಹೊಲಾಂವ್. ಅಧ್ಯಾಯವನ್ನು ನೋಡಿ |
ಕ್ರಿಸ್ತನ ಮಾರ್ಗವನ್ನು ಜನರು ಬಿಟ್ಟುಹೋದ ನಂತರ, ನೀವು ಅವರ ಜೀವನವನ್ನು ಮತ್ತೆ ಪರಿವರ್ತಿಸಲು ಸಾಧ್ಯವೇ? ನಾನು ಸತ್ಯವನ್ನು ತಿಳಿದುಕೊಂಡ ಜನರನ್ನು ಕುರಿತು ಮಾತಾಡುತ್ತಿದ್ದೇನೆ. ಅವರು ದೇವರ ವರಗಳನ್ನು ಪಡೆದವರೂ ಪವಿತ್ರಾತ್ಮನಲ್ಲಿ ಪಾಲುಗಾರರೂ ಆಗಿದ್ದಾರೆ. ದೇವರು ಹೇಳಿದ ಸಂಗತಿಗಳನ್ನು ಅವರು ಕೇಳಿದವರೂ ದೇವರ ಹೊಸಲೋಕದ ಮಹಾಶಕ್ತಿಗಳನ್ನು ನೋಡಿದವರೂ ಆಗಿದ್ದಾರೆ. ಅವುಗಳೆಲ್ಲ ಉತ್ತಮವಾದವುಗಳೆಂಬುದನ್ನು ಅವರು ಕಲಿತುಕೊಂಡಿದ್ದಾರೆ. ಆದರೂ ಅವರು ಕ್ರಿಸ್ತನ ಮಾರ್ಗವನ್ನು ಬಿಟ್ಟುಹೋದರು. ಅವರ ಜೀವಿತವನ್ನು ಮತ್ತೆ ಪರಿವರ್ತಿಸಿ ಕ್ರಿಸ್ತನ ಬಳಿಗೆ ಬರಮಾಡಲು ಸಾಧ್ಯವಿಲ್ಲ. ಏಕೆಂದರೆ ಕ್ರಿಸ್ತನನ್ನು ಬಿಟ್ಟುಹೋದ ಅವರು ಕ್ರಿಸ್ತನನ್ನು ಮತ್ತೆ ಶಿಲುಬೆಗೇರಿಸಿ ಮೊಳೆಗಳನ್ನು ಹೊಡೆಯುವವರೂ ಜನರೆಲ್ಲರ ಮುಂದೆ ಕ್ರಿಸ್ತನಿಗೆ ಅವಮಾನ ಮಾಡುವವರೂ ಆಗಿದ್ದಾರೆ.
ಕೆಲವರಿಗೆ ವಿಶ್ವಾಸಿಗಳಾದ ಯಜಮಾನರಿದ್ದಾರೆ. ಆದ್ದರಿಂದ ಆ ಗುಲಾಮರು ಮತ್ತು ಯಜಮಾನರು ಸಹೋದರರಾಗಿದ್ದಾರೆ. ಆದರೆ ಅವರು ತಮ್ಮ ಯಜಮಾನರಿಗೆ ಕಡಿಮೆ ಗೌರವ ಕೊಡದೆ ತಮ್ಮ ಯಜಮಾನರ ಸೇವೆಯನ್ನು ಇನ್ನೂ ಉತ್ತಮವಾಗಿ ಮಾಡಬೇಕು. ಏಕೆಂದರೆ ಅವರು ಒಳ್ಳೆಯ ಕೆಲಸಗಳಿಗಾಗಿ ತಮ್ಮನ್ನು ಪ್ರತಿಷ್ಠಿಸಿಕೊಳ್ಳುವ ವಿಶ್ವಾಸಿಗಳಾಗಿದ್ದಾರೆ ಮತ್ತು ಸ್ನೇಹಿತರಾಗಿದ್ದಾರೆ. ಈ ಕಾರ್ಯಗಳನ್ನು ಮಾಡುವಂತೆ ನೀನು ಜನರಿಗೆ ಉಪದೇಶಿಸಬೇಕು ಮತ್ತು ತಿಳಿಸಬೇಕು.