Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:17 - ಪರಿಶುದ್ದ ಬೈಬಲ್‌

17 ನಲವತ್ತು ವರ್ಷಗಳ ಕಾಲ ದೇವರು ಯಾರ ಮೇಲೆ ಕೋಪಗೊಂಡಿದ್ದನು? ಪಾಪವನ್ನು ಮಾಡಿದವರ ಮೇಲಲ್ಲವೇ? ಅವರೆಲ್ಲರೂ ಮರುಭೂಮಿಯಲ್ಲಿ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಲವತ್ತು ವರ್ಷಗಳು ದೇವರು ಸಿಟ್ಟುಗೊಂಡದ್ದು ಯಾರ ಮೇಲೆ? ಪಾಪಮಾಡಿದವರ ಮೇಲಲ್ಲವೇ? ಅವರ ಶವಗಳು ಬಿದ್ದುದು ಮರುಭೂಮಿಯಲ್ಲಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮತ್ತು ನಾಲ್ವತ್ತು ವರುಷ ಆತನು ಯಾರ ಮೇಲೆ ಬಹಳವಾಗಿ ಕೋಪಿಸಿಕೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಲವತ್ತು ವರ್ಷ ದೇವರು ಯಾರ ಮೇಲೆ ಕೋಪಗೊಂಡರು? ಪಾಪಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅನಿ ಚಾಳಿಸ್ ವರ್ಸಾ ಪತರ್ ದೆವ್ ಕೊನಾಚ್ಯಾ ವರ್ತಿ ರಾಗಾನ್ ಹೊತ್ತೊ? ಡಂಗ್ಳಿತ್ ಮಡಿ ಪಡಲ್ಲ್ಯಾ ಪಾಪ್ ಕರಲ್ಲ್ಯಾ ತ್ಯಾ ಲೊಕಾಂಚ್ಯಾ ವರ್‍ತಿಚ್ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:17
11 ತಿಳಿವುಗಳ ಹೋಲಿಕೆ  

ನಿಮ್ಮ ಶವಗಳು ಈ ಮರುಭೂಮಿಯಲ್ಲಿಯೇ ಬೀಳುವವು. ನೀವು ನನಗೆ ವಿರೋಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಲೆಕ್ಕಿಸಲ್ಪಟ್ಟವರೆಲ್ಲರೂ ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಮರುಭೂಮಿಯಲ್ಲೇ ಸಾಯುವರು.


ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಾನು ನಡಿಸಿರುವ ಮಹಾತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಜನರೆಲ್ಲರೂ ಪದೇಪದೇ ನನ್ನನ್ನು ಪರೀಕ್ಷಿಸಿದ್ದರಿಂದ ಮತ್ತು ನನಗೆ ವಿಧೇಯರಾಗದಿದ್ದ ಕಾರಣ,


ನೀವು ಈಗಾಗಲೇ ತಿಳಿದುಕೊಂಡಿರುವ ಕೆಲವು ವಿಚಾರಗಳನ್ನು ನೆನಪು ಮಾಡಿಕೊಳ್ಳಲು ನಾನು ನಿಮಗೆ ಸಹಾಯ ಮಾಡಲಿಚ್ಛಿಸುತ್ತೇನೆ. ಪ್ರಭುವು ತನ್ನ ಜನರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ಅವರನ್ನು ರಕ್ಷಿಸಿದನೆಂಬುದನ್ನು ನೆನಪು ಮಾಡಿಕೊಳ್ಳಿರಿ. ತರುವಾಯ ಪ್ರಭುವು ನಂಬಿಕೆಯಿಲ್ಲದ ಜನರೆಲ್ಲರನ್ನೂ ನಾಶಪಡಿಸಿದನು.


ಯೆರೆಮೀಯನೇ, ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: “‘ಹೊಲಗಳಲ್ಲಿ ಗೊಬ್ಬರ ಬಿದ್ದಂತೆ ಹೆಣಗಳು ಬೀಳುವವು. ಆ ಶವಗಳು ಹೊಲ ಕೊಯ್ಯುವವನ ಹಿಂದೆ ಯಾರೂ ಎತ್ತದೆ ಬಿದ್ದಿರುವ ಮೆದೆಗಳಂತೆ ಬಿದ್ದಿರುವವು.’”


ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ‘ಯೆಹೋವನು ಹೇಳುವುದೇನೆಂದರೆ: ನನ್ನ ಜೀವದಾಣೆ. ನೀವು ಏನನ್ನು ಹೇಳಿದಿರೋ ಅದನ್ನೇ ನಿಮಗೆ ಮಾಡುತ್ತೇನೆ;


ನಲವತ್ತು ವರ್ಷಗಳ ಕಾಲ ನಾನು ಅವರೊಂದಿಗೆ ತಾಳ್ಮೆಯಿಂದಿದ್ದೆನು, ಅವರು ನಂಬಿಗಸ್ತರಲ್ಲವೆಂದು ನನಗೆ ತಿಳಿದಿತ್ತು. ಅವರು ನನ್ನ ಉಪದೇಶಗಳನ್ನು ಅನುಸರಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು