Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:9 - ಪರಿಶುದ್ದ ಬೈಬಲ್‌

9 ನಾನು ಮರಳುಗಾಡಿನಲ್ಲಿ ನಲವತ್ತು ವರ್ಷಗಳ ಕಾಲ ಮಾಡಿದ್ದನ್ನು ನಿಮ್ಮ ಪೂರ್ವಿಕರು ನೋಡಿದರೂ ನನ್ನನ್ನೂ ನನ್ನ ತಾಳ್ಮೆಯನ್ನೂ ಪರೀಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿಮ್ಮ ಹಿರಿಯರು ಮೊಂಡುತನದಿಂದ ನನ್ನನ್ನು ಪರೀಕ್ಷಿಸಿ, ನಲವತ್ತು ವರ್ಷ ನನ್ನ ಕೃತ್ಯಗಳನ್ನು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಎಂದೇ ದೇವರಿಂತೆಂದರು: ಮರುಭೂಮಿಯಲಿ ಅವರೆನ್ನನು ಕೆಣಕಿದರು; ನಲವತ್ತು ವರುಷ ನಾನೆಸಗಿದ ಮಹತ್ಕಾರ್ಯಗಳನು ಕಂಡರಾದರೂ ಎನ್ನ ಕೆಣಕಿ ಪರೀಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ಅರಣ್ಯದಲ್ಲಿ ನನ್ನನ್ನು ಪರೀಕ್ಷಿಸಿ ಶೋಧಿಸಿ ನಾಲ್ವತ್ತು ವರುಷ ನಾನು ನಡಿಸುತ್ತಿದ್ದ ಕೃತ್ಯಗಳನ್ನು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಮ್ಮ ಪಿತೃಗಳು ನನ್ನನ್ನು ಕೆಣಕಿ ಪರೀಕ್ಷಿಸಿದರು, ನಲವತ್ತು ವರ್ಷ ನನ್ನ ಕಾರ್ಯಗಳನ್ನು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತನ್ನಾ ತುಮ್ಚ್ಯಾ ಅದ್ಲ್ಯಾ ಲೊಕಾನಿ ಮಾಕಾ ಪಾರ್ಕುನ್ ಅನಿ ಪರಿಕ್ಷಾ ಕರ್ಲ್ಯಾನಿ, ಚಾಳಿಸ್ ವರ್ಸಾ ಮಿಯಾ ಕರಲ್ಲಿ ಕಾಮಾ ತೆನಿ ಬಗಟ್ಲ್ಯಾನಿ”,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:9
17 ತಿಳಿವುಗಳ ಹೋಲಿಕೆ  

ಆದ್ದರಿಂದ ಮೋಶೆಯು ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಈಜಿಪ್ಟಿನಲ್ಲಿಯೂ ಕೆಂಪುಸಮುದ್ರದಲ್ಲಿಯೂ ಮತ್ತು ನಲವತ್ತು ವರ್ಷಗಳ ಕಾಲ ಅರಣ್ಯದಲ್ಲಿಯೂ ಮಾಡಿದನು.


ಆದರೆ ನೀವು ನೋಡಿದ್ದನ್ನು ನಿಮ್ಮ ಜೀವಮಾನವೆಲ್ಲಾ ಜಾಗ್ರತೆಯುಳ್ಳವರಾಗಿದ್ದು ಮರೆಯದೆ ಅದನ್ನು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸಬೇಕು.


ಆಗ ನಿಮ್ಮ ಜನರು ಯೆಹೋವನಾದ ನನ್ನ ಸಹಾಯ ಕೋರಿದರು. ನಾನು ಈಜಿಪ್ಟಿನ ಜನರಿಗೂ ಅವರಿಗೂ ಮಧ್ಯದಲ್ಲಿ ಕತ್ತಲೆಯಾಗುವಂತೆ ಮಾಡಿದೆ; ಸಮುದ್ರವು ಅವರನ್ನು ಮುಚ್ಚಿಬಿಡುವಂತೆ ಮಾಡಿದೆ. ಈಜಿಪ್ಟಿನ ಸೈನ್ಯಕ್ಕೆ ನಾನು ಮಾಡಿದ್ದನ್ನು ನೀವೇ ನೋಡಿದ್ದೀರಿ. “‘ತರುವಾಯ ಬಹಳ ಕಾಲದವರೆಗೆ ನೀವು ಅರಣ್ಯದಲ್ಲಿ ಪ್ರವಾಸ ಮಾಡಿಕೊಂಡಿದ್ದಿರಿ.


ಆತನು ನಿಮ್ಮನ್ನು ಕಾಪಾಡಿ ಸಂರಕ್ಷಿಸಿದ್ದರಿಂದ ಈ ನಲವತ್ತು ವರ್ಷ ನಿಮ್ಮ ಬಟ್ಟೆಗಳು ಹರಿದುಹೋಗಲಿಲ್ಲ; ನಿಮ್ಮ ಕಾಲುಗಳು ಊದಿಕೊಳ್ಳಲಿಲ್ಲ.


“ಬಾಳ್‌ಪೆಗೋರಿನಲ್ಲಿ ನಡೆದ ಸಂಗತಿಯನ್ನು ನೀವು ನೋಡಿದ್ದೀರಿ. ಅಲ್ಲಿ ಬಾಳನನ್ನು ಪೂಜಿಸಿದವರನ್ನೆಲ್ಲಾ ಯೆಹೋವನು ನಾಶಮಾಡಿದನು.


‘ನಾನು ನನ್ನ ವೈರಿಗಳಿಗೆ ಮಾಡುವ ಸಂಗತಿಗಳನ್ನು ನೀವು ನೋಡಿದ್ದೀರಿ. ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದಿರಿ. ಹದ್ದು ತನ್ನ ಮರಿಗಳನ್ನು ಹೊತ್ತುಕೊಂಡು ಬರುವಂತೆ ನಾನು ನಿಮ್ಮನ್ನು ಈಜಿಪ್ಟಿನಿಂದ ಇಲ್ಲಿಗೆ ಕರೆದುಕೊಂಡು ಬಂದದ್ದನ್ನು ನೀವು ನೋಡಿದಿರಿ.


ಆದರೆ ಮಂತ್ರವಾದಿಯಾದ ಎಲಿಮನು ಬಾರ್ನಬ ಮತ್ತು ಸೌಲರಿಗೆ ವಿರೋಧವಾಗಿದ್ದನು. (ಬಾರ್ ಯೇಸುವನ್ನು ಗ್ರೀಕ್ ಭಾಷೆಯಲ್ಲಿ ಎಲಿಮ ಎಂದು ಕರೆಯುತ್ತಿದ್ದರು.) ರಾಜ್ಯಪಾಲನು ಯೇಸುವಿನಲ್ಲಿ ನಂಬಿಕೆ ಇಡದ ಹಾಗೆ ಮಾಡಲು ಎಲಿಮನು ಪ್ರಯತ್ನಿಸಿದನು.


ಬಳಿಕ ಯೇಸು ಯೋಹಾನನ ಶಿಷ್ಯರಿಗೆ, “ನೀವು ಇಲ್ಲಿ ಕಂಡು ಕೇಳಿದ ಸಂಗತಿಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ. ಕುರುಡರಿಗೆ ದೃಷ್ಟಿ ಬರುತ್ತದೆ, ಕುಂಟರು ಕಾಲನ್ನು ಪಡೆದು ನಡೆಯುತ್ತಾರೆ. ಕುಷ್ಠರೋಗಿಗಳು ಗುಣಹೊಂದುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರಿಗೆ ಜೀವ ಬರುತ್ತದೆ ಮತ್ತು ದೇವರ ರಾಜ್ಯದ ಸುವಾರ್ತೆಯು ಬಡವರಿಗೆ ಕೊಡಲ್ಪಡುತ್ತದೆ.


“ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ತನಕ ನಾನು ಅಡವಿಯಲ್ಲಿ ನಿಮ್ಮನ್ನು ನಡಿಸಿದೆನು. ನಾನು ಅಮೋರಿಯರ ದೇಶವನ್ನು ಸ್ವಾಧೀನಪಡಿಸಲು ಅವರಿಗೆ ಸಹಾಯ ಮಾಡಿದೆನು.


ಯೆಹೋವನು ನಮ್ಮ ಶತ್ರುಗಳಿಗೆ ಏನು ಮಾಡಿದನೆಂಬುದು ನೀವು ನೋಡಿದ್ದೀರಿ. ನಮಗೆ ಸಹಾಯ ಮಾಡುವುದಕ್ಕಾಗಿ ನಮ್ಮ ದೇವರಾದ ಯೆಹೋವನು ನಮಗಾಗಿ ಯುದ್ಧಮಾಡಿದನು.


ಮೋಶೆಯು ಇಸ್ರೇಲರ ಜನಸಮೂಹವನ್ನು ಕರೆದು, “ಈಜಿಪ್ಟ್ ದೇಶದಲ್ಲಿ ಯೆಹೋವನು ನಡಿಸಿದ ಕಾರ್ಯಗಳನ್ನೆಲ್ಲಾ ನೀವು ನೋಡಿದ್ದೀರಿ. ಆತನು ಫರೋಹನಿಗೂ ಅವನ ಪರಿವಾರದವರಿಗೂ ಮತ್ತು ಇಡೀ ಈಜಿಪ್ಟಿನವರಿಗೂ ಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.


ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.


“‘ನಿಮ್ಮ ಅಪನಂಬಿಗಸ್ತಿಕೆಯ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನೀವು ಸಾಯುವತನಕ ನಲವತ್ತು ವರ್ಷ ಮರುಭೂಮಿಯಲ್ಲಿ ಅಲೆದಾಡುವರು.


ಆಗ ಯೆಹೋವನು ಈ ಸಂಗತಿಗಳನ್ನು ಇಸ್ರೇಲರಿಗೆ ತಿಳಿಸಲು ಮೋಶೆಗೆ ಆಜ್ಞಾಪಿಸಿದನು: “ನಾನು ಪರಲೋಕದಿಂದ ನಿಮ್ಮ ಸಂಗಡ ಮಾತಾಡಿದ್ದನ್ನು ನೀವು ನೋಡಿದ್ದೀರಿ.


ಆತನು ಮಾಡಿದ ಎಲ್ಲಾ ಮಹಾಕೃತ್ಯಗಳನ್ನು ನೋಡಿದವರು ನೀವೇ.


ನಿಮ್ಮ ಪೂರ್ವಿಕರು ನನ್ನನ್ನು ಪರೀಕ್ಷಿಸಿದರು. ನನ್ನ ಮಹತ್ಕಾರ್ಯಗಳನ್ನು ನೋಡಿದ್ದರೂ ನನ್ನನ್ನು ಪರೀಕ್ಷಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು