ಇಬ್ರಿಯರಿಗೆ 4:15 - ಪರಿಶುದ್ದ ಬೈಬಲ್15 ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಈ ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯಾಕಂದರೆ ನಮಗಿರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದನು, ಪಾಪ ಮಾತ್ರ ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಅನಿ ತೊ ಅಮ್ಚ್ಯಾ ಬಳ್ ನಸಲ್ಲ್ಯಾಚ್ಯಾ ವಿಶಯಾತ್ ದಯಾ ಮಯಾ ಹೊತ್ತೊ ತಸ್ಲೊ ಶ್ರೆಸ್ಟ್ ಯಾಜಕ್ ಅಮ್ಚ್ಯಾ ಸಾರ್ಕೆಚ್ ಸಗ್ಳ್ಯಾತ್‍ಬಿ ಪರಿಕ್ಷಾ ಸೊಸಲ್ಲೊಚ್ ತೊ, ಹೊಲ್ಯಾರ್ ಬಿ ತೆನಿ ಪಾಪ್ ಕರುಕ್ ನಾ. ಅಧ್ಯಾಯವನ್ನು ನೋಡಿ |
ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.