ಇಬ್ರಿಯರಿಗೆ 4:16 - ಪರಿಶುದ್ದ ಬೈಬಲ್16 ಆದ್ದರಿಂದ ದೇವರ ಕೃಪಾಸಿಂಹಾಸನದ ಬಳಿಗೆ ಸಂಕೋಚಪಡದೆ ಬರೋಣ. ಕೊರತೆಯಲ್ಲಿರುವಾಗ ನಮಗೆ ಬೇಕಾದ ಸಹಾಯಕ್ಕಾಗಿ ಕೃಪೆಯನ್ನೂ ಕರುಣೆಯನ್ನೂ ಅಲ್ಲಿ ಹೊಂದಿಕೊಳ್ಳುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ದಯೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾಸನದ ಮುಂದೆ ಬರೋಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತಸೆ ಹೊಲ್ಯಾರ್ ಗರ್ಜೆಚ್ಯಾ ಅನಿ ತರಾಸಾಚ್ಯಾ ಎಳಾರ್ ಅಮ್ಕಾ ದಯಾ ಅನಿ ಆಧಾರ್ ಘೆವ್ಕ್ ಸಾಟ್ನಿ ಮನುನ್ ಅಮಿ ಧೈರ್‍ಯಾನ್ ದೆವಾಚ್ಯಾ ಕುರ್ಪೆಚ್ಯಾ ಸಿಯಾಸನ್ ಜಾಗ್ಯಾಕ್ಡೆ ಜಗ್ಗೊಳ್ ಜಾಂವಾ. ಅಧ್ಯಾಯವನ್ನು ನೋಡಿ |
ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು!