ಇಬ್ರಿಯರಿಗೆ 4:7 - ಪರಿಶುದ್ದ ಬೈಬಲ್7 ಆದ್ದರಿಂದ ಆತನು ಮತ್ತೊಂದು ವಿಶೇಷ ದಿನವನ್ನು ಯೋಜಿಸಿದನು. ಅದನ್ನು “ಈ ಹೊತ್ತು” ಎಂದು ಕರೆಯಲಾಗಿದೆ. ಆತನು ಆ ದಿನವನ್ನು ಕುರಿತು ಬಹುಕಾಲದ ನಂತರ ದಾವೀದನ ಮೂಲಕ ತಿಳಿಸಿದನು. ಪವಿತ್ರ ಗ್ರಂಥದ ಈ ಭಾಗವನ್ನು ನಾವು ಮೊದಲೊಮ್ಮೆ ನೋಡಿದೆವು: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಪುನಃ ಬಹುಕಾಲದ ನಂತರ ಆತನು ದಾವೀದನ ಮೂಲಕ ‘ಈ ಹೊತ್ತೇ’ ಎಂದು ಬೇರೊಂದು ದಿನವನ್ನು ಗೊತ್ತುಮಾಡಿದ್ದಾನೆ. ಹೇಗೆಂದರೆ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಡುವುದಾದರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ!” ಎಂದು ಹೇಳುತ್ತಾನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಈ ಕಾರಣದಿಂದಲೇ ದೇವರು, “ಇಂದು” ಎಂದು ಬೇರೊಂದು ದಿನವನ್ನು ಗೊತ್ತುಮಾಡುತ್ತಾರೆ. ಈ ದಿನವನ್ನು ಕುರಿತೇ ದೀರ್ಘಕಾಲದ ನಂತರ ದಾವೀದನ ಮುಖಾಂತರ : “ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು,” ಎಂದು ಹೇಳಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಬಹುಕಾಲ ಹೋದನಂತರ ಆತನು ದಾವೀದನ ಬಾಯಿಂದ ಮಾತಾಡಿ ಈಹೊತ್ತೇ ಎಂದು ಒಂದಾನೊಂದು ದಿವಸವನ್ನು ಗೊತ್ತು ಮಾಡುತ್ತಾನೆ; ಹೇಗಂದರೆ - ನೀವು ಈಹೊತ್ತು ದೇವರ ಶಬ್ದಕ್ಕೆ ಕಿವಿಗೊಟ್ಟರೆ ನಿಮ್ಮ ಹೃದಯಗಳನ್ನು ಕಠಿನಮಾಡಿಕೊಳ್ಳಬೇಡಿರಿ ಎಂದು ಮೇಲ್ಕಂಡ ವಚನದಲ್ಲಿ ಹೇಳುತ್ತಾನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೇವರು “ಈ ಹೊತ್ತೇ” ಎಂದು ಬೇರೊಂದು ದಿವಸವನ್ನು ಗೊತ್ತು ಮಾಡುತ್ತಾರೆ. ಈ ದಿನವನ್ನು ಕುರಿತೇ ಬಹುಕಾಲದ ನಂತರ ದಾವೀದನ ಮೂಲಕ ಮೊದಲೇ ಹೀಗೆ ಹೇಳಿದ್ದಾರೆ: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತಸೆ ಮನುನ್ ದೆವಾನ್ ಆಜ್ ಮನ್ತಲೊ ಅನಿ ಎಕ್ ದಿಸ್ ನೆಮ್ಸುನ್ ಥವ್ಲ್ಯಾನಾಯ್. ಕವ್ಡ್ಯಾಕಿ ವರ್ಸಾಂಚ್ಯಾ ಮಾನಾ ಹ್ಯಾಚ್ ದಿಸಾಚ್ಯಾ ವಿಶಯಾತ್ ದಾವಿದಾಚ್ಯಾ ತೊಂಡಾತ್ನಾ ಬೊಲುನ್ ಅದ್ದಿಚ್ ಸಾಂಗಲ್ಲ್ಯಾ ಗೊಸ್ಟಿ ಸಾರ್ಕೆಚ್ ದೆವ್ ಮನ್ತಾ, ಆಜ್ ತುಮಿ ತೆಚೊ ಧನ್ ಆಯಿಕ್ತ್ಯಾಶಿ ಹೊಲ್ಯಾರ್, ತುಮ್ಚಿ ಮನಾ ನಿಸ್ಟುರ್ ಕರುನಕಾಶಿ. ಅಧ್ಯಾಯವನ್ನು ನೋಡಿ |