ಇಬ್ರಿಯರಿಗೆ 5:4 - ಪರಿಶುದ್ದ ಬೈಬಲ್4 ಪ್ರಧಾನಯಾಜಕನಾಗಿ ನೇಮಿಸಲ್ಪಡುವುದು ಒಂದು ಗೌರವ. ಆದರೆ ಯಾರೂ ತಮ್ಮನ್ನು ತಾವೇ ಈ ಕಾರ್ಯಕ್ಕೆ ಆರಿಸಿಕೊಳ್ಳುವುದಿಲ್ಲ. ದೇವರು ಆರೋನನನ್ನು ಕರೆದಂತೆ, ಆ ವ್ಯಕ್ತಿಯನ್ನು ಕರೆಯಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಲ್ಲದೆ, ಪ್ರಧಾನಯಾಜಕನೆಂಬ ಗೌರವಪದವಿಯನ್ನು ತನ್ನಷ್ಟಕ್ಕೆ ತಾನೇ ಯಾರೂ ವಹಿಸಿಕೊಳ್ಳರು. ಆರೋನನಂತೆ ಅವರೂ ದೇವರಿಂದ ಕರೆ ಹೊಂದಿದವರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ದೇವರಿಂದ ನೇವಿುಸಲ್ಪಟ್ಟು ವಹಿಸಿಕೊಳ್ಳುತ್ತಾನೆ; ಆರೋನನು ಸಹ ದೇವರಿಂದಲೇ ನೇವಿುಸಲ್ಪಟ್ಟು ಆ ಗೌರವವನ್ನು ವಹಿಸಿಕೊಂಡನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆರೋನನಂತೆ ದೇವರಿಂದ ಕರೆ ಹೊಂದದ ಹೊರತು ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳಲಾರನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಆರೊನಾಚ್ಯಾ ಸಾರ್ಕೆ ದೆವಾನ್ ಬಲ್ವಲ್ಲ್ಯಾ ಶಿವಾಯ್ ಖಲ್ಯಾಬಿ ಮಾನ್ಸಾನ್ ಹೆ ಮೊಟ್ಯಾ ಯಾಜಕಾಚೆ ಕಾಮ್ ಮೊಟೆಪಾನ್ ಅಪ್ನಿಚ್ ಹಾತಿತ್ ಘೆವ್ಕ್ ಹೊಯ್ನಾ. ಅಧ್ಯಾಯವನ್ನು ನೋಡಿ |
“ಉಜ್ಜೀಯನೇ, ಯೆಹೋವನಿಗೆ ಧೂಪ ಹಾಕುವದು ನಿನ್ನ ಕೆಲಸವಲ್ಲ. ನೀನು ಹೀಗೆ ಮಾಡುವದು ಸರಿಯಲ್ಲ. ಆರೋನನ ಸಂತತಿಯವರಾದ ಯಾಜಕರೇ ಧೂಪ ಹಾಕಬೇಕಾದದ್ದು. ಅವರು ಪವಿತ್ರ ಸೇವೆಗೆ ನೇಮಿಸಲ್ಪಟ್ಟಿದ್ದಾರೆ. ನೀನು ಈ ಮಹಾ ಪವಿತ್ರಸ್ಥಾನದಿಂದ ಹೊರಗೆ ಹೋಗು. ನೀನು ದೇವರಾದ ಯೆಹೋವನಿಗೆ ವಿಧೇಯನಾಗಿಲ್ಲ. ಈ ಕಾರ್ಯವನ್ನು ಮಾಡಿದ್ದರಿಂದ ದೇವರು ನಿನ್ನನ್ನು ಮೆಚ್ಚುವದಿಲ್ಲ” ಎಂದು ಹೇಳಿದರು.
ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”