ಇಬ್ರಿಯರಿಗೆ 5:7 - ಪರಿಶುದ್ದ ಬೈಬಲ್7 ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕ್ರಿಸ್ತನು ತಾನು ಭೂಲೋಕದಲ್ಲಿದ್ದಾಗ ಮರಣಕ್ಕೆ ತಪ್ಪಿಸಿ ಕಾಪಾಡ ಶಕ್ತನಾಗಿರುವಾತನಿಗೆ ಬಲವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ದೇವರ ಮೇಲಣ ಭಯಭಕ್ತಿಯ ನಿವಿುತ್ತ ಕೇಳಲ್ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಜೆಜು ಹ್ಯಾ ಜಗಾತ್ ಹೊತ್ತೊ ತನ್ನಾ ಅಪ್ನಾಕ್ ಮರ್‍ನಾತ್ನಾ ಹುರ್‍ವುಕ್ ಬಳ್ ಹೊತ್ತ್ಯಾಕಡೆ ಬೊಬ್ ಮಾರುನ್ ಅನಿ ಡೊಳ್ಯಾನಿತ್ನಾ ದುಕ್ಕಾ ಗಳ್ವುನ್ ಮಾಗ್ನಿಯಾ ಅನಿ ವಿನಂತ್ಯಾ ಕರುಕ್‍ಲಾಲೊ, ತೆಚ್ಯಾ ಮಾನಾಚ್ಯಾ ಖಾಲ್ತಿಪಾನಾ ಸಾಟ್ನಿ ದೆವಾನ್ ತೆಚಿ ಮಾಗ್ನಿ ಆಯಿಕ್ಲ್ಯಾನ್. ಅಧ್ಯಾಯವನ್ನು ನೋಡಿ |
ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.
ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.