Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:10 - ಪರಿಶುದ್ದ ಬೈಬಲ್‌

10 ದೇವರು ನ್ಯಾಯವಂತನಾಗಿದ್ದಾನೆ. ನೀವು ಮಾಡಿದ ಉಪಕಾರವನ್ನು ಮತ್ತು ದೇವಜನರಿಗೆ ಸಹಾಯ ಮಾಡಿದ್ದರ ಮೂಲಕ ಮತ್ತು ಸಹಾಯ ಮಾಡುತ್ತಲೇ ಇರುವುದರ ಮೂಲಕ ನೀವು ಆತನಿಗೆ ತೋರಿದ ಪ್ರೀತಿಯನ್ನು ಆತನು ಮರೆತುಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತುಮಿ ದೆವಾಚ್ಯಾ ಲೊಕಾಕ್ನಿ ಸ್ವಾಗತ್‍ ಕರುನ್ ಬರೆ ಬಗುನ್ ಘೆಟ್ಲ್ಯಾಸಿ, ಅಜುನ್ ಬಿ ಬಗುಲ್ಲ್ಯಾಸಿ, ಹೆ ಕಾಮ್ ತುಮಿ ದೆವಾಚ್ಯಾ ನಾವಾಚ್ಯಾ ವಿಶಯಾತ್ ದಾಕ್ವುಲ್ಲೊ ಪ್ರೆಮ್, ಇಸ್ರುಕ್ ದೆವ್ ಇಸರ್‍ತಲೊ ನ್ಹಯ್, ಅನಿ ದೆವ್ ಅನ್ನ್ಯಾಯ್ ಕರ್ನಾರೊ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:10
48 ತಿಳಿವುಗಳ ಹೋಲಿಕೆ  

ದೀನರಾದ ಇವರಿಗೆ ನನ್ನ ಹಿಂಬಾಲಕರೆಂಬ ನಿಮಿತ್ತ ಸಹಾಯ ಮಾಡುವವನು ಖಂಡಿತವಾಗಿಯೂ ಪ್ರತಿಫಲವನ್ನು ಪಡೆಯುವನು. ನನ್ನ ಹಿಂಬಾಲಕರಿಗೆ ಕೇವಲ ಒಂದು ಬಟ್ಟಲು ತಣ್ಣೀರನ್ನು ಕೊಟ್ಟರೂ ಸಹ ಅದಕ್ಕೆ ಬರತಕ್ಕ ಪ್ರತಿಫಲವು ತಪ್ಪುವುದೇ ಇಲ್ಲ.”


ಇದಲ್ಲದೆ ಪರೋಪಕಾರವನ್ನೂ ದಾನಧರ್ಮವನ್ನೂ ಮರೆಯದಿರಿ. ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


ಯಾರಿಗಾದರೂ ಒಳ್ಳೆಯದನ್ನು ಮಾಡಲು ಅವಕಾಶವಿರುವಾಗ ನಾವು ಮಾಡಲೇಬೇಕು. ಅದರಲ್ಲೂ ಒಂದೇ ಕುಟುಂಬದವರಂತಿರುವ ವಿಶ್ವಾಸಿಗಳ ಬಗ್ಗೆ ನಾವು ವಿಶೇಷವಾದ ಗಮನ ಕೊಡಬೇಕು.


ಕೊರ್ನೇಲಿಯನು ದೇವದೂತನನ್ನು ಕಂಡು ಭಯದಿಂದ “ಸ್ವಾಮೀ, ನಿಮಗೇನು ಬೇಕು?” ಎಂದು ಕೇಳಿದನು. ಆ ದೇವದೂತನು ಅವನಿಗೆ, “ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿದ್ದಾನೆ. ನೀನು ಬಡವರಿಗೆ ಕೊಟ್ಟವುಗಳನ್ನು ಆತನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.


ನಮ್ಮ ತಂದೆಯಾದ ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಫಲವಾಗಿ ಮಾಡಿದ ಕಾರ್ಯಗಳಿಗಾಗಿಯೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಿಮಗಿರುವ ನಿರೀಕ್ಷೆಯಿಂದ ನೀವು ದೃಢವಾಗಿರುವುದಕ್ಕಾಗಿಯೂ ನಾವು ಆತನಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.


ನೀವು ನುಡಿಯಿಂದಾಗಲಿ, ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಿಮ್ಮ ಪ್ರಭುವಾದ ಯೇಸುವಿಗಾಗಿ ಮಾಡಿರಿ. ನೀವು ಏನು ಮಾಡಿದರೂ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.


ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಶ್ರೀಮಂತರಿಗೆ ತಿಳಿಸು. ಸತ್ಕಾರ್ಯಗಳನ್ನು ಮಾಡುವುದರಲ್ಲೇ ಶ್ರೀಮಂತರಾಗಿರಬೇಕೆಂದು ಅವರಿಗೆ ತಿಳಿಸು. ಪರೋಪಕಾರದಲ್ಲೂ ಹಂಚಿಕೊಳ್ಳುವುದರಲ್ಲೂ ಸಂತಸಪಡಲು ಅವರಿಗೆ ತಿಳಿಸು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಕ್ರಿಸ್ತನವರೆಂದು ಯಾವನಾದರೂ ನಿಮಗೆ ಕುಡಿಯಲು ನೀರು ಕೊಟ್ಟರೂ ಅವನಿಗೆ ಅದರ ಪ್ರತಿಫಲ ಖಂಡಿತವಾಗಿ ಸಿಕ್ಕುವುದು.


ಕೊರತೆಯಲ್ಲಿರುವ ದೇವಜನರಿಗೆ ಸಹಾಯ ಮಾಡಿರಿ. ಅತಿಥಿಸತ್ಕಾರದ ಅಗತ್ಯವಿರುವವರನ್ನು ಗುರುತಿಸಿ, ನಿಮ್ಮ ಮನೆಗಳಿಗೆ ಆಹ್ವಾನಿಸಿರಿ.


ಜುದೇಯದಲ್ಲಿರುವ ಸಹೋದರ ಸಹೋದರಿಯರಿಗೆ ಸಹಾಯಮಾಡಲು ವಿಶ್ವಾಸಿಗಳು ನಿರ್ಧರಿಸಿದರು. ವಿಶ್ವಾಸಿಗಳಲ್ಲಿ ಪ್ರತಿಯೊಬ್ಬರೂ ತಮ್ಮಿಂದಾದಷ್ಟನ್ನು ಅವರಿಗೆ ಕಳುಹಿಸಿಕೊಡಲು ಯೋಜನೆ ಮಾಡಿದರು.


ನನ್ನ ಸಹೋದರ ಸಹೋದರಿಯರೇ, ನೀವು ಸ್ವತಂತ್ರರಾಗಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾನೆ. ಆದರೆ ಪಾಪಮಯವಾದ ನಿಮ್ಮ ಸ್ವಭಾವವನ್ನು ಮೆಚ್ಚಿಸುವುದಕ್ಕಾಗಿ ನಿಮ್ಮ ಸ್ವತಂತ್ರವನ್ನು ನೆಪಮಾಡಿಕೊಳ್ಳಬೇಡಿ. ಆದರೆ ಪ್ರೀತಿಯಿಂದ ಒಬ್ಬರ ಸೇವೆಯನ್ನೊಬ್ಬರು ಮಾಡಿರಿ.


ಬಡಜನರಿಗೆ ಉದಾರವಾಗಿ ಕೊಡುವವನು ಯೆಹೋವನಿಗೆ ಸಾಲಕೊಡುತ್ತಾನೆ; ಅವನ ಕರುಣೆಯ ಕಾರ್ಯಕ್ಕೆ ಯೆಹೋವನು ಅವನ ಗೆ ಮರುಪಾವತಿ ಮಾಡುವನು.


ಆ ಮನುಷ್ಯನು, ‘ಕೊರ್ನೇಲಿಯನೇ! ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ. ನೀನು ಬಡಜನರಿಗೆ ಕೊಡುವಂಥವುಗಳನ್ನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನು ಕಳುಹಿಸುವ ಯಾರನ್ನಾದರೂ ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ. ನನ್ನನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ.”


ದೇವರೇ, ನಾನು ಈ ಜನರಿಗಾಗಿ ಮಾಡಿರುವ ಒಳ್ಳೆಯದನ್ನೆಲ್ಲಾ ಜ್ಞಾಪಿಸಿಕೊ.


ನೀತಿವಂತರಿಗೆ ದೊರೆಯುವ ಜಯಮಾಲೆಯು ಈಗ ನನಗೆ ಸಿದ್ಧವಾಗಿದೆ. ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಪ್ರಭುವೇ ನನಗೆ ಅದನ್ನು ಆ ದಿನದಂದು ಕೊಡುವನು. ನನಗೆ ಮಾತ್ರವಲ್ಲದೆ ಆತನ ಬರುವಿಕೆಯನ್ನು ಅಪೇಕ್ಷಿಸಿ ಅದಕ್ಕಾಗಿ ಕಾಯುತ್ತಿದ್ದವರಿಗೆಲ್ಲ ಆತನು ಆ ಜಯಮಾಲೆಯನ್ನು ದಯಪಾಲಿಸುವನು.


ದೇವಜನರಿಗೋಸ್ಕರವಾದ ಈ ಸಹಾಯದ ಬಗ್ಗೆ ನಾನು ನಿಮಗೆ ಬರೆಯುವುದು ನಿಜವಾಗಿಯೂ ಅಗತ್ಯವಿಲ್ಲ.


ನಾನು ಯೆಹೂದದ ಜನರಿಗೆ ಒಳ್ಳೆಯದನ್ನು ಮಾಡಿದೆನು. ಆದರೆ ಅವರೀಗ ನನಗೆ ಕೆಟ್ಟದ್ದನ್ನು ಮಾಡುತ್ತಿದ್ದಾರೆ. ಈಗ ಅವರು ನನ್ನನ್ನು ಕೊಲ್ಲುವುದಕ್ಕಾಗಿ ಒಂದು ಗುಂಡಿಯನ್ನು ತೋಡಿದ್ದಾರೆ. ಯೆಹೋವನೇ, ನಾನು ಮಾಡಿದ್ದು ನಿನ್ನ ಜ್ಞಾಪಕದಲ್ಲಿದೆಯೇ? ನಾನು ನಿನ್ನ ಎದುರಿಗೆ ನಿಂತುಕೊಂಡು ಈ ಜನರಿಗೆ ಒಳ್ಳೆಯದನ್ನು ಮಾಡೆಂದೂ ಅವರ ಮೇಲೆ ಕೋಪಗೊಳ್ಳಬಾರದೆಂದೂ ನಿನ್ನಲ್ಲಿ ಕೇಳಿಕೊಂಡೆ.


ಜನರು ಕಟ್ಟಿಗೆಯನ್ನೂ ಪ್ರಥಮಫಲಗಳನ್ನೂ ಸರಿಯಾದ ಸಮಯದಲ್ಲಿ ತರುವಂತೆ ನಾನು ಆಜ್ಞಾಪಿಸಿದೆನು. ನನ್ನ ದೇವರೇ, ಈ ಒಳ್ಳೆಯ ಕಾರ್ಯಗಳನ್ನೆಲ್ಲಾ ಮಾಡಿದ ನನ್ನನ್ನು ಮರೆಯಬೇಡ.


ಇದಾದ ಬಳಿಕ ತಮ್ಮನ್ನು ಶುದ್ಧಪಡಿಸಿಕೊಳ್ಳಲು ಲೇವಿಯರಿಗೆ ಆಜ್ಞಾಪಿಸಿದೆನು. ಅವರು ಶುದ್ಧಪಡಿಸಿಕೊಂಡ ಬಳಿಕ ಬಾಗಿಲುಗಳನ್ನು ಕಾಯಲು ಅವರನ್ನು ಕಳುಹಿಸಿದೆನು. ಯಾಕೆಂದರೆ ಸಬ್ಬತ್‌ದಿನವು ಪವಿತ್ರ ದಿನವೆಂದು ಎಲ್ಲರೂ ಆಚರಿಸುವಂತೆ ಹೀಗೆ ಮಾಡಿದೆನು. ದೇವರೇ, ನನ್ನ ಈ ಕಾರ್ಯವನ್ನು ನಿನ್ನ ನೆನಪಿನಲ್ಲಿಟ್ಟುಕೋ. ನನ್ನ ಮೇಲೆ ದಯವಿಟ್ಟು ನಿನ್ನ ಪ್ರೀತಿಯನ್ನು ತೋರಿಸು.


“ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ.


ಆದರೆ ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ, ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿ ನಮ್ಮನ್ನು ಶುದ್ಧೀಕರಿಸುತ್ತಾನೆ.


ನೀನು ಅರ್ಪಿಸಿದ ಕಾಣಿಕೆಗಳನ್ನೆಲ್ಲ ಆತನು ಜ್ಞಾಪಿಸಿಕೊಳ್ಳಲಿ. ನಿನ್ನ ಯಜ್ಞಗಳನ್ನೆಲ್ಲ ಆತನು ಸ್ವೀಕರಿಸಿಕೊಳ್ಳಲಿ.


ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನೆಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.


ಈ ದಾದಿಯರು ದೇವರಲ್ಲಿ ಭಯಭಕ್ತಿಯುಳ್ಳವರಾಗಿದ್ದ ಕಾರಣ ಆತನು ಅವರನ್ನೂ ಅವರ ಕುಟುಂಬಗಳನ್ನೂ ಅಭಿವೃದ್ಧಿಪಡಿಸಿದನು. ಇದಲ್ಲದೆ ಇಸ್ರೇಲರ ಸಂಖ್ಯೆಯು ಅಧಿಕವಾಗಿ ಬೆಳೆಯತೊಡಗಿತು.


ನೀನು ಹೋದಲ್ಲೆಲ್ಲಾ ಒಳ್ಳೆಯದನ್ನೇ ಮಾಡು. ಸ್ವಲ್ಪಕಾಲದ ಮೇಲೆ, ನಿನ್ನ ಸತ್ಕ್ರಿಯೆಗಳ ಫಲವನ್ನು ಹೊಂದಿಕೊಳ್ಳುವೆ.


ಆದರೆ ಯೆಹೋವನು, “ಅಳುವದನ್ನು ನಿಲ್ಲಿಸು. ಕಣ್ಣಿನಲ್ಲಿ ನೀರು ತುಂಬಿಕೊಳ್ಳಬೇಡ. ನಿನ್ನ ಕೆಲಸಕ್ಕಾಗಿ ನಿನಗೆ ಪ್ರತಿಫಲ ಸಿಕ್ಕುವುದು” ಎಂದು ಹೇಳುವನು. ಇದು ಯೆಹೋವನ ನುಡಿ. “ಇಸ್ರೇಲರು ತಮ್ಮ ಶತ್ರುಗಳ ಪ್ರದೇಶದಿಂದ ಹಿಂತಿರುಗಿ ಬರುವರು.


ನೀವು ಸತ್ಯವನ್ನು ತಿಳಿದುಕೊಂಡ ಆ ದಿನಗಳನ್ನು ನೆನಪು ಮಾಡಿಕೊಳ್ಳಿ. ನೀವು ಅನೇಕ ಸಂಕಟಗಳಲ್ಲಿ ಹೋರಾಟ ಮಾಡಿದರೂ, ಧೃತಿಗೆಡದೆ ಮುಂದುವರಿದಿರಿ.


“ಅದಕ್ಕೆ ಅವರು, ‘ನಮಗೆ ಯಾರೂ ಕೆಲಸ ಕೊಡಲಿಲ್ಲ’ ಎಂದು ಉತ್ತರಕೊಟ್ಟರು. “ಆ ಯಜಮಾನನು, ‘ಹಾಗಾದರೆ ನೀವು ಹೋಗಿ ನನ್ನ ತೋಟದಲ್ಲಿ ಕೆಲಸ ಮಾಡಿರಿ’ ಎಂದು ಹೇಳಿದನು.


ಎರಡು ತಲಾಂತು ಹೊಂದಿದ ಸೇವಕನೂ ಅದೇ ರೀತಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಎರಡು ತಲಾಂತು ಸಂಪಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು