Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:15 - ಪರಿಶುದ್ದ ಬೈಬಲ್‌

15 ಅಬ್ರಹಾಮನು ಇದರ ನೆರವೇರುವಿಕೆಗಾಗಿ ತಾಳ್ಮೆಯಿಂದ ಕಾದಿದ್ದನು. ತರುವಾಯ ಅವನಿಗೆ ದೇವರ ವಾಗ್ದಾನದ ಫಲ ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದುಕೊಂಡಿದ್ದು ವಾಗ್ದಾನವನ್ನು ಪಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಂತೆಯೇ, ಅಬ್ರಹಾಮನು ದೀರ್ಘಕಾಲ ಕಾದಿದ್ದು ದೇವರ ವಾಗ್ದಾನದ ಫಲವನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ವಾಗ್ದಾನದ ಫಲಕ್ಕೋಸ್ಕರ ಅಬ್ರಹಾಮನು ಬಹು ದಿವಸ ಕಾದುಕೊಂಡಿದ್ದು ಆ ಫಲವನ್ನು ದೇವರು ಹೇಳಿದ ಹಾಗೆಯೇ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಪಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅಬ್ರಾಹಾಮಾನ್ ತಾಳ್ಮೆನ್ ರ್‍ಹಾಲೊ, ಅನಿ ದೆವಾಕ್ನಾ ಯೆಲ್ಲ್ಯಾ ಗೊಸ್ಟಿಯಾಂಚೊ ಫಳ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:15
10 ತಿಳಿವುಗಳ ಹೋಲಿಕೆ  

ನೀವು ಸೋಮಾರಿಗಳಾಗಿರಬೇಕೆಂಬುದು ನಮ್ಮ ಅಪೇಕ್ಷೆಯಲ್ಲ. ದೇವರ ವಾಗ್ದಾನದ ಫಲಗಳನ್ನು ಪಡೆಯುವ ಜನರಂತೆ ನೀವಿರಬೇಕೆಂಬುದು ನಮ್ಮ ಅಪೇಕ್ಷೆ. ಆ ಜನರಿಗೆ ನಂಬಿಕೆ ಮತ್ತು ತಾಳ್ಮೆಯಿದ್ದುದರಿಂದ ಅವರು ದೇವರ ವಾಗ್ದಾನದಂತೆ ಫಲವನ್ನು ಪಡೆದರು.


ಆದರೆ ಇಸ್ರೇಲರಿಗೆ ಅನೇಕ ಮಕ್ಕಳಿದ್ದರು; ಅವರ ಸಂಖ್ಯೆಯು ಹೆಚ್ಚಾಗತೊಡಗಿತು. ಇಸ್ರೇಲರು ಬಲಗೊಂಡರು; ಈಜಿಪ್ಟಿನಲ್ಲೆಲ್ಲಾ ತುಂಬಿಕೊಂಡರು.


ಆದ್ದರಿಂದ ಅಬ್ರಾಮನು ಯೆಹೋವನಿಗೆ ವಿಧೇಯನಾದನು. ಅವನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟನು. ಅವನೊಡನೆ ಲೋಟನು ಸಹ ಹೋದನು. ಆಗ ಅಬ್ರಾಮನಿಗೆ ಎಪ್ಪತ್ತೈದು ವರ್ಷ ವಯಸ್ಸಾಗಿತ್ತು.


ದೇವರಿಂದ ಕರೆಯಲ್ಪಟ್ಟ ಜನರು ದೇವರ ವಾಗ್ದಾನಗಳನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಯನ್ನು ದೇವರಿಂದ ತಂದನು. ದೇವರ ಜನರು ಅವುಗಳನ್ನು ಶಾಶ್ವತವಾಗಿ ಹೊಂದಿಕೊಳ್ಳಲು ಸಾಧ್ಯ. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಜನರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು