Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:19 - ಪರಿಶುದ್ದ ಬೈಬಲ್‌

19 ಈ ನಿರೀಕ್ಷೆಯು ನಮ್ಮ ಆತ್ಮಗಳನ್ನು ಅಪಾಯದಲ್ಲಿ ಕೊಚ್ಚಿಕೊಂಡು ಹೋಗದಂತೆ ಕಾಪಾಡುವ ಬಲವಾದ ಸ್ಥಿರವಾದ ಲಂಗರಿನಂತಿದೆ. ಅದು ಸ್ವರ್ಗದಾಲಯದ ತೆರೆಯ ಮರೆಯಲ್ಲಿರುವ ಮಹಾ ಪವಿತ್ರಸ್ಥಳದ ಒಳಕ್ಕೆ ಪ್ರವೇಶಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಈ ನಂಬಿಕೆ, ನಿರೀಕ್ಷೆ, ನಮ್ಮ ಬಾಳನೌಕೆಯ ಸ್ಥಿರವಾದ ಹಾಗೂ ಸುರಕ್ಷಿತವಾದ ಲಂಗರಿನಂತಿದೆ. ಇದು ತೆರೆಯ ಹಿಂದಿರುವ ಸ್ವರ್ಗೀಯ ಗರ್ಭಗುಡಿಯನ್ನು ಪ್ರವೇಶಿಸುವಂಥದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಈ ಆಧಾರಗಳನ್ನು ಕೊಟ್ಟದ್ದರಲ್ಲಿ ದೇವರು ಸುಳ್ಳಾಡಿರಲಾರನು. ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಭರವಸಕ್ಕೆ ಯೋಗ್ಯವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಣ ದೇವಸಾನ್ನಿಧ್ಯವನ್ನು ಪ್ರವೇಶಿಸುವಂಥದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಈ ನಿರೀಕ್ಷೆಯು ನಮ್ಮ ಆತ್ಮಕ್ಕೆ ನಿಶ್ಚಯವಾದದ್ದೂ ಸ್ಥಿರವಾದದ್ದೂ ಆಗಿರುವ ಲಂಗರದ ಹಾಗಿದೆ. ಅದು ಅತಿ ಪರಿಶುದ್ಧಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಹಿ ಆಧಾರಾ ದಿತಾನಾ ದೆವ್ ಝುಟೆ ಬೊಲುನ್ ರ್‍ಹಾಯ್ನಾ. ತಿ ಆಶ್ಯಾ ಅಮ್ಚ್ಯಾ ಜಿವಾಕ್ ಗೊಕ್ಕೆ ಹೊವ್ನ್ ಬರೊಸ್ಯಾಕ್ ಹೊತ್ತೆ ಅನಿ ಘಟ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:19
33 ತಿಳಿವುಗಳ ಹೋಲಿಕೆ  

ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.


“ಬಳಿಕ ಆರೋನನು ಜನರಿಗೋಸ್ಕರವಾಗಿರುವ ಪಾಪಪರಿಹಾರಕ ಪಶುವಾದ ಹೋತವನ್ನು ವಧಿಸಬೇಕು. ಆರೋನನು ಈ ಹೋತದ ರಕ್ತವನ್ನು ತೆರೆಯ ಹಿಂಭಾಗದಲ್ಲಿರುವ ಕೋಣೆಗೆ ತೆಗೆದುಕೊಂಡು ಬರಬೇಕು. ಆರೋನನು ಹೋರಿಯ ರಕ್ತದಿಂದ ಮಾಡಿದಂತೆ ಹೋತದ ರಕ್ತದಿಂದಲೂ ಮಾಡಬೇಕು. ಆರೋನನು ಹೋತದ ರಕ್ತವನ್ನು ಕೃಪಾಸನದ ಮೇಲೂ ಮತ್ತು ಕೃಪಾಸನದ ಮುಂಭಾಗದಲ್ಲಿಯೂ ಚಿಮಿಕಿಸಬೇಕು.


ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು!


ಆದರೆ ಪ್ರಧಾನಯಾಜಕನು ಮಾತ್ರ ಎರಡನೆ ಕೊಠಡಿಯ ಒಳಗೆ ಹೋಗಬಹುದಿತ್ತು. ಅವನು ವರ್ಷಕ್ಕೊಮ್ಮೆ ಮಾತ್ರ ಅದರೊಳಗೆ ಹೋಗುತ್ತಿದ್ದನು. ಅವನು ತನ್ನೊಂದಿಗೆ ರಕ್ತವನ್ನು ತೆಗೆದುಕೊಳ್ಳದೆ ಎಂದೂ ಅದರೊಳಗೆ ಪ್ರವೇಶಿಸುತ್ತಿರಲಿಲ್ಲ. ತನಗೋಸ್ಕರವಾಗಿಯೂ ಜನರು ತಿಳಿಯದೆ ಮಾಡಿದ ಪಾಪಗಳಿಗಾಗಿಯೂ ಅವನು ಆ ರಕ್ತವನ್ನು ದೇವರಿಗೆ ಅರ್ಪಿಸುತ್ತಿದ್ದನು.


ಎರಡನೆ ತೆರೆಯ ಹಿಂದೆ “ಮಹಾ ಪವಿತ್ರಸ್ಥಳ”ವೆಂದು ಕರೆಸಿಕೊಳ್ಳುವ ಒಂದು ಕೊಠಡಿಯಿತ್ತು.


ಆಗ ದೇವಾಲಯದ ತೆರೆಯು ಮೇಲ್ಗಡೆಯಿಂದ ತಳಭಾಗದವರೆಗೂ ಹರಿದು ಎರಡು ಭಾಗವಾಯಿತು. ಭೂಮಿಯು ನಡುಗಿತು. ಬಂಡೆಗಳು ಒಡೆದುಹೋದವು.


ನೀವು ಕ್ರಿಸ್ತನ ಜೊತೆಯಲ್ಲಿ ಜೀವಂತವಾಗಿ ಎದ್ದುಬಂದಿರುವುದರಿಂದ ಪರಲೋಕದವುಗಳನ್ನು ಪಡೆಯಲು ಪ್ರಯತ್ನಿಸಿರಿ. ಕ್ರಿಸ್ತ ಯೇಸು ಪರಲೋಕದಲ್ಲಿ ದೇವರ ಬಲಗಡೆ ಆಸನಾರೂಢನಾಗಿದ್ದಾನೆ.


ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.


ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.


ಹಡಗು ಬಂಡೆಗೆ ಅಪ್ಪಳಿಸಬಹುದೆಂದು ನಾವಿಕರು ಭಯಪಟ್ಟರು. ಆದ್ದರಿಂದ ಅವರು ನಾಲ್ಕು ಲಂಗರುಗಳನ್ನು ನೀರಿನೊಳಗೆ ಇಳಿಯಬಿಟ್ಟರು. ಬಳಿಕ ಅವರು ಬೆಳಗಾಗಲೆಂದು ಪ್ರಾರ್ಥಿಸಿದರು.


ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.


ಆದ್ದರಿಂದ ಅವರು ಚುಕ್ಕಾಣಿಗಳನ್ನು ಬಿಗಿಯಾಗಿ ಹಿಡಿದುಕೊಂಡಿದ್ದ ಹಗ್ಗಗಳನ್ನು ಕತ್ತರಿಸಿಹಾಕಿದರು. ಬಳಿಕ ಮುಂಭಾಗದ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡದತ್ತ ನಡೆಸತೊಡಗಿದರು.


ಇದಕ್ಕೋಸ್ಕರವಾಗಿಯೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುವನು: “ಚೀಯೋನಿನಲ್ಲಿ ನಾನು ಒಂದು ಮೂಲೆಗಲ್ಲು ಇಡುವೆನು, ಇದು ಬಹು ಅಮೂಲ್ಯವಾದ ಕಲ್ಲು. ಈ ವಿಶೇಷವಾದ ಕಲ್ಲಿನ ಮೇಲೆ ಎಲ್ಲವೂ ಕಟ್ಟಲ್ಪಡುವದು. ಆ ಕಲ್ಲಿನ ಮೇಲೆ ಭರವಸವಿಡುವ ಯಾವನು ಆಶಾಭಂಗಪಡುವುದಿಲ್ಲ.


ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”


ಆದ್ದರಿಂದ ದೇವರ ಕೃಪಾಸಿಂಹಾಸನದ ಬಳಿಗೆ ಸಂಕೋಚಪಡದೆ ಬರೋಣ. ಕೊರತೆಯಲ್ಲಿರುವಾಗ ನಮಗೆ ಬೇಕಾದ ಸಹಾಯಕ್ಕಾಗಿ ಕೃಪೆಯನ್ನೂ ಕರುಣೆಯನ್ನೂ ಅಲ್ಲಿ ಹೊಂದಿಕೊಳ್ಳುವೆವು.


ದೇವರು ನಮ್ಮನ್ನು ಕ್ರಿಸ್ತನೊಂದಿಗೆ ಎಬ್ಬಿಸಿ ಆತನೊಂದಿಗೆ ಪರಲೋಕದಲ್ಲಿ ಸಿಂಹಾಸನದ ಮೇಲೆ ಕುಳ್ಳಿರಿಸಿದ್ದಾನೆ. ಕ್ರಿಸ್ತ ಯೇಸುವಿನಲ್ಲಿರುವ ನಮಗಾಗಿ ದೇವರು ಇದನ್ನು ಮಾಡಿದನು.


ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.


ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.


ಯೆಹೋವನೇ, ನನಗಿರುವ ನಿರೀಕ್ಷೆ ಯಾವುದು? ನನ್ನ ನಿರೀಕ್ಷೆಯು ನೀನೇ.


ಸೆರೆಹಿಡಿಯಲ್ಪಟ್ಟವರೇ, ಮನೆಗೆ ಹೋಗಿ. ಈಗ ನಿಮಗೊಂದು ನಿರೀಕ್ಷೆಯಿದೆ. ನಾನು ನಿಮಗೆ ಖಂಡಿತವಾಗಿ ಹೇಳುವುದೇನೆಂದರೆ, ನಾನು ತಿರುಗಿ ಬರುತ್ತೇನೆ.


ಸಭೆಯಲ್ಲಿದ್ದ ಜನರಲ್ಲಿ ಕೆಲವರು ಸದ್ದುಕಾಯರಾಗಿದ್ದರು; ಮತ್ತೆ ಕೆಲವರು ಫರಿಸಾಯರಾಗಿದ್ದರು. ಆದ್ದರಿಂದ ಪೌಲನು, “ನನ್ನ ಸಹೋದರರೇ, ನಾನು ಫರಿಸಾಯನು! ನನ್ನ ತಂದೆಯೂ ಫರಿಸಾಯನಾಗಿದ್ದನು! ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!” ಎಂದು ಕೂಗಿ ಹೇಳಿದನು.


ಅಬ್ರಹಾಮನಿಗೆ ಮಕ್ಕಳಾಗುವ ಆಸ್ಪದವೇ ಇರಲಿಲ್ಲ. ಆದರೂ ಅವನು ದೇವರನ್ನು ನಂಬಿ ತನ್ನ ನಿರೀಕ್ಷೆಯಲ್ಲಿಯೇ ಮುಂದುವರೆದನು. ಆದಕಾರಣವೇ ಅವನು ಅನೇಕ ಜನಾಂಗಗಳಿಗೆ ತಂದೆಯಾದನು. ದೇವರು ಅವನಿಗೆ, “ನೀನು ಅನೇಕ ಜನಾಂಗಗಳನ್ನು ಪಡೆಯುವೆ” ಎಂದು ಹೇಳಿದ್ದಂತೆಯೇ ಇದಾಯಿತು.


ನಾವು ಬಲಶಾಲಿಗಳಾಗಿದ್ದೇವೆ ಎಂಬುದಕ್ಕೆ ಈ ತಾಳ್ಮೆಯೇ ಆಧಾರ. ನಮಗೆ ನಿರೀಕ್ಷೆಯನ್ನು ಕೊಡುವಂಥದ್ದು ಈ ಆಧಾರವೇ.


ಆದ್ದರಿಂದ ನಂಬಿಕೆ, ನಿರೀಕ್ಷೆ ಮತ್ತು ಪ್ರೀತಿ ಶಾಶ್ವತವಾದವುಗಳಾಗಿವೆ. ಆದರೆ ಇವುಗಳಲ್ಲಿ ಅತ್ಯುನ್ನತವಾದದ್ದು ಪ್ರೀತಿಯೇ.


ಮಹಿಮಾತಿಶಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಈ ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಆ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ.


ನಮ್ಮ ಪ್ರಭುವಾಗಿರುವ ಯೇಸು ಕ್ರಿಸ್ತನ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ದೇವರು ಮಹಾ ಕರುಣಾಳುವಾಗಿದ್ದಾನೆ. ಆತನು ತನ್ನ ಕರುಣೆಯಿಂದಲೇ ನಮಗೆ ಹೊಸ ಜೀವವನ್ನು ನೀಡಿದನು. ಸತ್ತವರೊಳಗಿಂದ ಎದ್ದುಬಂದ ಯೇಸು ಕ್ರಿಸ್ತನ ಮೂಲಕ ಅದು ನಮಗೆ ಒಂದು ಜೀವಂತ ನಿರೀಕ್ಷೆಯನ್ನು ತರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು