ಇಬ್ರಿಯರಿಗೆ 6:9 - ಪರಿಶುದ್ದ ಬೈಬಲ್9 ಪ್ರಿಯ ಸ್ನೇಹಿತರೇ, ನಾವು ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದರೂ ನಿಮ್ಮಿಂದ ಇದಕ್ಕಿಂತಲೂ ಉತ್ತಮವಾದ ಕಾರ್ಯಗಳನ್ನು ಅಪೇಕ್ಷಿಸುತ್ತೇವೆ. ರಕ್ಷಣೆಗೆ ಸಂಬಂಧಿಸಿದ ಕಾರ್ಯಗಳನ್ನು ನೀವು ಮಾಡುತ್ತೀರೆಂದು ನಾವು ದೃಢವಾಗಿ ನಂಬಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಪ್ರಿಯರೇ, ಈ ರೀತಿಯಾಗಿ ನಾವು ಮಾತನಾಡಿದರೂ ನಿಮ್ಮ ವಿಷಯವಾಗಿಯೂ ರಕ್ಷಣೆಗೆ ಸಂಬಂಧಿಸಿದವುಗಳಲ್ಲಿಯೂ ನೀವು ಉತ್ತಮರಾಗಿದ್ದೀರೆಂದು ನಂಬಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಪ್ರಿಯರೇ, ನಾವು ಈ ರೀತಿ ಹೇಳಿದೆವಾದರೂ ನಿಮ್ಮ ಪರಿಸ್ಥಿತಿ ಉತ್ತಮವಾಗಿದೆ ಮತ್ತು ನೀವು ಜೀವೋದ್ಧಾರದ ಮಾರ್ಗದಲ್ಲಿ ಇದ್ದೀರಿ ಎಂಬ ದೃಢವಾದ ನಂಬಿಕೆ ನನಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದರೆ ಪ್ರಿಯರೇ, ಈ ರೀತಿಯಾಗಿ ನಾವು ಮಾತಾಡಿದರೂ ನೀವು ಇದಕ್ಕಿಂತ ಉತ್ತಮವಾಗಿಯೂ ರಕ್ಷಣಕರವಾಗಿಯೂ ಇರುವ ಸ್ಥಿತಿಯಲ್ಲಿದ್ದೀರೆಂದು ದೃಢವಾಗಿ ನಂಬಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಪ್ರಿಯರೇ, ನಾವು ಈ ರೀತಿಯಾಗಿ ಮಾತನಾಡಿದರೂ ನಿಮ್ಮ ವಿಷಯವಾಗಿಯೂ ನೀವು ಉತ್ತಮವಾದವುಗಳನ್ನೂ ರಕ್ಷಣೆಯ ಕಾರ್ಯಗಳನ್ನೂ ಹೊಂದಿದ್ದೀರಿ ಎಂಬ ನಿಶ್ಚಯ ನಮಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಪ್ರೆಮಾಚ್ಯಾ ಬಾವಾನು, ಅಮಿ ಅಶೆ ಬೊಲ್ಯಾರ್‍ಬಿ ತುಮಿ ಹೆಚ್ಯಾನ್ಕಿಂತಾಬಿ ಬರೆ ಅನಿ ಸುಟ್ಕೆಚ್ಯಾ ವಾಟೆಕುಚ್ ಹಾಸಿ ಮನ್ತಲೆ ಮಾಕಾ ವಿಶ್ವಾಸ್ ಹಾಯ್. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.