ಇಬ್ರಿಯರಿಗೆ 7:11 - ಪರಿಶುದ್ದ ಬೈಬಲ್11 ಲೇವಿಕುಲದ ಯಾಜಕತ್ವದ ಆಧಾರದ ಮೇಲೆ ಧರ್ಮಶಾಸ್ತ್ರವನ್ನು ಜನರಿಗೆ ಕೊಡಲಾಯಿತು. ಆದರೆ ಆ ಯಾಜಕತ್ವದಿಂದ ಜನರನ್ನು ಆತ್ಮಿಕತೆಯಲ್ಲಿ ಪರಿಪೂರ್ಣರನ್ನಾಗಿ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಬೇರೊಂದು ರೀತಿಯ ಯಾಜಕನು ಬರುವುದು ಅತ್ಯವಶ್ಯಕವಾಗಿತ್ತು. ಅಂದರೆ ಮೆಲ್ಕಿಜೆದೇಕನಂತಹ ಯಾಜಕನೇ ಹೊರತು ಆರೋನನಂತವನಲ್ಲ ಎಂಬುದು ಅದರ ಅರ್ಥ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇಸ್ರಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿತ್ತಾದರೆ, ಆರೋನನ ಪರಂಪರೆಗೆ ಸೇರದೆ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಕಾಣಿಸಿಕೊಳ್ಳುವ ಅವಶ್ಯಕತೆ ಏನಿತ್ತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇಸ್ರಾಯೇಲ್ಯರಿಗೆ ಉಂಟಾದ ಧರ್ಮಶಾಸ್ತ್ರವು ಲೇವಿಕ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆಯಷ್ಟೆ. ಆ ಯಾಜಕತ್ವದಿಂದ ಸಂಪೂರ್ಣಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿಜೆದೇಕನ ತರಹದ ಬೇರೊಬ್ಬ ಯಾಜಕನು ಬರುವದಕ್ಕೆ ಅವಶ್ಯವೇನಿತ್ತು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಲೇವಿಯರ ಯಾಜಕತ್ವದ ಆಧಾರದ ಮೇಲೆ ಜನರು ನಿಯಮವನ್ನು ಪಡೆದಿದ್ದರು. ಈ ಯಾಜಕತ್ವದ ಮೂಲಕವೇ ಪರಿಪೂರ್ಣತೆಯು ಉಂಟಾಗಿದ್ದರೆ, ಆರೋನನ ಕ್ರಮಾನುಸಾರವಾಗಿರದೆ ಮೆಲ್ಕಿಜೆದೇಕನ ಕ್ರಮದ ಪ್ರಕಾರ ಬೇರೊಬ್ಬ ಯಾಜಕನು ಎದ್ದೇಳುವ ಅವಶ್ಯವೇನಿತ್ತು? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಲೆವಿಚ್ಯಾ ಘರಾನ್ಯಾಚ್ಯಾ ಯಾಜಕ್ ಕಾಮಾಚ್ಯಾ ವೈನಾ ಲೊಕಾಕ್ನಿ ದಿವ್ನ್ ಹೊತಾ, ಹೊಲ್ಯಾರ್ಬಿ ಯಾಜಕ್ ಕಾಮಾಕ್ನಾ ಲೊಕಾಕ್ನಿ ಆತ್ಮ್ಯಾನ್ ಸಂಪುರ್ನ್ ಕರುಕ್ ಹೊವ್ಕ್ ನಾ, ತಸೆ ಹೊವ್ನ್ ದುಸ್ರ್ಯಾ ನಮನಿಚೊ ಯಾಜಕ್ ಯೆತಲೊ ತೆಂಕಾ ಪಾಜೆಚ್ ಹೊವ್ನ್ ಹೊತ್ತೊ, ತಸೆ ಮಟ್ಲ್ಯಾರ್ ಮೆಲ್ಕಿಜೆದೆಕ್ ಸಾರ್ಕೊ ಯಾಜಕುಚ್ ಪಾಜೆ ಹೊಲ್ಲೊ, ಅನಿ ಆರೊನಾ ಸಾರ್ಕೊಸೊ ನ್ಹಯ್ ಮನ್ತಲೆ ಹೆಚೊ ಅರ್ಥ್. ಅಧ್ಯಾಯವನ್ನು ನೋಡಿ |