Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:12 - ಪರಿಶುದ್ದ ಬೈಬಲ್‌

12 ಬೇರೊಬ್ಬ ಯಾಜಕನು ಬಂದರೆ, ಆಗ ಧರ್ಮಶಾಸ್ತ್ರವು ಬದಲಾಗಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯಾಜಕತ್ವವು ಬದಲಾಗುವುದಾದರೆ ಧರ್ಮಶಾಸ್ತ್ರವೂ ಸಹ ಬದಲಾಗುವುದು ಅಗತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯಾಜಕತ್ವ ಬದಲಾವಣೆಗೊಂಡರೆ ಧರ್ಮಶಾಸ್ತ್ರವೂ ಬದಲಾವಣೆಗೊಳ್ಳಬೇಕಾದುದು ಅಗತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಜಕತ್ವವು ಬೇರೆಯಾದರೆ ಧರ್ಮಶಾಸ್ತ್ರವು ಕೂಡ ಬೇರೆಯಾಗುವದು ಅಗತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯಾಜಕತ್ವವು ಬದಲಾದಾಗ ನಿಯಮವು ಸಹ ಬದಲಾಗುವುದು ಅಗತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ದುಸ್ರೊ ಯಾಜಕ್ ಯೆಲ್ಯಾರ್ ತನ್ನಾ ಮೊಯ್ಜೆಚೆ ಖಾಯ್ದೆ ಬದ್ಲುಕುಚ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:12
7 ತಿಳಿವುಗಳ ಹೋಲಿಕೆ  

ನಾನು ಅವರಲ್ಲಿ ಕೆಲವರನ್ನು ಯಾಜಕರನ್ನಾಗಿಯೂ ಲೇವಿಯರನ್ನಾಗಿಯೂ ಆರಿಸುವೆನು.” ಇವು ಯೆಹೋವನ ನುಡಿಗಳು.


ನಿನ್ನ ಅಕ್ಕತಂಗಿಯಂದಿರನ್ನು ನಾನು ನಿನ್ನ ಬಳಿಗೆ ತಂದು ಅವರನ್ನು ನಿನ್ನ ಮಕ್ಕಳನ್ನಾಗಿ ಮಾಡುವೆನು. ಅದು ನಮ್ಮ ಒಡಂಬಡಿಕೆಯಲ್ಲಿಲ್ಲದಿದ್ದರೂ ನಾನು ಅದನ್ನು ನಿನಗಾಗಿ ಮಾಡುವೆನು. ಆಗ ನೀನು ಮಾಡಿದ ಭಯಂಕರ ಸಂಗತಿಗಳನ್ನು ಜ್ಞಾಪಕಕ್ಕೆ ತಂದು ನೀನು ನಾಚಿಕೊಳ್ಳುವಿ.


ಲೇವಿಕುಲದ ಯಾಜಕತ್ವದ ಆಧಾರದ ಮೇಲೆ ಧರ್ಮಶಾಸ್ತ್ರವನ್ನು ಜನರಿಗೆ ಕೊಡಲಾಯಿತು. ಆದರೆ ಆ ಯಾಜಕತ್ವದಿಂದ ಜನರನ್ನು ಆತ್ಮಿಕತೆಯಲ್ಲಿ ಪರಿಪೂರ್ಣರನ್ನಾಗಿ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಬೇರೊಂದು ರೀತಿಯ ಯಾಜಕನು ಬರುವುದು ಅತ್ಯವಶ್ಯಕವಾಗಿತ್ತು. ಅಂದರೆ ಮೆಲ್ಕಿಜೆದೇಕನಂತಹ ಯಾಜಕನೇ ಹೊರತು ಆರೋನನಂತವನಲ್ಲ ಎಂಬುದು ಅದರ ಅರ್ಥ.


ನಾವು ಕ್ರಿಸ್ತನನ್ನು ಕುರಿತು ಇವುಗಳನ್ನು ಹೇಳುತ್ತಿರುವೆವು. ಆತನು ಬೇರೊಂದು ಕುಲಕ್ಕೆ ಸೇರಿದವನು. ಆ ಕುಲದವರಲ್ಲಿ ಯಾರೇ ಆಗಲಿ ಎಂದೂ ಯಾಜಕರಾಗಿ ಸೇವೆ ಮಾಡಿರಲಿಲ್ಲ.


ಆ ಯಜ್ಞಗಳು ಮತ್ತು ಕಾಣಿಕೆಗಳು ಅನ್ನಪಾನಾದಿಗಳನ್ನೂ ವಿಶೇಷವಾದ ಸ್ನಾನಗಳನ್ನೂ ಕುರಿತಾಗಿದ್ದವು. ಅವು ದೇಹಕ್ಕೆ ಸಂಬಂಧಿಸಿದ ನಿಯಮಗಳೇ ಹೊರತು ಜನರ ಹೃದಯಕ್ಕೆ ಸಂಬಂಧಿಸಿದ್ದವುಗಳಲ್ಲ. ಜನರಿಗೆ ದೇವರ ಹೊಸ ಮಾರ್ಗವು ಲಭಿಸುವ ಕಾಲದವರೆಗೆ, ಅವರು ಅನುಸರಿಸಲೆಂದು ಆ ನಿಯಮಗಳನ್ನು ದೇವರೇ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು