ಇಬ್ರಿಯರಿಗೆ 7:2 - ಪರಿಶುದ್ದ ಬೈಬಲ್2 ಅಬ್ರಹಾಮನು ಅವನಿಗೆ ತನ್ನಲ್ಲಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. ಸಾಲೇಮಿನ ರಾಜನಾದ ಮೆಲ್ಕಿಜೆದೇಕನೆಂಬ ಹೆಸರಿಗೆ ಎರಡು ಅರ್ಥಗಳಿವೆ. ಮೆಲ್ಕಿಜೆದೇಕನೆಂದರೆ, “ನೀತಿರಾಜ” ಎಂಬರ್ಥ. “ಸಾಲೇಮಿನ ರಾಜ”ನೆಂದರೆ “ಸಮಾಧಾನದ ರಾಜ” ಎಂದರ್ಥ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. “ಮೆಲ್ಕಿಜೆದೇಕ್”, ಎಂಬ ಹೆಸರಿಗೆ ಮೊದಲು “ನೀತಿಯ ರಾಜ” ಎಂದೂ, ಅನಂತರ “ಸಾಲೇಮಿನ ರಾಜ” ಎಂದರೆ “ಸಮಾಧಾನದ ರಾಜ” ಎಂದೂ ಅರ್ಥ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಅಬ್ರಹಾಮನು ತಾನು ಗೆದ್ದು ತಂದಿದ್ದ ಎಲ್ಲದರಲ್ಲೂ ದಶಮಾಂಶವನ್ನು ಆತನಿಗೆ ಕೊಟ್ಟು ಗೌರವಿಸಿದನು. ಮೆಲ್ಕಿಸದೇಕ ಎಂಬ ಹೆಸರಿನ ಮೂಲಾರ್ಥ, ‘ನ್ಯಾಯನೀತಿಯ ಅರಸ.’ ಅಲ್ಲದೆ, ಆತನು ಸಾಲೇಮಿನ ಅರಸನೂ ಆಗಿದ್ದನು. ಆದ್ದರಿಂದ ‘ಶಾಂತಿಸಮಾಧಾನದ ಅರಸ’ ಎಂಬ ಅರ್ಥವೂ ಉಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. ಅವನ ಹೆಸರಿನ ಅರ್ಥವು ನೀತಿರಾಜ ಎಂಬದು; ಇದಲ್ಲದೆ ಅವನು ಸಾಲೇವಿುನರಾಜ ಅಂದರೆ ಸಮಾಧಾನರಾಜ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅಬ್ರಹಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತರಲ್ಲಿ ಒಂದು ಭಾಗವನ್ನು ಕೊಟ್ಟನು. ಅವನ ಹೆಸರಿಗೆ ಮೊದಲನೆಯದಾಗಿ, “ನೀತಿರಾಜನು” ಎಂದೂ ತರುವಾಯ “ಸಾಲೇಮಿನ ರಾಜ,” ಅಂದರೆ, “ಸಮಾಧಾನದ ಅರಸನು” ಎಂದರ್ಥ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತೆಕಾ ಅಬ್ರಾಹಾಮಾನ್ ಅಪ್ನಿ ಜಿಕುನ್ ಹಾನಲ್ಯಾ ಸಗ್ಳ್ಯಾ ಸಾಮಾನಾತ್ನಿ ಧಾತ್ಲೊ ಎಕ್ ವಾಟೊ ದಿಲ್ಯಾನ್, ತೆಜಾ ನಾವಾಚೊ ಅರ್ತ್ “ನಿತಿವಂತ್ ರಾಜಾ” ಥವ್ಡೆಚ್ ನಸ್ತಾನಾ, ತೊ ಸಾಲೆಮಾಚೊ ರಾಜಾ ಮಟ್ಲ್ಯಾರ್ “ಸಮಾಧಾನಾಚೊ ರಾಜಾ”. ಅಧ್ಯಾಯವನ್ನು ನೋಡಿ |