Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:4 - ಪರಿಶುದ್ದ ಬೈಬಲ್‌

4 ಮೆಲ್ಕಿಜೆದೇಕನು ಎಷ್ಟು ದೊಡ್ಡವನೆಂಬುದನ್ನು ಸ್ವಲ್ಪ ಆಲೋಚಿಸಿರಿ. ನಮ್ಮ ಮೂಲಪಿತೃವಾದ ಅಬ್ರಹಾಮನು, ಯುದ್ಧದಲ್ಲಿ ತಾನು ಜಯಿಸಿದ್ದರಲ್ಲಿ ಹತ್ತನೆಯ ಒಂದು ಭಾಗವನ್ನು ಅವನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈತನು ಎಷ್ಟು ಮಹಾನ್ ಆಗಿದ್ದನೆಂದು ಯೋಚಿಸಿರಿ. ನಮ್ಮ ಮೂಲಪಿತೃವಾದ ಅಬ್ರಹಾಮನು ತಾನು ಯುದ್ಧದಲ್ಲಿ ಗೆದ್ದು ತಂದ ಶ್ರೇಷ್ಠ ವಸ್ತುಗಳಲ್ಲಿ ಹತ್ತರಲ್ಲಿ ಒಂದು ಭಾಗವನ್ನು ಅವನಿಗೆ ಕೊಟ್ಟನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಮ್ಮ ಪಿತಾಮಹ ಅಬ್ರಹಾಮನೇ ತಾನು ಗೆದ್ದುತಂದ ಶ್ರೇಷ್ಠ ವಸ್ತುಗಳಲ್ಲಿ ದಶಮಾಂಶವನ್ನು ಈ ಮೆಲ್ಕಿಸದೇಕನಿಗೆ ಸಲ್ಲಿಸಿ ಗೌರವಿಸಬೇಕಾದರೆ ಆತನು ಎಂಥ ಮಹಾಪುರುಷನೆಂದು ನೀವೇ ಆಲೋಚಿಸಿ ನೋಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈ ಮನುಷ್ಯನು ಎಷ್ಟು ದೊಡ್ಡವನೆಂದು ಆಲೋಚಿಸಿರಿ. ನಮ್ಮ ಮೂಲಪಿತೃವಾದ ಅಬ್ರಹಾಮನು ತಾನು ಸುಲುಕೊಂಡು ಬಂದ ಶ್ರೇಷ್ಠವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಅವನಿಗೆ ಕೊಟ್ಟನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೆಲ್ಕಿಜೆದೇಕನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ಮೂಲ ಪಿತೃವಾದ ಅಬ್ರಹಾಮನು ಗೆದ್ದು ತಂದವುಗಳಲ್ಲಿ ಹತ್ತರಲ್ಲಿ ಒಂದು ಭಾಗವನ್ನು ಇವನಿಗೇ ಕೊಟ್ಟನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಮ್ಚೊ ವಾಡ್ ವಡಿಲ್ ಅಬ್ರಾಹಾಮಾನ್ ಝಗ್ಡ್ಯಾತ್ ಅಪ್ನಿ ಜಿಕುನ್ ಹಾನಲ್ಯಾತ್ಲೆ ಧಾತ್ ಎಕ್ ಭಾಗ್ ತೆಕಾ ದಿಲ್ಯಾನ್; ತಸಿ ಹೊಲ್ಯಾರ್, ತೊ ಮೆಲ್ಕಿಜೆದೆಕ್ ಕವ್ಡೊ ಮೊಟೊ ಮನುನ್ ಚಿಂತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:4
9 ತಿಳಿವುಗಳ ಹೋಲಿಕೆ  

ನಿನ್ನ ಶತ್ರುಗಳನ್ನು ಸೋಲಿಸಲು ನಿನಗೆ ಸಹಾಯ ಮಾಡಿದ ಮಹೋನ್ನತನಾದ ದೇವರಿಗೆ ಕೊಂಡಾಟವಾಗಲಿ.” ಅಬ್ರಾಮನು ಯುದ್ಧದಿಂದ ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕೀಚೆದೆಕನಿಗೆ ಕೊಟ್ಟನು.


“ನನ್ನ ಸಹೋದರರೇ, ನಮ್ಮ ಪಿತೃವಾದ ದಾವೀದನ ಬಗ್ಗೆ ನಾನು ನಿಮಗೆ ನಿಜವಾಗಿಯೂ ಹೇಳಬಲ್ಲೆನು. ಅವನು ಸತ್ತುಹೋದನು ಮತ್ತು ಅವನಿಗೆ ಸಮಾಧಿಯಾಯಿತು. ಅವನ ಸಮಾಧಿಯು ನಮ್ಮ ಮಧ್ಯದಲ್ಲಿ ಇಂದಿನವರೆಗೂ ಇದೆ.


ಹೀಗೆ ಪವಿತ್ರಗ್ರಂಥದ ಈ ಮಾತುಗಳು ನೆರವೇರಿದವು: “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಒಪ್ಪಿಕೊಂಡು ಅವನನ್ನು ನೀತಿವಂತನೆಂದು ಪರಿಗಣಿಸಿದನು.” ಅಬ್ರಹಾಮನನ್ನು “ದೇವರ ಸ್ನೇಹಿತ” ನೆಂದು ಕರೆಯಲಾಯಿತು.


ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು