Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 8:11 - ಪರಿಶುದ್ದ ಬೈಬಲ್‌

11 ಒಬ್ಬನು ಸಹೋದರನಿಗಾಗಲಿ, ಬೇರೆಯವರಿಗಾಗಲಿ ಬೋಧಿಸಬೇಕಾಗಿರುವುದಿಲ್ಲ; ದೇವರನ್ನು ತಿಳಿದುಕೊಳ್ಳಿ ಎಂದು ಹೇಳಬೇಕಾಗಿರುವುದಿಲ್ಲ. ಏಕೆಂದರೆ ಅತ್ಯಂತ ಪ್ರಮುಖರನ್ನು ಮೊದಲುಗೊಂಡು ಅತ್ಯಂತ ಅಲ್ಪರಾದವರೆಲ್ಲರೂ ನನ್ನನ್ನು ತಿಳಿದುಕೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ “ಕರ್ತನನ್ನು ತಿಳಿದುಕೊಳ್ಳಿರಿ” ಎಂದು ಬೋಧಿಸಬೇಕಾಗಿರುವುದಿಲ್ಲ. ಏಕೆಂದರೆ ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ‘ಸರ್ವೇಶ್ವರನನ್ನು ಅರಿತುಕೊಳ್ಳಿರಿ’ ಎಂದು ನೆರೆಯವನಿಗಾಗಲಿ, ಸೋದರನಿಗಾಗಲಿ ಯಾರೂ ಬೋಧಿಸಬೇಕಾಗಿಲ್ಲ. ಹಿರಿಯಕಿರಿಯರು ಎಲ್ಲರೂ ನನ್ನನ್ನು ಅರಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಒಂದೇ ಊರಿನವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಕರ್ತನ ಜ್ಞಾನವನ್ನು ಪಡೆಯಿರಿ ಎಂದು ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ, ತನ್ನ ಸಹೋದರನಿಗೂ, ‘ಕರ್ತದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಎಕ್ಲೊಬಿ ಭಾವಾಕ್ ಹೊಂವ್ದಿ, ದುಸ್ರ್ಯಾಕ್ ಹೊಂವ್ದಿ ಕಾಯ್ ಶಿಕ್ವುತಲೆ ರ್‍ಹಾಯ್ನಾ, ದೆವಾಕ್ ಕಳ್ದುನ್ ಘೆವಾ ಮನ್ತಲೆ ರ್‍ಹಾಯ್ನಾ, ಕಶ್ಯಾಕ್ ಮಟ್ಲ್ಯಾರ್ ಲೈ ಮುಖ್ಯ್ ಹೊತ್ತ್ಯಾಂಚ್ಯಾಕ್ನಾ ಲೈ ಕಮಿಚ್ಯಾ ಮಾನ್ಸಾನ್ ಸಾಂಗಲ್ಲೆ ಸಗ್ಳ್ಯಾನಿಬಿ ಮಾಕಾ ವಳಕ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 8:11
18 ತಿಳಿವುಗಳ ಹೋಲಿಕೆ  

ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಠರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.


ನಿನ್ನ ಮಕ್ಕಳು ದೇವರನ್ನು ಅನುಸರಿಸುವರು. ಆತನು ಅವರಿಗೆ ಬೋಧಿಸುವನು. ನಿನ್ನ ಮಕ್ಕಳಿಗೆ ನಿಜವಾದ ಶಾಂತಿ ಇರುವದು.


‘ದೇವರು ಎಲ್ಲಾ ಜನರಿಗೆ ಉಪದೇಶಿಸುವನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಜನರು ತಂದೆಗೆ ಕಿವಿಗೊಟ್ಟು ಆತನಿಂದ ಕಲಿತುಕೊಳ್ಳುವರು. ಆ ಜನರು ನನ್ನ ಬಳಿಗೆ ಬರುವರು.


ಕ್ರಿಸ್ತನು ನಿಮಗೆ ವಿಶೇಷವಾದ ವರವನ್ನು ದಯಪಾಲಿಸಿರುವನು. ಅದು ನಿಮ್ಮಲ್ಲಿ ಇನ್ನೂ ಇದೆ. ಆದ್ದರಿಂದ ನಿಮಗೆ ಯಾವ ಉಪದೇಶಕರ ಅಗತ್ಯವೂ ಇಲ್ಲ. ಆತನು ನಿಮಗೆ ಕೊಟ್ಟಿರುವ ವರವು ನಿಮಗೆ ಎಲ್ಲವನ್ನೂ ಉಪದೇಶಿಸುತ್ತದೆ. ಅದು ನಿಜವಾದುದು, ಸುಳ್ಳಲ್ಲ. ಆದ್ದರಿಂದ ಅದರ ಉಪದೇಶಕ್ಕನುಸಾರವಾಗಿ ನೀವು ಆತನಲ್ಲಿ ನೆಲೆಗೊಂಡಿರಿ.


ಅವರಲ್ಲಿ ನನ್ನನ್ನು ಅರಿತುಕೊಳ್ಳುವ ಬಯಕೆ ಉಂಟಾಗುವಂತೆ ಮಾಡುತ್ತೇನೆ. ನಾನೇ ಯೆಹೋವನು ಎಂಬುದನ್ನು ಅವರು ತಿಳಿದುಕೊಳ್ಳುವರು. ಅವರು ನನ್ನ ಜನರಾಗುವರು ಮತ್ತು ನಾನು ಅವರ ದೇವರಾಗುವೆನು. ನಾನು ಹೀಗೇಕೆ ಮಾಡುತ್ತೇನೆಂದರೆ ಬಾಬಿಲೋನಿನಲ್ಲಿ ಸೆರೆಯಾಳುಗಳಾಗಿದ್ದ ಜನರು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗುತ್ತಾರೆ.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಎಲ್ಲಾ ಜನರು ಅಂದರೆ ಕನಿಷ್ಠರಾದವರು ಮತ್ತು ಅತಿಮುಖ್ಯರಾದವರು ಸಿಮೋನನು ಹೇಳಿದ ಸಂಗತಿಗಳನ್ನು ನಂಬಿದ್ದರು. “ಈ ಮನುಷ್ಯನಲ್ಲಿ ‘ಮಹಾಶಕ್ತಿ’ ಎಂಬ ದೇವರ ಶಕ್ತಿಯಿದೆ!” ಎಂದು ಜನರು ಅವನ ಬಗ್ಗೆ ಹೇಳುತ್ತಿದ್ದರು.


ಆಗ ಎಲ್ಲಾ ಕಡೆಗಳಲ್ಲಿರುವ ಜನರು ಯೆಹೋವನ ಮಹಿಮೆಯನ್ನು ತಿಳಿದುಕೊಳ್ಳುವರು. ಹೇಗೆ ನೀರು ಸಮುದ್ರಕ್ಕೆ ಹರಿಯುತ್ತದೋ ಹಾಗೆ ಈ ವರ್ತಮಾನವು ಎಲ್ಲಾ ಕಡೆಗೆ ಹಬ್ಬುವದು.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.


ಆಗ ನಾನು ಅವರ ದೇವರೆಂದೂ ನಾನು ಅವರೊಂದಿಗೆ ಇದ್ದೇನೆ ಎಂದೂ ಅವರು ತಿಳಿದುಕೊಳ್ಳುವರು. ಇಸ್ರೇಲ್ ಜನಾಂಗವು ಸಹ ತಾವು ನನ್ನ ಜನರು ಎಂದು ತಿಳಿದುಕೊಳ್ಳುವರು.” ಇದು ಒಡೆಯನಾದ ಯೆಹೋವನ ನುಡಿ.


ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.


ದೇವರ ಸೇವೆ ಮಾಡುವದನ್ನು ತಿಳಿದಿದ್ದ ಲೇವಿಯರನ್ನು ಹಿಜ್ಕೀಯನು ಪ್ರೋತ್ಸಾಹಿಸಿದನು. ಜನರು ಏಳು ದಿವಸ ಹಬ್ಬವನ್ನು ಆಚರಿಸಿ ಸಮಾಧಾನಯಜ್ಞವನ್ನು ಸಮರ್ಪಿಸಿದರು; ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿದರು.


ಯೆಹೂದದಲ್ಲಿ ಅಳಿದುಳಿದ ಕೆಲವು ಜನರಿದ್ದರು. ಆ ಜನರು ಈಜಿಪ್ಟಿನಲ್ಲಿ ನೆಲೆಸಲು ಬಂದರು. ಆದರೆ ನಾನು ಯೆಹೂದಕುಲದ ಆ ಕೆಲವು ಅಳಿದುಳಿದವರನ್ನು ನಾಶಮಾಡುವೆನು. ಅವರು ಕತ್ತಿಗಳಿಂದ ಕೊಲ್ಲಲ್ಪಡುವರು; ಹಸಿವಿನಿಂದ ಸತ್ತುಹೋಗುವರು. ಬೇರೆ ಜನಾಂಗಗಳ ಜನರು ಅವರ ಬಗ್ಗೆ ನಿಂದಿಸುವಂತೆ ಅವರ ಸ್ಥಿತಿ ಆಗುವುದು. ಅವರಿಗೆ ಉಂಟಾದ ದುರ್ಗತಿಯನ್ನು ನೋಡಿ ಬೇರೆ ಜನಾಂಗದ ಜನರು ಭಯಪಡುವರು. ಆ ಜನರು ಶಾಪದ ಶಬ್ಧವಾಗುವರು. ಬೇರೆ ಜನಾಂಗದವರು ಯೆಹೂದದ ಆ ಜನರಿಗೆ ಅಪಮಾನ ಮಾಡುವರು.


“ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ.


ಅವರು ಗೇರುಥ್ ಕಿಮ್ಹಾಮಿನಲ್ಲಿಇಳಿದುಕೊಂಡಿದ್ದಾಗ ಯೋಹಾನಾನನೂ ಹೋಷಾಯನ ಮಗನಾದ ಯೆಜನ್ಯನೂ ಪ್ರವಾದಿಯಾದ ಯೆರೆಮೀಯನಲ್ಲಿಗೆ ಹೋದರು. ಯೋಹಾನಾನ ಮತ್ತು ಯೆಜನ್ಯನ ಸಂಗಡ ಎಲ್ಲಾ ಅಧಿಕಾರಿಗಳೂ ಅಪ್ರಮುಖರಿಂದ ಅತಿ ಪ್ರಮುಖವರೆಗಿನ ಎಲ್ಲಾ ಜನರೂ ಹೋದರು.


ಆಗ ಯೆರೆಮೀಯನು ಕಾರೇಹನ ಮಗನಾದ ಯೋಹಾನಾನನನ್ನೂ ಅವನ ಜೊತೆಗಿದ್ದ ಸೇನಾಧಿಪತಿಗಳನ್ನೂ ಕರೆದನು. ಪ್ರಮುಖರು, ಅಪ್ರಮುಖರು ಎನ್ನದೆ ಒಟ್ಟಾಗಿ ಬರಲು ಎಲ್ಲಾ ಜನರನ್ನು ಯೆರೆಮೀಯನು ಕರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು