Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 8:9 - ಪರಿಶುದ್ದ ಬೈಬಲ್‌

9 ಅದು, ಅವರ ಪಿತೃಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಯಂತಿರುವುದಿಲ್ಲ. ಅವರನ್ನು ಈಜಿಪ್ಟಿನಿಂದ ಕೈಹಿಡಿದು ಹೊರಗೆ ಕರೆದುಕೊಂಡು ಬಂದ ಕಾಲದಲ್ಲಿ ಅವರೊಡನೆ ಆ ಒಡಂಬಡಿಕೆಯನ್ನೂ ಮಾಡಿಕೊಂಡೆನು. ಆದರೆ ಅವರು ಅದನ್ನು ಅನುಸರಿಸಲಿಲ್ಲವಾದ್ದರಿಂದ ಅವರಿಗೆ ವಿಮುಖನಾದೆನು ಎಂದು ಪ್ರಭು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಒಡಂಬಡಿಕೆ, ನಾನು ಪೂರ್ವಜರನ್ನು ಈಜಿಪ್ಟ್ ದೇಶದಿಂದ ಕೈಹಿಡಿದು ಕರೆತಂದಾಗ ಮಾಡಿದ ಒಡಂಬಡಿಕೆಯಂತಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ; ಎಂದೇ, ನಾನು ಅವರನ್ನು ಲಕ್ಷಿಸಲೂ ಇಲ್ಲ, ಎಂದರು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರಕೊಂಡು ಬಂದ ಕಾಲದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದದರಿಂದ ನಾನು ಅವರ ಚಿಂತೆಯನ್ನು ಬಿಟ್ಟೆನೆಂದು ಕರ್ತನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು, ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ದಿವಸದಂದು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ. ಆದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ, ಎಂದು ಕರ್ತದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೊ ತೆಂಚ್ಯಾ ಬಾಬಾಂಚ್ಯಾಕ್ನಾ ಕರಲೊ ಸಾರ್ಕೊ ಕರಾರ್ ನ್ಹಯ್, ಮಿಯಾ ತೆಕಾ ಹಾತ್ ಧರುನ್ ಇಜಿಪ್ತಾಕ್ನಾ ಬಾಯ್ರ್ ಹಾನಲ್ಯಾ ವೆಳಾರ್ ತೆಂಚ್ಯಾ ವಾಂಗ್ಡಾ ಕರಾರ್ ಕರುನ್ ಘೆಟಲ್ಲೊ ಹೊಲ್ಯಾರ್, ತೆನಿ ತೆಚ್ಯಾ ಸಾರ್ಕೆ ಚಲುನ್ ಜಾವ್ಕ್ ಹೊವ್ಕ್ ನಾ, ತಸೆ ಮನುನ್ ಮಿಯಾ ತೆಂಚ್ಯಾಕ್ನಾ ದುಸ್ರ್ಯಾಕ್ಡೆ ಪರ್ತುನ್ ಬಸ್ಲೊ” ಮನುನ್ ದೆವ್ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 8:9
44 ತಿಳಿವುಗಳ ಹೋಲಿಕೆ  

ಈ ಒಡಂಬಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಬಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಬಡಿಕೆಯನ್ನು ಮುರಿದರು.” ಇದು ಯೆಹೋವನ ನುಡಿ.


ಈ ಸಂಗತಿಗಳು ನಮಗೆ ಉಪಮಾನವಾಗಿವೆ. ದೇವರ ಮತ್ತು ಮನುಷ್ಯರ ನಡುವೆ ಆದ ಎರಡು ಒಡಂಬಡಿಕೆಗಳಿಗೆ ಈ ಇಬ್ಬರು ಸ್ತ್ರೀಯರು ಸಂಕೇತವಾಗಿದ್ದಾರೆ. ಸೀನಾಯಿ ಪರ್ವತದ ಮೇಲೆ ದೇವರು ಕೊಟ್ಟ ಧರ್ಮಶಾಸ್ತ್ರವೇ ಮೊದಲನೆ ಒಡಂಬಡಿಕೆ. ಈ ಒಡಂಬಡಿಕೆಯ ಅಧೀನದಲ್ಲಿದ್ದ ಜನರು ಗುಲಾಮರಂತಿದ್ದರು. ತಾಯಿಯಾದ ಹಾಗರಳು ಆ ಒಡಂಬಡಿಕೆಯಂತಿದ್ದಳು.


ಆಗ ಯೇಸು ಆ ಕುರುಡನ ಕೈ ಹಿಡಿದುಕೊಂಡು, ಅವನನ್ನು ಊರಿನಿಂದ ಹೊರಕ್ಕೆ ಕರೆದುಕೊಂಡು ಹೋದನು. ನಂತರ ಯೇಸು ಅವನ ಕಣ್ಣುಗಳಲ್ಲಿ ಉಗುಳಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಈಗ ನಿನಗೆ ಕಾಣುತ್ತದೆಯೋ?” ಎಂದು ಕೇಳಿದನು.


ಇಗೋ, ಪ್ರಭುವು ಕೈ ಎತ್ತಿದ್ದಾನೆ. ನೀನು ಕುರಡನಾಗಿ ಸ್ವಲ್ಪಕಾಲದವರೆಗೆ ಏನನ್ನೂ ನೋಡಲಾರೆ; ಸೂರ್ಯನ ಬೆಳಕನ್ನು ಸಹ ಕಾಣಲಾರೆ” ಎಂದನು. ಆಗ ಎಲಿಮನಿಗೆ ಎಲ್ಲವೂ ಕತ್ತಲಾಯಿತು. ತನ್ನನ್ನು ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸುತ್ತಾ ಸುತ್ತಮುತ್ತ ನಡೆದನು.


ಸೌಲನು ನೆಲದ ಮೇಲಿಂದ ಎದ್ದು ಕಣ್ಣುಗಳನ್ನು ತೆರೆದನು. ಆದರೆ ಅವನಿಗೆ ಏನೂ ಕಾಣಲಿಲ್ಲ. ಆದ್ದರಿಂದ ಸೌಲನೊಂದಿಗಿದ್ದ ಜನರು ಅವನನ್ನು ಕೈಹಿಡಿದು ದಮಸ್ಕಕ್ಕೆ ಕರೆದೊಯ್ದರು.


ನೀವು ಅತ್ತು ಗೋಳಾಡಿ ಯೆಹೋವನ ವೇದಿಕೆಯನ್ನು ಕಣ್ಣೀರಿನಿಂದ ತೋಯಿಸಿದರೂ ಪ್ರಯೋಜನವಿಲ್ಲ. ಯೆಹೋವನು ನಿಮ್ಮ ಕಾಣಿಕೆಯನ್ನು ಸ್ವೀಕರಿಸುವುದಿಲ್ಲ. ನಿಮ್ಮ ಕಾಣಿಕೆಗಳನ್ನು ಆತನು ಮೆಚ್ಚುವವನಲ್ಲ.


ನೀವು ಸರ್ವಾಂಗಹೋಮವನ್ನಾಗಲಿ ಧಾನ್ಯದ ಹೋಮವನ್ನಾಗಲಿ ಅರ್ಪಿಸಿದರೆ ನಾನು ಅದನ್ನು ಸ್ವೀಕರಿಸುವುದಿಲ್ಲ. ಸಮಾಧಾನಯಜ್ಞದಲ್ಲಿ ಕೊಬ್ಬಿದ ಪ್ರಾಣಿಗಳನ್ನು ಬಲಿಯರ್ಪಿಸಿದರೂ ನಾನು ಅದನ್ನು ಕಣ್ಣೆತ್ತಿ ನೋಡುವದಿಲ್ಲ.


ಈ ಮಾತುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು. “ನೀನು ಮಾಡಿರುವದನ್ನು ನಾನೂ ನಿನಗೆ ಮಾಡುವೆನು. ನೀನು ನಿನ್ನ ಮದುವೆ ಒಡಂಬಡಿಕೆಯನ್ನು ಮುರಿದುಬಿಟ್ಟೆ. ನಮ್ಮ ಒಡಂಬಡಿಕೆಗೆ ನೀನು ಮಹತ್ವ ಕೊಡಲಿಲ್ಲ.


ನಾನು ಮತ್ತೆ ಹಾದುಹೋಗುವಾಗ ನಿನ್ನನ್ನು ನೋಡಲಾಗಿ ನೀನು ಸಂಭೋಗಿಸಲು ತಯಾರಾಗಿದ್ದೆ. ನಾನು ನನ್ನ ಹೊದಿಕೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಬೆತ್ತಲೆ ದೇಹವನ್ನು ಮುಚ್ಚಿದೆನು. ನಿನ್ನನ್ನು ವಿವಾಹವಾಗಲು ಮಾತುಕೊಟ್ಟೆನು. ನಾನು ನಿನ್ನೊಡನೆ ಒಡಂಬಡಿಕೆ ಮಾಡಿಕೊಂಡೆನು. ಆಗ ನೀನು ನನ್ನವಳಾದೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಜನರಿಗೆ ಅನೇಕ ತೊಂದರೆಗಳು ಪ್ರಾಪ್ತವಾಗಿದ್ದವು. ಆದರೆ ಯೆಹೋವನು ಅವರಿಗೆ ವಿರುದ್ಧನಾಗಿರಲಿಲ್ಲ. ಆತನು ಅವರನ್ನು ಪ್ರೀತಿಸಿ ಅವರಿಗಾಗಿ ಚಿಂತಿಸಿದನು; ತನ್ನ ವಿಶೇಷ ದೂತನನ್ನು ಕಳುಹಿಸಿ ಅವರನ್ನು ರಕ್ಷಿಸಿದನು. ಯೆಹೋವನು ಅವರನ್ನು ನಿತ್ಯಕಾಲಕ್ಕೂ ಸಲಹುವನು. ತನ್ನ ಜನರಿಗೆ ಯೆಹೋವನು ಸಲಹುವದನ್ನು ನಿಲ್ಲಿಸಲಿಲ್ಲ.


ಯೆಹೋವನು ತನ್ನ ಜನರನ್ನು ನಡಿಸುತ್ತಾನೆ. ಕುರಿಗಳನ್ನು ನಡಿಸುವ ಕುರುಬನಂತೆ ಯೆಹೋವನು ತನ್ನ ಭುಜಬಲದಿಂದ ತನ್ನ ಕುರಿಗಳನ್ನು ಒಟ್ಟುಗೂಡಿಸುವನು. ಯೆಹೋವನು ಕುರಿಮರಿಗಳನ್ನು ಎತ್ತಿಕೊಂಡು ಅಪ್ಪಿಕೊಳ್ಳುವನು. ಅದರ ತಾಯಿ ಆತನ ಪಕ್ಕದಲ್ಲೇ ನಡೆಯುವವು.


ತನ್ನ ಪ್ರಿಯನನ್ನು ಒರಗಿಕೊಂಡು ಅಡವಿಯಿಂದ ಬರುತ್ತಿರುವ ಈ ಯುವತಿ ಯಾರು? ನಾನು ನಿನ್ನನ್ನು ಸೇಬಿನ ಮರದ ಕೆಳಗೆ ಎಬ್ಬಿಸಿದೆನು. ನಿನ್ನ ತಾಯಿಯು ನಿನ್ನನ್ನು ಗರ್ಭಧರಿಸಿದ್ದು ಅಲ್ಲಿಯೇ. ನೀನು ಹುಟ್ಟಿದ್ದೂ ಅಲ್ಲಿಯೇ.


ಆತನು ತನ್ನ ಜನರನ್ನು ಈಜಿಪ್ಟಿನಿಂದ ಹೊರತಂದನು. ಜನರು ಉಲ್ಲಾಸಪಡುತ್ತಾ ಹರ್ಷಗೀತೆಗಳನ್ನು ಹಾಡುತ್ತಾ ಹೊರಬಂದರು!


ಇಸ್ರೇಲರು ಆತನಿಗೆ ವಿಮುಖರಾದರು; ತಮ್ಮ ಪೂರ್ವಿಕರಂತೆಯೇ ಆತನಿಗೆ ವಿರೋಧವಾಗಿ ತಿರುಗಿದರು. ತಿರುಗುಬಾಣದಂತೆ ತಮ್ಮ ದಿಕ್ಕನ್ನು ಬದಲಾಯಿಸಿಕೊಂಡರು.


ಕುರುಬನು ಕುರಿಹಿಂಡನ್ನು ಕರೆದೊಯ್ಯುವಂತೆ ನಿನ್ನ ಜನರನ್ನು ಕರೆದೊಯ್ಯಲು ಮೋಶೆಯನ್ನೂ ಆರೋನನನ್ನೂ ಉಪಯೋಗಿಸಿದೆ.


ಆದರೆ ದೇವರು ಒಬ್ಬ ನಿರಪರಾಧಿಯನ್ನೂ ಕೈಬಿಡುವುದಿಲ್ಲ. ಆತನು ದುಷ್ಟರಿಗೆ ಸಹಾಯ ಮಾಡುವುದಿಲ್ಲ.


ಯಾಕೆಂದರೆ ‘ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಬಿಟ್ಟು ತೊಲಗಿದರು. ಅವರನ್ನು ಈಜಿಪ್ಟಿನಿಂದ ಹೊರತರುವಾಗ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಅನುಸರಿಸಲಿಲ್ಲ.


ನೀವೆಲ್ಲಾ ನಿಮ್ಮ ದೇವರಾದ ಯೆಹೋವನೊಂದಿಗೆ ಒಡಂಬಡಿಕೆಯನ್ನು ಮಾಡುವುದಕ್ಕೋಸ್ಕರ ನಿಂತಿದ್ದೀರಿ. ದೇವರು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡುತ್ತಾನೆ.


ಇಸ್ರೇಲ್ ಜನಾಂಗದೊಂದಿಗೆ ಹೋರೇಬ್ ಬೆಟ್ಟದಲ್ಲಿ ಯೆಹೋವನು ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಅಲ್ಲದೆ ಇಸ್ರೇಲರು ಮೋವಾಬ್ ಪ್ರಾಂತ್ಯದಲ್ಲಿದ್ದಾಗ ಯೆಹೋವನು ಮೋಶೆಗೆ ಅವರೊಡನೆ ಇನ್ನೊಂದು ಒಡಂಬಡಿಕೆಯನ್ನು ಮಾಡಿಕೊಳ್ಳಲು ಹೇಳಿದನು. ಅದು ಯಾವುದೆಂದರೆ:


ಆಗ ಯೆಹೋವನು, “ನಾನು ನಿಮ್ಮೊಂದಿಗೆ ಈ ಒಡಂಬಡಿಕೆಯನ್ನು ಮಾಡುತ್ತಿದ್ದೇನೆ. ಭೂಲೋಕದಲ್ಲಿ ಎಲ್ಲಿಯೇ ಆಗಲಿ ಯಾವ ಜನಾಂಗದಲ್ಲಿಯೇ ಆಗಲಿ ಹಿಂದೆಂದೂ ನಡೆಯದಂತ ಮಹತ್ಕಾರ್ಯಗಳನ್ನು ಮಾಡುವೆನು. ಎಲ್ಲಾ ಜನರು ಮತ್ತು ನಿನ್ನೊಂದಿಗಿರುವ ಜನರು ಇವುಗಳನ್ನು ನೋಡಿ ಯೆಹೋವನಾದ ನಾನೇ ಮಹಾ ಮಹಿಮಸ್ವರೂಪನೆಂದು ತಿಳಿದುಕೊಳ್ಳುವರು.


ಆದರೆ ಲೋಟನು ಗಲಿಬಿಲಿಗೊಂಡು ತಡಮಾಡಲು ಆ ಇಬ್ಬರು ಪುರುಷರು ಲೋಟನನ್ನೂ ಅವನ ಹೆಂಡತಿಯನ್ನೂ ಅವನ ಇಬ್ಬರು ಹೆಣ್ಣುಮಕ್ಕಳನ್ನೂ ಕೈಹಿಡಿದುಕೊಂಡು ನಗರದ ಹೊರಕ್ಕೆ ಸುರಕ್ಷಿತವಾಗಿ ತಂದುಬಿಟ್ಟರು. ಹೀಗೆ ಯೆಹೋವನು ಲೋಟನಿಗೂ ಅವನ ಕುಟುಂಬದವರಿಗೂ ದಯೆತೋರಿದನು.


ನಿನ್ನ ದೇವರಾದ ಯೆಹೋವನು ನಾನೇ. ನಾನು ನಿನ್ನ ಬಲಗೈಯನ್ನು ಹಿಡಿದಿದ್ದೇನೆ. ‘ನೀನು ಹೆದರಬೇಡ, ನಾನೇ ನಿನಗೆ ಸಹಾಯ ಮಾಡುತ್ತೇನೆ’ ಎಂದು ಹೇಳುತ್ತಿದ್ದೇನೆ.


ಯೆಹೋವನು ತಾನೇ ಆ ಜನರನ್ನು ನಾಶಮಾಡಿದನು. ಅವರ ಪರಿಪಾಲನೆ ಮಾಡುವುದನ್ನು ನಿಲ್ಲಿಸಿದನು. ಆತನು ಯಾಜಕರನ್ನು ಗೌರವಿಸಲಿಲ್ಲ. ಆತನು ಯೆಹೂದದ ಹಿರಿಯರೊಂದಿಗೆ ಕರುಣೆಯಿಂದಿರಲಿಲ್ಲ.


ಜೆರುಸಲೇಮಿನಲ್ಲಿ ಅನೇಕ ಜನರಿದ್ದರೂ ಅವರಲ್ಲಿ ಯಾರೂ ಅವಳಿಗಾಗಿ ನಾಯಕರಾಗಲಿಲ್ಲ. ಆಕೆಯು ಅನೇಕ ಮಕ್ಕಳನ್ನು ಪಡೆದವಳಾಗಿದ್ದರೂ ಆಕೆಯನ್ನು ನಡೆಸಲು ಮಾರ್ಗದರ್ಶಕರು ಯಾರೂ ಆಗಲಿಲ್ಲ.


ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.


ಆದ್ದರಿಂದ ಮೋಶೆಯು ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಈಜಿಪ್ಟಿನಲ್ಲಿಯೂ ಕೆಂಪುಸಮುದ್ರದಲ್ಲಿಯೂ ಮತ್ತು ನಲವತ್ತು ವರ್ಷಗಳ ಕಾಲ ಅರಣ್ಯದಲ್ಲಿಯೂ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು