Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:10 - ಪರಿಶುದ್ದ ಬೈಬಲ್‌

10 ಆ ಯಜ್ಞಗಳು ಮತ್ತು ಕಾಣಿಕೆಗಳು ಅನ್ನಪಾನಾದಿಗಳನ್ನೂ ವಿಶೇಷವಾದ ಸ್ನಾನಗಳನ್ನೂ ಕುರಿತಾಗಿದ್ದವು. ಅವು ದೇಹಕ್ಕೆ ಸಂಬಂಧಿಸಿದ ನಿಯಮಗಳೇ ಹೊರತು ಜನರ ಹೃದಯಕ್ಕೆ ಸಂಬಂಧಿಸಿದ್ದವುಗಳಲ್ಲ. ಜನರಿಗೆ ದೇವರ ಹೊಸ ಮಾರ್ಗವು ಲಭಿಸುವ ಕಾಲದವರೆಗೆ, ಅವರು ಅನುಸರಿಸಲೆಂದು ಆ ನಿಯಮಗಳನ್ನು ದೇವರೇ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವು ಅನ್ನಪಾನಗಳೂ ಮತ್ತು ವಿವಿಧ ಆಚರಣೆಗಳಿಗೂ ಒಳಪಟ್ಟಿರುವ ಸ್ನಾನಗಳು ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು. ಇವು ಸುಧಾರಣೆಯ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಏಕೆಂದರೆ, ಈ ಕಾಣಿಕೆಗಳು ಮತ್ತು ಬಲಿಗಳು ಕೇವಲ ಲೌಕಿಕವಾದುವು. ಅನ್ನಪಾನೀಯಗಳಿಂದಲೂ ನಾನಾ ತರದ ಸ್ನಾನವಿಧಿಗಳಿಂದಲೂ ಕೂಡಿದ ಇವು ಸುಧಾರಣೆಯ ಕಾಲದವರೆಗೆ ಮಾತ್ರ ಇರಬೇಕಾದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅನ್ನಪಾನಾದಿಗಳೂ ವಿವಿಧ ಸ್ನಾನಗಳೂ ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾದವು ಎಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತಿ ಯಜ್ನ್ ಕಾನಿಕ್, ಜೆವಾನ್ ಖಾನ್ ಅನಿ ನ್ಹಾತಲ್ಯಾಚ್ಯಾ ಸಾಟ್ನಿ ಹೊತ್ತಿ ಹೆ ಸಗ್ಳೆ ಆಂಗಾಕ್ ಸಮಂದ್ ಪಡಲಿ ನೆಮಾ, ಮನಾಕ್ ಸಮಂದ್ ಪಡಲಿ ನೆಮಾ ನ್ಹಯ್, ದೆವಾಚಿ ನ್ಹವಿ ವಾಟ್ ಗಾವಿ ಪತರ್ ತೆನಿ ಅಸೆಚ್ ದೆವಾಚಿ ನ್ಹವಿ ನೆಮಾ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:10
32 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ತಿಂದು ಕುಡಿಯುವುದರ ಬಗ್ಗೆ ಇಲ್ಲವೆ ಯೆಹೂದ್ಯರ ಪದ್ಧತಿಗಳ (ಹಬ್ಬಗಳು, ಅಮಾವಾಸ್ಯೆಯ ಆಚರಣೆಗಳು, ಸಬ್ಬತ್‌ ದಿನಗಳು) ಬಗ್ಗೆ ನಿಮಗೆ ನಿಯಮಗಳನ್ನು ರೂಪಿಸಲು ಯಾರಿಗೂ ಅವಕಾಶ ಕೊಡಬೇಡಿ.


ಯೆಹೂದ್ಯರ ಧರ್ಮಶಾಸ್ತ್ರವು ಅನೇಕ ಆಜ್ಞೆಗಳನ್ನೂ ನಿಯಮಗಳನ್ನೂ ಹೊಂದಿತ್ತು. ಆದರೆ ಕ್ರಿಸ್ತನು ಆ ಧರ್ಮಶಾಸ್ತ್ರವನ್ನು ಅಂತಿಮಗೊಳಿಸಿದನು. ಯೆಹೂದ್ಯರನ್ನು ಮತ್ತು ಯೆಹೂದ್ಯರಲ್ಲದವರನ್ನು ತನ್ನಲ್ಲಿ ಒಂದು ಜನಾಂಗವನ್ನಾಗಿ ಮಾಡಿ ಶಾಂತಿಯನ್ನು ಸ್ಥಾಪಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು.


ಆತನು ಯಾಜಕನಾದದ್ದು ವಂಶಾನುಗತವಾಗಿ ಬಂದ ನಿಯಮಗಳ ಮತ್ತು ಶಾಸ್ತ್ರಗಳ ಪ್ರಕಾರವಲ್ಲ. ಆತನು ನಾಶವಾಗದ ತನ್ನ ಜೀವಶಕ್ತಿಯಿಂದ ಯಾಜಕನಾದನು.


ಆಗ ನಾನು ಹೇಳಿದ್ದೇನೆಂದರೆ, “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಎಂದೂ ಅಶುದ್ಧ ಆಹಾರವನ್ನು ತಿನ್ನಲಿಲ್ಲ. ತಾನಾಗಿಯೇ ಸತ್ತ ಪ್ರಾಣಿಯ ಮಾಂಸವನ್ನಾಗಲಿ ಕಾಡುಪ್ರಾಣಿಯು ಕೊಂದ ಪ್ರಾಣಿಯ ಮಾಂಸವನ್ನಾಗಲಿ ಎಂದೂ ತಿಂದದ್ದಿಲ್ಲ. ಬಾಲ್ಯ ಪ್ರಾಯದಿಂದ ಈ ದಿವಸ ಪರ್ಯಂತ ಅಶುದ್ಧ ಆಹಾರ ತಿಂದಿಲ್ಲ; ಅಂತಹ ಮಾಂಸವೂ ನನ್ನ ಬಾಯೊಳಕ್ಕೆ ಹೋಗಲಿಲ್ಲ.”


ಸಾಯಂಕಾಲವಾದಾಗ ಅವನು ಸ್ನಾನಮಾಡಿ ಸೂರ್ಯ ಮುಳುಗಿದ ಬಳಿಕ ಪಾಳೆಯದೊಳಕ್ಕೆ ಬರಬಹುದು.


ಅವನು ತನ್ನ ಶರೀರವನ್ನು ಪವಿತ್ರಸ್ಥಳದಲ್ಲಿ ನೀರಿನಿಂದ ತೊಳೆದುಕೊಳ್ಳುವನು. ಬಳಿಕ ಅವನು ತನ್ನ ಇತರ ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳುವನು. ಅವನು ಹೊರಗೆ ಬಂದು, ತನ್ನ ಸರ್ವಾಂಗಹೋಮವನ್ನು ಮತ್ತು ಜನರ ಸರ್ವಾಂಗಹೋಮವನ್ನು ಅರ್ಪಿಸುವನು. ಅವನು ತನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತ ಮಾಡುವನು.


ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.


ಮೊದಲನೆ ಒಡಂಬಡಿಕೆಯಲ್ಲಿ ಆರಾಧನೆಯ ನಿಯಮಗಳಿದ್ದವು. ಅದರಲ್ಲಿ ಮಾನವನಿರ್ಮಿತವಾದ ಆರಾಧನಾ ಸ್ಥಳವಿತ್ತು.


ಮುಂದೆ ಬರುವ ನೂತನ ಲೋಕವನ್ನು ಆಳಲು ದೇವರು ದೇವದೂತರನ್ನು ಆರಿಸಲಿಲ್ಲ. ಈಗ ನಾವು ನಿಮಗೆ ಹೇಳುತ್ತಿರುವುದು ಆ ಲೋಕದ ಕುರಿತಾಗಿಯೇ.


ಕೊಲೆಯಾದವನ ದೇಹದ ಸಮೀಪವಿರುವ ಪಟ್ಟಣದ ಹಿರಿಯರು ಕುತ್ತಿಗೆ ಮುರಿಯಲ್ಪಟ್ಟ ಹಸುವಿನ ಮೇಲೆ ತಮ್ಮತಮ್ಮ ಕೈಗಳನ್ನು ತೊಳೆಯಬೇಕು.


ಆರೋನನು ತನ್ನ ಪೂರ್ಣಶರೀರವನ್ನು ನೀರಿನಿಂದ ತೊಳೆದುಕೊಳ್ಳಬೇಕು. ಬಳಿಕ ಅವನು ಈ ಬಟ್ಟೆಗಳನ್ನು ಹಾಕಿಕೊಳ್ಳಬೇಕು. ಆರೋನನು ಪವಿತ್ರ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಂಡಿರಬೇಕು. ಅವನು ನಾರಿನ ನಡುಕಟ್ಟನ್ನು ಕಟ್ಟಿಕೊಳ್ಳಬೇಕು; ನಾರಿನ ಮುಂಡಾಸವನ್ನು ಇಟ್ಟುಕೊಳ್ಳಬೇಕು. ಇವುಗಳು ಪವಿತ್ರವಾದವುಗಳಾಗಿವೆ.


“ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನಗುಡಾರದ ಬಾಗಿಲಿಗೆ ಕರೆಸು. ಅವರಿಗೆ ನೀರಿನಿಂದ ಸ್ನಾನ ಮಾಡಿಸು.


ನಿಮ್ಮನ್ನು ತಪ್ಪು ಮಾರ್ಗಕ್ಕೆ ಎಳೆಯುವಂತಹ ಅನ್ಯೋಪದೇಶಗಳ ಕಡೆಗೆ ಗಮನಕೊಡಬೇಡಿ. ನಿಮ್ಮ ಹೃದಯಗಳು ದೇವರ ಕೃಪೆಯಿಂದ ಬಲವಾಗಬೇಕೇ ಹೊರತು ಆಹಾರದ ನಿಯಮಗಳ ಪಾಲನೆಯಿಂದಲ್ಲ. ಆ ನಿಯಮಗಳ ಪಾಲನೆಯು ಜನರಿಗೆ ಸಹಾಯಕವಾಗುವುದಿಲ್ಲ.


ಆ ಸಮಯದಲ್ಲಿ ನಮಗೆ ದೀಕ್ಷಾಸ್ನಾನ, ಹಸ್ತಾರ್ಪಣ, ಸತ್ತವರ ಪುನರುತ್ಥಾನ ಮತ್ತು ನಿತ್ಯವಾದ ನ್ಯಾಯತೀರ್ಪು ಇವುಗಳನ್ನು ಕುರಿತು ಬೋಧಿಸಲಾಯಿತು. ಆದರೆ ಈಗ ನಾವು ಪೂರ್ಣ ತಿಳುವಳಿಕೆಗೆ ಹೋಗುವುದು ಅಗತ್ಯವಾಗಿದೆ.


ಕಾಲವು ಪರಿಪೂರ್ಣವಾದಾಗ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕ್ರಿಸ್ತನಲ್ಲಿ ಒಂದುಗೂಡಿಸಿ ಆತನಿಗೆ ಅಧೀನ ಪಡಿಸಬೇಕೆಂಬುದೇ ದೇವರ ಯೋಜನೆಯಾಗಿತ್ತು.


ಈಗಲಾದರೋ ಸತ್ಯದೇವರನ್ನು ತಿಳಿದಿದ್ದೀರಿ. ನಿಜವಾಗಿ ಹೇಳಬೇಕಾದರೆ, ನಿಮ್ಮನ್ನು ತಿಳಿದಿರುವಾತನು ದೇವರೇ. ಹೀಗಿರಲಾಗಿ ಮೊದಲು ನೀವು ಅನುಸರಿಸುತ್ತಿದ್ದ ಬಲಹೀನವೂ ನಿರುಪಯುಕ್ತವೂ ಆದ ನಿಯಮಗಳಿಗೆ ನೀವು ಯಾಕೆ ಹಿಂತಿರುಗಬೇಕು? ಅವುಗಳಿಗೆ ಮತ್ತೆ ಗುಲಾಮರಾಗಬೇಕೆಂದಿದ್ದೀರೋ?


ಅವರು ಏನನ್ನಾದರೂ ಮಾರುಕಟ್ಟೆಯಲ್ಲಿ ಕೊಂಡುಕೊಂಡರೆ, ವಿಶೇಷವಾದ ರೀತಿಯಲ್ಲಿ ಅದನ್ನು ತೊಳೆಯದೆ ತಿನ್ನುತ್ತಿರಲಿಲ್ಲ. ತಮ್ಮ ಪಿತೃಗಳಿಂದ ಬಂದ ಇತರ ಆಚಾರಗಳನ್ನು ಅಂದರೆ ಲೋಟ, ಬಟ್ಟಲು, ತಪ್ಪಲೆ ಮತ್ತು ದೋಲಿಗಳನ್ನು ತೊಳೆಯುವಾಗಲೂ ಈ ನಿಯಮಗಳನ್ನು ಅನುಸರಿಸುತ್ತಿದ್ದರು.


ಒಬ್ಬನು ಅವುಗಳಲ್ಲಿ ಯಾವುದನ್ನು ಮುಟ್ಟಿದರೂ ಸಾಯಂಕಾಲದವರೆಗೆ ಅಶುದ್ಧನಾಗುವನು. ಅವನು ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು. ಅವನು ತನ್ನನ್ನು ನೀರಿನಿಂದ ತೊಳೆದುಕೊಂಡರೂ ಪವಿತ್ರ ಪದಾರ್ಥವನ್ನು ತಿನ್ನಬಾರದು.


“ತರುವಾಯ ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನಗುಡಾರದ ದ್ವಾರಕ್ಕೆ ಕರೆದುಕೊಂಡು ಬಾ. ಅವರನ್ನು ನೀರಿನಲ್ಲಿ ಸ್ನಾನಮಾಡಿಸು.


ಆ ಸಮಯದಲ್ಲಿ ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಮುಟ್ಟಬಾರದು; ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯದ ಹುಳಿಯನ್ನಾಗಲಿ ಕುಡಿಯಬಾರದು; ದ್ರಾಕ್ಷಿಯ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು; ಹಸಿ ಅಥವಾ ಒಣ ದ್ರಾಕ್ಷಿಯನ್ನು ಸಹ ತಿನ್ನಬಾರದು;


ಬೇರೊಬ್ಬ ಯಾಜಕನು ಬಂದರೆ, ಆಗ ಧರ್ಮಶಾಸ್ತ್ರವು ಬದಲಾಗಲೇಬೇಕು.


ಆದರೆ, ತೊಳೆದ ನಂತರ ಬೂಷ್ಟು ತಿರುಗಿ ಬಾರದಿದ್ದರೆ, ಆ ತೊಗಲು ಅಥವಾ ಬಟ್ಟೆ ಶುದ್ಧವಾಗಿದೆ. ಅದು ಹೆಣೆದ ಅಥವಾ ಹೊಲಿದ ಬಟ್ಟೆಯಾಗಿದ್ದರೂ ಶುದ್ಧವಾಗಿದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು