ಇಬ್ರಿಯರಿಗೆ 9:12 - ಪರಿಶುದ್ದ ಬೈಬಲ್12 ಆತನು ಒಂದೇ ಒಂದು ಸಾರಿ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿದನು. ಆತನು ಹೋತಗಳ ಮತ್ತು ಹೋರಿಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತದಿಂದಲೇ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿ ನಮಗೆ ನಿತ್ಯಸ್ವಾತಂತ್ರ್ಯವನ್ನು ತಂದುಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೋತಗಳ ಮತ್ತು ಹೋರಿಕರಗಳ ರಕ್ತವನ್ನು ತೆಗೆದುಕೊಳ್ಳದೆ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ದೇವರ ಸನ್ನಿಧಾನಕ್ಕೆ ಪ್ರವೇಶಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಕ್ರಿಸ್ತ ಯೇಸು ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವರಾಗಿ ಒಂದೇ ಸಾರಿ ಮಹಾ ಪವಿತ್ರ ಸ್ಥಳದೊಳಗೆ ಪ್ರವೇಶಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತೊ ಎಕುಚ್ ಎಗ್ದಾ ಆಗ್ದಿ ಪವಿತ್ರ್ ಜಾಗ್ಯಾರ್ ಗುಸ್ಲೊ, ತೆನಿ ಪಾಲ್ವ್ಯಾಂಚೆ ಅನಿ ಪಾಡ್ಕ್ಯಾಂಚೆ ರಗಾತ್ ಘೆವ್ನ್ ಜಾಯ್ ನಸ್ತಾನಾ ಅಪ್ಲೆ ಸ್ವತಾಚೆ ರಗಾತ್ ಘೆವ್ನ್ ಆಗ್ದಿ ಪವಿತ್ರ್ ಜಾಗ್ಯಾರ್ ಜಾವ್ನ್ ಅಮ್ಕಾ ಪಾಪಾಚ್ಯಾ ಶಾಶ್ವತ್ ಗುಲಾಮ್ ಗಿರಿತ್ನಾ ಸುಟ್ಕಾ ಕರ್ಲ್ಯಾನ್ . ಅಧ್ಯಾಯವನ್ನು ನೋಡಿ |
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.