ಇಬ್ರಿಯರಿಗೆ 9:14 - ಪರಿಶುದ್ದ ಬೈಬಲ್14 ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತಸೆ ಹೊವ್ನ್, ಕ್ರಿಸ್ತಾಚೆ ರಗಾತ್ ತೆಚ್ಯಾಕಿಂತಾಬಿ ಜಾಸ್ತಿಚೆಚ್ ಕರ್‍ತಾ, ಕ್ರಿಸ್ತಾನ್ ಕನ್ನಾಬಿ ರಾತಲ್ಯಾ ಆತ್ಮ್ಯಾಕ್ನಾ ಅಪ್ನಾಕುಚ್ ಅಪ್ನಿ ದೆವಾಚೊ ಯಜ್ನ್ ಕರುನ್ ದಿಲ್ಯಾನ್, ತೆಚೆ ರಗಾತ್ ಅಮ್ಕಾ ಅಮಿ ಬುರ್ಶ್ಯಾ ಕಾಮಾನಿತ್ನಾ ಸುಟ್ಕಾ ಕರುನ್ ಘೆವ್ನ್ ಜಿವ್ ಹೊತ್ತ್ಯಾ ದೆವಾಕ್ ಆರಾದನ್ ಕರುಕ್ ಹೊಯ್ ಸಾರ್ಕೆ ಅಮ್ಚೊ ಮನ್ ಚೊಕ್ಕ್ ಕರ್‍ತಾ. ಅಧ್ಯಾಯವನ್ನು ನೋಡಿ |
“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.