Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:17 - ಪರಿಶುದ್ದ ಬೈಬಲ್‌

17 ಅದನ್ನು ಬರೆದವನು ಇನ್ನೂ ಬದುಕಿದ್ದರೆ ಅದಕ್ಕೆ ಬೆಲೆಯೇನೂ ಇಲ್ಲ. ಅದನ್ನು ಬರೆದಾತನು ಸತ್ತನಂತರ ಅದು ಉಪಯುಕ್ತವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮರಣ ಶಾಸನವು ವ್ಯಕ್ತಿಯ ಮರಣವಾದ ಮೇಲೆ ಕಾರ್ಯರೂಪಕ್ಕೆ ಬರುತ್ತದೆಯೇ ಹೊರತು ಬರೆದವನು ಜೀವದಿಂದಿರುವಾಗ ಎಂದಿಗೂ ಜಾರಿಗೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವನು ಸತ್ತನಂತರ ಮಾತ್ರ ಆ ಶಾಸನವು ಕಾರ್ಯರೂಪಕ್ಕೆ ಬರುತ್ತದೆಯೇ ಹೊರತು ಅವನು ಜೀವದಿಂದ ಇರುವಾಗ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮರಣಶಾಸನವು ಮರಣವಾದ ಮೇಲೆ ನಡೆಯುವದೇ ಹೊರತು ಬರೆಯಿಸಿದವನು ಜೀವದಿಂದಿರುವಾಗ ಎಂದಿಗೂ ಸಲ್ಲುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಮರಣ ಶಾಸನವು ಬರೆದವನು ಜೀವದಿಂದಿರುವವರೆಗೂ ಅದು ಎಂದಿಗೂ ಜಾರಿಗೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೆ ಲಿವಲ್ಲೊ ಅಜುನ್ ಬಿ ಝಿತ್ತೊ ರ್‍ಹಾಲ್ಯಾರ್ ತ್ಯಾ ಬರ್ವನ್ಕಿಕ್ ಕಾಯ್ ಬಿ ಕಿಮ್ಮತ್ ರ್‍ಹಾಯ್ನಾ, ತೆ ಲಿವ್ಲ್ಲೊ ಮರ್‍ಲ್ಯಾ ಮಾನಾ ತಿ ಬರ್ವನ್ಕಿ ಉಪೆಗಾಕ್ ಯೆತಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:17
5 ತಿಳಿವುಗಳ ಹೋಲಿಕೆ  

ಬಳಿಕ ಇಸ್ರೇಲನು ಯೋಸೇಫನಿಗೆ, “ನೋಡು, ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ದೇವರು ಇನ್ನೂ ನಿನ್ನ ಸಂಗಡವಿರುವನು. ಅವನು ನಿನ್ನನ್ನು ನಿನ್ನ ಪೂರ್ವಿಕರ ದೇಶಕ್ಕೆ ಹಿಂತಿರುಗಿಸುವನು.


ಸಹೋದರ ಸಹೋದರಿಯರೇ, ನಾನು ನಿಮಗೊಂದು ಉದಾಹರಣೆಯನ್ನು ಕೊಡುತ್ತೇನೆ. ಒಬ್ಬನು ಇನ್ನೊಬ್ಬನೊಂದಿಗೆ ಮಾಡಿಕೊಳ್ಳುವ ಒಪ್ಪಂದದ ಬಗ್ಗೆ ಯೋಚಿಸಿ. ಆ ಒಪ್ಪಂದವು ಅಧಿಕೃತವಾದಾಗ ಅದನ್ನು ರದ್ದುಮಾಡುವುದಕ್ಕಾಗಲಿ ಅಥವಾ ಅದಕ್ಕೆ ಬೇರೆ ಏನಾದರು ಸೇರಿಸುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ.


“ನಾನು ನಿಮಗೆ ಶಾಂತಿಯನ್ನು ನೀಡುತ್ತೇನೆ. ಈ ಲೋಕವು ಕೊಡುವುದಕ್ಕಿಂತ ಭಿನ್ನವಾದ ರೀತಿಯಲ್ಲಿ ನಾನು ನಿಮಗೆ ಶಾಂತಿಯನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ಭಯಪಡಬೇಡಿರಿ.


ಒಬ್ಬನು ಸಾಯುವ ಮೊದಲೇ ಉಯಿಲನ್ನು ಬರೆದಿಡುತ್ತಾನೆ. ಆದರೆ ಸತ್ತಿರುವಾತನೇ ಆ ಉಯಿಲನ್ನು ಬರೆದವನೆಂದು ಜನರು ಸಾಧಿಸಿ ತೋರಿಸಬೇಕು.


ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಮೊದಲನೆ ಒಡಂಬಡಿಕೆ ಇದಕ್ಕೆ ಹೋಲಿಕೆಯಾಗಿದೆ. ಮೊದಲನೆ ಒಡಂಬಡಿಕೆ ಉಪಯುಕ್ತಕ್ಕೆ ಬರಲು ರಕ್ತಾರ್ಪಣೆಯಾಗಬೇಕಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು