ಇಬ್ರಿಯರಿಗೆ 9:2 - ಪರಿಶುದ್ದ ಬೈಬಲ್2 ಈ ಸ್ಥಳವು ಗುಡಾರದ ಒಳಗಿತ್ತು. ಗುಡಾರದ ಮೊದಲ ಆವರಣವನ್ನು ಪವಿತ್ರ ಸ್ಥಳವೆಂದು ಕರೆಯುತ್ತಿದ್ದರು. ಪವಿತ್ರ ಸ್ಥಳದಲ್ಲಿ ದೀಪಸ್ತಂಭ, ಮೇಜು ಮತ್ತು ದೇವರಿಗೆ ಅರ್ಪಿಸಲ್ಪಟ್ಟ ರೊಟ್ಟಿಗಳಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಮತ್ತು ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಂದರೆ, ಒಂದು ಗುಡಾರವನ್ನು ಕಟ್ಟುತ್ತಿದ್ದರು. ಅದರಲ್ಲಿ ಎರಡು ಭಾಗಗಳು ಇದ್ದವು. ಮೊದಲನೆಯ ಭಾಗಕ್ಕೆ ಪವಿತ್ರಸ್ಥಳ ಎಂದು ಹೆಸರು. ಅಲ್ಲಿ, ಒಂದು ದೀಪಸ್ತಂಭ ಮತ್ತು ಒಂದು ಮೇಜು ಇದ್ದವು. ಆ ಮೇಜಿನ ಮೇಲೆ ಅರ್ಪಣೆಯ ನೈವೇದ್ಯ ರೊಟ್ಟಿಗಳನ್ನು ಇಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅಂದರೆ ಒಂದು ಗುಡಾರವು ಕಟ್ಟಲ್ಪಟ್ಟಿತು; ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮರ್ಪಿಸಿದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರಸ್ಥಾನ ಎಂದು ಹೆಸರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅದರೊಳಗೆ ಒಂದು ಗುಡಾರವು ಕಟ್ಟಲಾಗಿತ್ತು. ಅದರ ಪ್ರಥಮ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು. ಅದು ಪವಿತ್ರ ಸ್ಥಳ ಎಂದು ಕರೆಯಲಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತೊ ಜಾಗೊ ಬಿರಾಡಾಚ್ಯಾ ಭುತ್ತುರ್ ಬಲ್‍ಯಿತ್ ಹೊತ್ತೊ, ತ್ಯಾ ಘರಾಚ್ಯಾ ಪೈಲೆಚ್ಯಾ ಖೊಲಿಕ್ ಪವಿತ್ರ್ ಜಾಗೊ ಮನುನ್ ತ್ಯಾ ಪವಿತ್ರ್ ಜಾಗ್ಯಾರ್ ಚಿಮ್ನಿಚೊ ಖಾಂಬೊ ಮೆಜ್ ಅನಿ ದೆವಾಕ್ ಮನುನ್ ಭೆಟ್ವಲ್ಲಿ ಭಾಕ್ರಿಯಾ. ಅಧ್ಯಾಯವನ್ನು ನೋಡಿ |