ಇಬ್ರಿಯರಿಗೆ 9:23 - ಪರಿಶುದ್ದ ಬೈಬಲ್23 ಈ ವಸ್ತುಗಳು ಪರಲೋಕದಲ್ಲಿರುವ ವಸ್ತುಗಳ ಪ್ರತಿರೂಪಗಳಾಗಿವೆ. ಇವುಗಳನ್ನು ಪ್ರಾಣಿಗಳ ಯಜ್ಞಗಳಿಂದ ಪರಿಶುದ್ಧಗೊಳಿಸಬೇಕಾಗಿದೆ. ಆದರೆ ಪರಲೋಕದಲ್ಲಿರುವ ನಿಜರೂಪಗಳಿಗಾಗಿ ಉತ್ತಮವಾದ ಯಜ್ಞಗಳನ್ನು ಅರ್ಪಿಸಬೇಕಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸ್ವರ್ಗೀಯವಾದವುಗಳ ಛಾಯೆಯಂತೆ ಇರುವ ಈ ವಸ್ತುಗಳೇ ಈ ಪ್ರಕಾರ ಶುದ್ಧೀಕರಣ ಹೊಂದಬೇಕಾಗಿತ್ತಾದರೆ, ನಿಜವಾಗಿ ಸ್ವರ್ಗೀಯವಾದವುಗಳ ಶುದ್ಧೀಕರಣಕ್ಕೆ ಮತ್ತಷ್ಟು ಶ್ರೇಷ್ಠವಾದ ಬಲಿಗಳು ಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಪರಲೋಕವಸ್ತುಗಳಿಗೆ ಪ್ರತಿರೂಪವಾಗಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಸಾಕ್ಷಾತ್ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತೆ ಇರುವ ವಸ್ತುಗಳನ್ನು ಈ ಯಜ್ಞಗಳಿಂದ ಶುದ್ಧಿಮಾಡುವುದು ಅವಶ್ಯವಾಗಿದೆ. ಹಾಗಾದರೆ ಪರಲೋಕದ ನಿಜ ವಸ್ತುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯಕವಾಗಿವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಹಿ ಸಾಮಾನ್ ಸರ್ಗಾತ್ಲ್ಯಾ ಸಾಮಾನಾಂಚಿ ಸಾವ್ಳಿ ಹೊವ್ನ್ ಹಾತ್, ಹೆ ಜನಾವರಾಂಚ್ಯಾ ಯಜ್ಞಾನಿ ಪರಿಶುದ್ದ್ ಕರುಚೆ ಹೊಲ್ಯಾರ್ ಸರ್ಗಾತ್ಲ್ಯಾ ಖರ್‍ಯಾ ಸಾಮಾನಾ ಸಾಟ್ನಿ ಬರೊ ಯಜ್ನ್ ಒಪ್ಸುಚೆ ಹೊಲ್ಲೆ ಹಾಯ್. ಅಧ್ಯಾಯವನ್ನು ನೋಡಿ |
ಆದ್ದರಿಂದ ಈಗ ನೀವು ಮಾಡಬೇಕಾದದ್ದೇನೆಂದರೆ, ಸೇನಾಧಿಪತಿಗೂ ಎಲ್ಲಾ ಯೆಹೂದ್ಯ ನಾಯಕರಿಗೂ ಒಂದು ಸಂದೇಶವನ್ನು ಕಳುಹಿಸಿಕೊಡಿರಿ. ಪೌಲನಿಗೆ ಇನ್ನೂ ಹೆಚ್ಚು ಪ್ರಶ್ನೆಗಳನ್ನು ಕೇಳಬೇಕಾಗಿರುವುದರಿಂದ ಪೌಲನನ್ನು ನಮ್ಮ ಬಳಿಗೆ ಕರೆದುಕೊಂಡು ಬರಬೇಕೆಂದು ಸೇನಾಧಿಪತಿಗೆ ತಿಳಿಸಿರಿ. ಪೌಲನು ಇಲ್ಲಿಗೆ ಬರುತ್ತಿರುವಾಗಲೇ ನಾವು ಮಾರ್ಗದಲ್ಲಿ ಕಾದುಕೊಂಡಿದ್ದು ಅವನನ್ನು ಕೊಲ್ಲುತ್ತೇವೆ” ಎಂದು ಹೇಳಿದರು.