Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:24 - ಪರಿಶುದ್ದ ಬೈಬಲ್‌

24 ಕ್ರಿಸ್ತನು ಮಹಾ ಪವಿತ್ರಸ್ಥಳದೊಳಕ್ಕೆ ಹೋದನು. ಆದರೆ ಆತನು ಮಾನವನಿರ್ಮಿತವಾದ ಮಹಾಪವಿತ್ರಸ್ಥಳಕ್ಕೆ ಹೋಗಲಿಲ್ಲ. ಈ ಮಹಾಪವಿತ್ರಸ್ಥಳವು ನಿಜವಾದದ್ದರ ಪ್ರತಿರೂಪ ಮಾತ್ರವಾಗಿದೆ. ಆತನು ಪರಲೋಕಕ್ಕೆ ಹೋದನು; ನಮಗೆ ಸಹಾಯ ಮಾಡುವುದಕ್ಕೋಸ್ಕರ ಈಗ ದೇವರ ಸನ್ನಿಧಿಯಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಕ್ರಿಸ್ತಯೇಸು ಪ್ರವೇಶಿಸಿದ್ದು ನೈಜದೇವಾಲಯದ ಛಾಯೆಯಂತಿರುವ ಮಾನವನಿರ್ಮಿತ ಗರ್ಭಗುಡಿಯನ್ನಲ್ಲ, ನಮ್ಮ ಪರವಾಗಿ ದೇವರ ಸಮ್ಮುಖದಲ್ಲಿ ಉಪಸ್ಥಿತರಾಗಲು ಸಾಕ್ಷಾತ್ ಸ್ವರ್ಗವನ್ನೇ ಅವರು ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯಾಕಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಅನುರೂಪ ಮಾತ್ರವಾದದ್ದಾಗಿಯೂ ಕೈಯಿಂದ ಕಟ್ಟಿದ್ದಾಗಿಯೂ ಇರುವ ಆಲಯದಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಏಕೆಂದರೆ ಕ್ರಿಸ್ತ ಯೇಸು ನಿಜ ದೇವಾಲಯದ ಪ್ರತಿರೂಪದಂತಿರುವ, ಕೈಯಿಂದ ಕಟ್ಟಿದ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವಂತೆ ಪರಲೋಕದಲ್ಲಿಯೇ ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಕ್ರಿಸ್ತ್ ಆಗ್ದಿ ಪವಿತ್ರ್ ಜಾಗ್ಯಾರ್ ಗೆಲೊ, ಖರೆ ತೊ ಮಾನ್ಸಾನ್ ಕರಲ್ಲ್ಯಾ ಪವಿತ್ರ್ ಜಾಗ್ಯಾರ್ ಜಾವ್ಕ್ ನಾ, ಹ್ಯೊ ಪವಿತ್ರ್ ಜಾಗೊ ಖರೆ ಹೊಲಾ, ಜಾಗ್ಯಾಚಿ ಸಾವ್ಳಿ ಯೆವ್ಡಿಚ್ ಹೊವ್ನ್ ಹಾಯ್ ಕ್ರಿಸ್ತ್ ಸರ್ಗಾರ್ ಅಮ್ಚ್ಯಾ ಭಾಜುಕ್ನಾ ಜಾವ್ನ್ ಅಮ್ಕಾ ಮಜ್ಜತ್ ಕರುಕ್ ಸಾಟ್ನಿ ಅತ್ತಾ ದೆವಾಚ್ಯಾ ಜಗೊಳ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:24
32 ತಿಳಿವುಗಳ ಹೋಲಿಕೆ  

ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.


ಈ ವಸ್ತುಗಳು ಪರಲೋಕದಲ್ಲಿರುವ ವಸ್ತುಗಳ ಪ್ರತಿರೂಪಗಳಾಗಿವೆ. ಇವುಗಳನ್ನು ಪ್ರಾಣಿಗಳ ಯಜ್ಞಗಳಿಂದ ಪರಿಶುದ್ಧಗೊಳಿಸಬೇಕಾಗಿದೆ. ಆದರೆ ಪರಲೋಕದಲ್ಲಿರುವ ನಿಜರೂಪಗಳಿಗಾಗಿ ಉತ್ತಮವಾದ ಯಜ್ಞಗಳನ್ನು ಅರ್ಪಿಸಬೇಕಾಗಿದೆ.


ಆತನು ಮಹಾ ಪವಿತ್ರಸ್ಥಳದಲ್ಲಿ ಅಂದರೆ ಜನರಿಂದ ನಿರ್ಮಿತವಾಗದೆ, ದೇವರಿಂದಲೇ ನಿರ್ಮಿಸಲ್ಪಟ್ಟಿರುವ ನಿಜವಾದ ದೇವದರ್ಶನ ಗುಡಾರದಲ್ಲಿ ಸೇವೆಮಾಡುತ್ತಿದ್ದಾನೆ.


ನಾನು ತಂದೆಯ ಬಳಿಯಿಂದ ಈ ಲೋಕಕ್ಕೆ ಬಂದೆನು. ಈಗ ನಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹಿಂತಿರುಗಿ ಹೋಗುತ್ತಿದ್ದೇನೆ” ಎಂದು ಹೇಳಿದನು.


ಪರಲೋಕದವುಗಳನ್ನು ಮಾತ್ರ ಆಲೋಚಿಸಿ, ಭೂಲೋಕದವುಗಳನ್ನು ಆಲೋಚಿಸಬೇಡಿ.


ದೇವರು ಆರಿಸಿಕೊಂಡಿರುವ ಜನರ ಮೇಲೆ ಯಾರು ದೋಷಾರೋಪಣೆ ಮಾಡಬಲ್ಲರು? ಯಾರೂ ಇಲ್ಲ! ಅವರನ್ನು ನೀತಿವಂತರನ್ನಾಗಿ ಮಾಡುವಾತನು ದೇವರೇ.


“ಆದರೆ ಎಲ್ಲವನ್ನು ಸರಿಪಡಿಸುವ ಕಾಲ ಬರುವ ತನಕ ಯೇಸು ಪರಲೋಕದಲ್ಲೇ ಇರಬೇಕು. ದೇವರು ಬಹುಕಾಲದ ಹಿಂದೆ ತನ್ನ ಪವಿತ್ರ ಪ್ರವಾದಿಗಳ ಸಂದೇಶದ ಮೂಲಕ ಮಾತಾಡಿದಾಗ, ಈ ಕಾಲದ ಬಗ್ಗೆ ಹೇಳಿದನು.


ಯೇಸು ಅವರನ್ನು ಆಶೀರ್ವದಿಸುತ್ತಿದ್ದಾಗ ಅವರಿಂದ ಬೇರ್ಪಟ್ಟು ಪರಲೋಕಕ್ಕೆ ಎತ್ತಲ್ಪಟ್ಟನು.


ಪ್ರಭುವಾದ ಯೇಸು ಈ ಸಂಗತಿಗಳನ್ನು ಶಿಷ್ಯರಿಗೆ ಹೇಳಿದ ಮೇಲೆ, ಸ್ವರ್ಗದೊಳಗೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


“ಈ ಮನುಷ್ಯನು, ‘ಕೈಯಿಂದ ಕಟ್ಟಿದ ಈ ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕೈಯಿಂದ ಕಟ್ಟಿಲ್ಲದ ಇನ್ನೊಂದು ದೇವಾಲಯವನ್ನು ಕಟ್ಟುತ್ತೇನೆ’ ಎಂದು ಹೇಳಿದ್ದನ್ನು ನಾವು ಕೇಳಿದೆವು” ಎಂದರು.


“ಆರೋನನು ಪವಿತ್ರಸ್ಥಳವನ್ನು ಪ್ರವೇಶಿಸುವಾಗ, ದೈವನಿರ್ಣಯದ ಪದಕವನ್ನು ಧರಿಸಿಕೊಳ್ಳಬೇಕು. ಈ ರೀತಿ ಎದೆಯ ಮೇಲೆ ಇಸ್ರೇಲನ ಗಂಡುಮಕ್ಕಳ ಹೆಸರುಗಳಿರಬೇಕು. ಅವನು ನ್ಯಾಯತೀರಿಸಲು ಧರಿಸಿಕೊಂಡಿರುವ ದೈವನಿರ್ಣಯದ ಪದಕದ ಮೇಲೆ ಈ ಹೆಸರುಗಳಿರುತ್ತವೆ. ಈ ರೀತಿಯಲ್ಲಿ ಇಸ್ರೇಲನ ಹನ್ನೆರಡು ಮಂದಿ ಗಂಡುಮಕ್ಕಳನ್ನು ಯೆಹೋವನಿಗೆ ಯಾವಾಗಲೂ ಜ್ಞಾಪಿಸಲಾಗುವುದು.


ಮತ್ತೊಬ್ಬ ದೇವದೂತನು ಬಂದು, ಯಜ್ಞವೇದಿಕೆಯ ಬಳಿ ನಿಂತನು. ಈ ದೇವದೂತನು ಧೂಪವಿದ್ದ ಬಂಗಾರದ ಪಾತ್ರೆಯನ್ನು ಹಿಡಿದುಕೊಂಡಿದ್ದನು. ದೇವರ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಅರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವನ್ನು ಕೊಡಲಾಯಿತು. ಈ ದೇವದೂತನು ಸಿಂಹಾಸನದ ಎದುರಿನಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲೆ ಈ ಧೂಪವನ್ನು ಇಟ್ಟನು.


ಈಗ ಯೇಸು ಪರಲೋಕಕ್ಕೆ ಹೋಗಿರುವನು. ಆತನು ದೇವರ ಬಲಗಡೆಯಲ್ಲಿದ್ದಾನೆ. ಆತನು ದೇವದೂತರನ್ನೂ ಅಧಿಕಾರಿಗಳನ್ನೂ ಶಕ್ತಿಗಳನ್ನೂ ಆಳುತ್ತಿದ್ದಾನೆ.


ಈ ದಿನ ನಮಗೆ ಇದೊಂದು ಉದಾಹರಣೆಯಾಗಿದೆ. ದೇವರಿಗೆ ಅರ್ಪಿಸಲ್ಪಡುತ್ತಿದ್ದ ಕಾಣಿಕೆಗಳಿಗಾಗಲಿ ಯಜ್ಞಗಳಿಗಾಗಲಿ ದೇವಾರಾಧನೆ ಮಾಡುವ ವ್ಯಕ್ತಿಯನ್ನು ಪರಿಪೂರ್ಣನನ್ನಾಗಿ ಮಾಡಲು ಸಾಧ್ಯವಿರಲಿಲ್ಲ ಎಂಬುದನ್ನು ಇದು ತೋರ್ಪಡಿಸುತ್ತದೆ. ಆ ವ್ಯಕ್ತಿಯ ಹೃದಯವನ್ನು ಪರಿಶುದ್ಧಗೊಳಿಸಲು ಆ ಯಜ್ಞಗಳಿಗೆ ಸಾಧ್ಯವಿರಲಿಲ್ಲ.


ಈ ಯಾಜಕರು ಮಾಡುವ ಕಾರ್ಯಗಳು ಪರಲೋಕದಲ್ಲಿನ ಕಾರ್ಯಗಳ ನಿಜವಾದ ಪ್ರತಿರೂಪಗಳೂ ಛಾಯೆಗಳೂ ಆಗಿವೆ. ಮೋಶೆಯು ದೇವದರ್ಶನ ಗುಡಾರವನ್ನು ನಿರ್ಮಿಸಲು ಸಿದ್ಧನಾದಾಗ ದೇವರು ಅವನಿಗೆ, “ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಎಚ್ಚರಿಕೆಯಿಂದ ನಿರ್ಮಿಸಬೇಕು” ಎಂದು ಹೇಳಿದ್ದು ಈ ಕಾರಣದಿಂದಲೇ.


ಯೇಸು ಈಗಾಗಲೇ ಅಲ್ಲಿಗೆ ಪ್ರವೇಶಿಸಿ, ಅನುಸರಿಸುವುದಕ್ಕಾಗಿ ಮಾರ್ಗವನ್ನು ತೋರಿದನು. ಯೇಸು ಮೆಲ್ಕಿಜೆದೇಕನಂತೆ ಸದಾಕಾಲಕ್ಕೂ ಇರುವ ಪ್ರಧಾನಯಾಜಕನಾಗಿದ್ದಾನೆ.


ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಹಾಗಾದರೆ ಮನುಷ್ಯಕುಮಾರನು ತಾನು ಬಿಟ್ಟುಬಂದ ಸ್ಥಳಕ್ಕೆ ಮರಳಿಹೋಗುವುದನ್ನು ನೀವು ನೋಡುವಾಗ ಬೇಸರಪಡುವಿರಾ?


ದೇವದೂತನು ನನಗೆ ಪ್ರಧಾನ ಯಾಜಕನಾದ ಯೆಹೋಶುವನನ್ನು ತೋರಿಸಿದನು. ಅವನು ಯೆಹೋವನ ದೂತನ ಮುಂದೆ ನಿಂತಿದ್ದನು. ಸೈತಾನನು ಯೆಹೋಶುವನ ಬಲಗಡೆಯಲ್ಲಿ ನಿಂತಿದ್ದನು. ಯೆಹೋಶುವನು ಕೆಟ್ಟಕೃತ್ಯಗಳನ್ನು ಮಾಡಿದ್ದಾನೆಂದು ದೂರು ಹೇಳುವದಕ್ಕಾಗಿ ಸೈತಾನನು ಅಲ್ಲಿ ನಿಂತಿದ್ದನು.


ಆತನು ಸೆರೆಯಾಳುಗಳನ್ನು ನಡೆಸಿಕೊಂಡು ಬೆಟ್ಟದ ಮೇಲೇರಿ ಹೋದನು; ತನಗೆ ದ್ರೋಹಮಾಡಿದ ಜನರಿಂದ ಆತನು ಕಷ್ಟಕಾಣಿಕೆಗಳನ್ನು ತೆಗೆದುಕೊಳ್ಳುವನು. ದೇವರಾದ ಯೆಹೋವನು ಮೇಲೇರಿಹೋದದ್ದು ಅಲ್ಲಿ ವಾಸಿಸುವುದಕ್ಕಾಗಿಯೇ.


ಬಳಿಕ ಈ ಎರಡು ರತ್ನಗಳನ್ನು ಏಫೋದಿನ ಪ್ರತಿಭುಜದ ಪಟ್ಟಿಯಲ್ಲಿಡು. ಆರೋನನು ಯೆಹೋವನ ಮುಂದೆ ನಿಲ್ಲುವಾಗ ಈ ವಿಶೇಷ ಅಂಗಿಯನ್ನು ಧರಿಸಿಕೊಂಡಿರುವನು. ಇಸ್ರೇಲನ ಗಂಡುಮಕ್ಕಳ ಹೆಸರುಗಳುಳ್ಳ ಎರಡು ರತ್ನಗಳು ಏಫೋದಿನ ಮೇಲಿರುತ್ತವೆ. ದೇವರು ಇಸ್ರೇಲರನ್ನು ಜ್ಞಾಪಿಸಿಕೊಳ್ಳುವಂತೆ ಈ ರತ್ನಗಳು ಮಾಡುವವು.


“ಎಚ್ಚರವಾಗಿರಿ! ಈ ಚಿಕ್ಕ ಮಕ್ಕಳಿಗೆ ಬೆಲೆಯೇ ಇಲ್ಲವೆಂದು ನೆನೆಸಬೇಡಿ. ಇವರಿಗಾಗಿ ಪರಲೋಕದಲ್ಲಿ ದೂತರನ್ನು ನೇಮಿಸಲಾಗಿದೆ. ಆ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಸಮ್ಮುಖದಲ್ಲಿ ಇರುತ್ತಾರೆ.


ಭೂಮಿಯ ಮೇಲೆ ನಾವು ವಾಸವಾಗಿರುವ ಈ ಗುಡಾರವು ಅಂದರೆ ಈ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ.


ಪರಲೋಕಕ್ಕೆ ಏರಿಹೋದ ಪ್ರಧಾನ ಯಾಜಕನೊಬ್ಬನು ನಮಗಿದ್ದಾನೆ. ಆತನೇ ದೇವರ ಮಗನಾದ ಯೇಸು. ಆದ್ದರಿಂದ ನಮಗಿರುವ ನಂಬಿಕೆಯಲ್ಲೇ ದೃಢವಾಗಿ ಸಾಗೋಣ.


ಮೊದಲನೆ ಒಡಂಬಡಿಕೆಯಲ್ಲಿ ಆರಾಧನೆಯ ನಿಯಮಗಳಿದ್ದವು. ಅದರಲ್ಲಿ ಮಾನವನಿರ್ಮಿತವಾದ ಆರಾಧನಾ ಸ್ಥಳವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು