ಇಬ್ರಿಯರಿಗೆ 9:26 - ಪರಿಶುದ್ದ ಬೈಬಲ್26 ಕ್ರಿಸ್ತನು ಅನೇಕ ಸಲ ತನ್ನನ್ನು ಅರ್ಪಿಸಿಕೊಂಡಿದ್ದರೆ, ಈ ಲೋಕವು ಸೃಷ್ಟಿಯಾದಂದಿನಿಂದ ಆತನು ಅನೇಕ ಸಲ ಸಂಕಟವನ್ನು ಅನಭವಿಸ ಬೇಕಾಗುತ್ತಿತ್ತು. ಆದರೆ ಕ್ರಿಸ್ತನು ಯುಗಾಂತ್ಯದಲ್ಲಿ ಪಾಪನಿವಾರಣೆ ಮಾಡುವುದಕ್ಕಾಗಿ ಬಂದು ಒಂದೇ ಸಲ ತನ್ನನ್ನು ಅರ್ಪಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಲೋಕಾದಿಯಿಂದಲೂ ಅವರು ಅನೇಕ ಸಾರಿ ಮರಣಯಾತನೆಯನ್ನು ಅನುಭವಿಸಬೇಕಾಗಿ ಬರುತ್ತಿತ್ತು; ಅದಕ್ಕೆ ಬದಲಾಗಿ ಯುಗಾಂತ್ಯವಾದ ಈ ಕಾಲದಲ್ಲಿ ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ಒಮ್ಮೆಗೇ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಳ್ಳಲೆಂದು ಯೇಸು ಪ್ರತ್ಯಕ್ಷರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಟ್ಟು ಸಾಯಬೇಕಾಗಿತ್ತು. ಆದರೆ ಒಂದೇ ಸಾರಿ ಯುಗಗಳ ಸಮಾಪ್ತಿಯಲ್ಲೇ ಆತನು ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ತನ್ನನ್ನು ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಹಾಗಿದ್ದರೆ, ಕ್ರಿಸ್ತ ಯೇಸುವು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಈಗ ಅವರು ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪ ನಿವಾರಣೆ ಮಾಡುವುದಕ್ಕೆ ತಮ್ಮನ್ನು ತಾವೇ ಯಜ್ಞ ಮಾಡಿಕೊಳ್ಳುವವರಾಗಿ ಪ್ರತ್ಯಕ್ಷರಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಕ್ರಿಸ್ತಾನ್ ಲೈಂದಾ ಅಪ್ನಾಕ್ ಒಪ್ಸುನ್ ಘೆಟಲ್ಲೆ ಹೊಲ್ಯಾರ್ ಹ್ಯೊ ಜಗ್ ತಯಾರ್ ಹೊಲ್ಲ್ಯಾಕ್ನಾ ತೊ ಲೈಂದಾ ತರಾಸ್ ಕರುನ್ ಘೆವ್ಚೊ ಹೊತ್ತೊ, ಖರೆ ಕ್ರಿಸ್ತಾನ್ ಜಗಾಚ್ಯಾ ಸರ್ತಲ್ಯಾ ದಿಸಾತ್ನಿ ಪಾಪ್ ನಾ ಕರುಚೆ ಮನುನ್ ಅಪ್ನಾಕ್ ಎಕುಚ್ ದಾ ಒಪ್ಸುನ್ ಘೆಟ್ಲ್ಯಾನ್. ಅಧ್ಯಾಯವನ್ನು ನೋಡಿ |
ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.