ಇಬ್ರಿಯರಿಗೆ 9:28 - ಪರಿಶುದ್ದ ಬೈಬಲ್28 ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಮತ್ತು ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನುಂಟು ಮಾಡುವದಕ್ಕೋಸ್ಕರ ಪಾಪಸಂಬಂಧವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತಸೆಚ್ ಕ್ರಿಸ್ತ್ ಬಿ ಲೈ ಲೊಕಾಂಚೊ ಪಾಪ್ ಕಾಡುನ್ ಘಾಲುಕ್ ಎಕುಚ್ ಎಗ್ದಾ ಅಪ್ನಾಕ್ ಬಲಿ ಹೊವ್ನ್ ಒಪ್ಸುನ್ ಘೆಟ್ಲ್ಯಾನ್, ಕ್ರಿಸ್ತ್ ದೊನ್ವೆದಾ ಯೆತಲೊ ಲೊಕಾಂಚೊ ಪಾಪ್ ಕಾಡುಕ್ ನ್ಹಯ್ ಅಪ್ನಾಸಾಟ್ನಿ ರಾಕಿತ್ ಹೊತ್ತ್ಯಾ ಲೊಕಾಕ್ನಿ ಸುಟ್ವುನ್ ನ್ಹೆವ್ ಸಾಟ್ನಿ ಯೆತಾ. ಅಧ್ಯಾಯವನ್ನು ನೋಡಿ |
ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.
ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.