ಇಬ್ರಿಯರಿಗೆ 9:4 - ಪರಿಶುದ್ದ ಬೈಬಲ್4 ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಗರ್ಭಗುಡಿಯಲ್ಲಿ ಚಿನ್ನದ ಧೂಪಾರತಿ ಮತ್ತು ಚಿನ್ನದ ತಗಡನ್ನು ಸುತ್ತಲೂ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇದ್ದವು. ಈ ಮಂಜೂಷದಲ್ಲಿ ಮನ್ನವನ್ನು ಇಟ್ಟಿದ್ದ ಚಿನ್ನದ ಪಾತ್ರೆ ಆರೋನನ ಚಿಗುರಿದ ಕೋಲು ಮತ್ತು ಒಡಂಬಡಿಕೆಯ ಶಿಲಾಶಾಸನಗಳು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದ ತಗಡನ್ನು ಮಡಾಯಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆ ಬರೆದಿದ್ದ ಕಲ್ಲಿನ ಹಲಿಗೆಗಳೂ ಇದ್ದವು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು. ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಶಿಲಾಶಾಸನಗಳೂ ಇದ್ದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಆಗ್ದಿ ಪವಿತ್ರ್ ಜಾಗ್ಯಾರ್ ಧುಪ್ ಜಾಳ್ವುಕ್ ಸೊನ್ಯಾಚೆ ಅಲ್ತಾರ್ ಹೊತ್ತೆ, ತೆ ನಸ್ತಾನಾ ಪೈಲೆಚೆ ಕರಾರಾತ್ ಥವ್ತಲಿ ಕರಾರಾಚಿ ಪೆಟಿ ಹೊತ್ತಿ, ತೆಕಾ ಸೊನ್ಯಾಚಿ ತಗ್ಡಾ ಲಾವಲ್ಲಿ ಹೊತ್ತಿ, ತೆಚ್ಯಾ ಭುತ್ತುರ್ ಸೊನ್ಯಾಚ್ಯಾ ಆಯ್ದಾನಾತ್ ಥವಲ್ಲೊ ಮನ್ನಾ ಅನಿ ಎಕ್ನತ್ತ್ಯಾ ಎಕ್ ವೆಳಾರ್ ಪಾನಾ ಚಿಗ್ರುನ್ ಯೆಲ್ಲೊ ಆರೊನಾಚೊ ದಾಂಡೊ ಹೊತ್ತೊ, ಪೈಲೆಚಿ ಧಾ ಆಜ್ಞಾ ಲಿವಲ್ಲಿ ಹೊತ್ತಿ, ಗುಂಡ್ಯಾಂಚಿ ಫಳಿಯಾ ತ್ಯಾತುರ್ ಥವಲ್ಲಿ ಹೊತ್ತಿ. ಅಧ್ಯಾಯವನ್ನು ನೋಡಿ |