ಇಬ್ರಿಯರಿಗೆ 9:5 - ಪರಿಶುದ್ದ ಬೈಬಲ್5 ಆ ಪೆಟ್ಟಿಗೆಯ ಮೇಲ್ಗಡೆ ದೇವರ ವೈಭವವನ್ನು ತೋರ್ಪಡಿಸುವ ಕೆರೂಬಿಗಳಿದ್ದವು. ಈ ಕೆರೂಬಿಗಳು ಕೃಪಾಸನವನ್ನು ಆಚ್ಛಾದಿಸಿಕೊಂಡಿದ್ದವು. ಆದರೆ ಇವುಗಳ ಕುರಿತು ಎಲ್ಲವನ್ನೂ ನಾವು ಈಗ ಹೇಳಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದರ ಮೇಲೆ ಕೃಪಾಸನವನ್ನು ಮುಚ್ಚುವ ತೇಜಸ್ಸಿನ ಕೆರೂಬಿಗಳೂ ಇದ್ದವು. ಅದನ್ನು ಈಗ ಒಂದೊಂದಾಗಿ ವಿವರಿಸಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮಂಜೂಷದ ಮೇಲೆ ದೇವರ ಸಾನ್ನಿಧ್ಯವನ್ನು ಸೂಚಿಸುವ ಕೆರೂಬಿ ಎಂಬ ದೂತರ ಆಕೃತಿಗಳಿದ್ದವು. ಅವುಗಳ ರೆಕ್ಕೆಗಳು ಕೃಪಾಸನವನ್ನು ಆವರಿಸಿಕೊಂಡಿದ್ದವು. ಸದ್ಯಕ್ಕೆ ಇವನ್ನು ಸವಿಸ್ತಾರವಾಗಿ ವಿವರಿಸಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅದರ ಮೇಲೆ ದೇವರ ಪ್ರಭಾವವನ್ನು ಸೂಚಿಸುವ ಕೆರೂಬಿಗಳು ಕೃಪಾಸನವನ್ನು ಆಚ್ಫಾದಿಸಿಕೊಂಡಿದ್ದವು. ಸದ್ಯಕ್ಕೆ ಈ ವಿಷಯಗಳನ್ನು ಒಂದೊಂದಾಗಿ ವಿವರಿಸುವದಕ್ಕೆ ಆಗುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮಂಜೂಷದ ಮೇಲೆ ಮಹಿಮೆಯ ಕೆರೂಬಿಯರು ಕರುಣಾಸನವನ್ನು ಮುಚ್ಚಿಕೊಂಡಿದ್ದವು. ಸದ್ಯಕ್ಕೆ ಈ ವಿಷಯಗಳನ್ನು ಸವಿಸ್ತಾರವಾಗಿ ನಾನು ಹೇಳುವುದಕ್ಕಾಗದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತ್ಯಾ ಡೆವ್ಳಿಯಾ ವೈನಿ ದೆವಾಚೊ ವೈಭವ್ ದಾಕ್ವುತಲಿ ಚಿತ್ರಾ ಕೆರುಬಿ ಹೊತ್ತಿ, ತೆ ದೆವಾಚೆ ಹಾಜಿರ್ ಪಾನ್ ದಾಕ್ವಿತ್ ತ್ಯಾ ಫಾಕಾಟ್ಯಾನಿ ಎಕ್ ಸಿವಾಸನ್ ನಿಪ್ವುನ್ ಥವಲ್ಯಾನಿ, ತ್ಯಾ ಜಾಗ್ಯಾ ವೈನಾ ಪಾಪಾಂಚಿ ಮಾಪಿ ಹೊಯ್ತ್ ಹೊತ್ತಿ, ಅತ್ತಾ ಅಮ್ಚ್ಯಾ ಕಡೆ ಹೆ ಸಗ್ಳೆ ಸಾಂಗುಕ್ ವೆಳ್ ನಾ. ಅಧ್ಯಾಯವನ್ನು ನೋಡಿ |
ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು!
ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.