ಇಬ್ರಿಯರಿಗೆ 9:6 - ಪರಿಶುದ್ದ ಬೈಬಲ್6 ನಾನು ನಿಮಗೆ ವಿವರಿಸಿದಂತೆಯೇ ಗುಡಾರದಲ್ಲಿ ಎಲ್ಲವನ್ನೂ ಸಿದ್ಧಮಾಡಲಾಗಿತ್ತು. ಯಾಜಕರು ಪ್ರತಿದಿನವೂ ತಮ್ಮ ಆರಾಧನೆಯ ಕರ್ತವ್ಯಗಳನ್ನು ಮಾಡಲು ಮೊದಲನೆ ಕೊಠಡಿಯ ಒಳಗಡೆ ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೀಗೆ ಇವುಗಳನ್ನು ಸಿದ್ಧಮಾಡಿದ ನಂತರ ಯಾಜಕರು ನಿತ್ಯವೂ ದೇವದರ್ಶನ ಗುಡಾರದ ಮೊದಲನೆಯ ಭಾಗದೊಳಗೆ ಮಾತ್ರ ಪ್ರವೇಶಿಸಿ, ಅಲ್ಲಿ ದೇವರ ಸೇವೆಯ ವಿಧಿಗಳನ್ನು ನಿರಂತರವಾಗಿ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಹೀಗೆ ಇದೆಲ್ಲಾ ವ್ಯವಸ್ಥಿತವಾಗಿರಲು, ಯಾಜಕರು ಮೊದಲನೆಯ ಭಾಗವಾದ ಪವಿತ್ರಸ್ಥಳವನ್ನು ಮಾತ್ರ ಪ್ರವೇಶಿಸಿ, ಅಲ್ಲಿ ದೇವಾರಾಧನೆಯ ವಿಧಿಗಳನ್ನು ನಿರಂತರವಾಗಿ ನೆರವೇರಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇವುಗಳು ಹೀಗೆ ಸಿದ್ಧಮಾಡಲ್ಪಟ್ಟ ಮೇಲೆ ಯಾಜಕರು ಯಾವಾಗಲೂ ಗುಡಾರದ ಮುಂದಣ ಭಾಗದೊಳಗೆ ಹೋಗಿ ದೇವಾರಾಧನೆಯನ್ನು ನಡಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇವುಗಳು ಹೀಗೆ ಸಿದ್ಧವಾದ ಬಳಿಕ ಯಾಜಕರು ಯಾವಾಗಲೂ ಹೊರಗಿನ ಗುಡಾರವನ್ನು ಪ್ರವೇಶಿಸಿ ದೈವಿಕ ಆರಾಧನೆಯನ್ನು ನಡೆಸುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಅಶೆ ಸಗ್ಳೆ ಬಿಡಾರಾತ್ ತಯಾರ್ ಕರುನ್ ಥವಲ್ಲೆ ರ್‍ಹಾಯ್, ಅನಿ ಯಾಜಕ್ ಅಪ್ನಾಚಿ ಸದ್ದಾಚಿ ಸೆವಾ ಕರುಕ್ ಬಿರಾಡಾತ್ಲ್ಯಾ ಭಾಯ್ಲ್ಯಾ ಖೊಲಿತ್ ಜಾಯ್. ಅಧ್ಯಾಯವನ್ನು ನೋಡಿ |
ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.