Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 1:1 - ಪರಿಶುದ್ದ ಬೈಬಲ್‌

1 ಪರ್ಶಿಯಾದ ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಒಂದು ಪ್ರಕಟನೆಯನ್ನು ಹೊರಡಿಸಲು ಯೆಹೋವನು ಅವನನ್ನು ಪ್ರೇರೇಪಿಸಿದನು. ಆ ಪ್ರಕಟನೆಯನ್ನು ಬರೆಯಿಸಿ ತನ್ನ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಅವನು ಅದನ್ನು ಓದಿಸಿದನು. ಯೆರೆಮೀಯನ ಮೂಲಕ ಯೆಹೋವನು ಹೇಳಿದ ವಿಷಯಗಳು ನೆರವೇರುವಂತೆ ಇದಾಯಿತು. ಆ ಪ್ರಕಟನೆ ಇಂತಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪರ್ಷಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪರ್ಷಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೈರಸನು ಪರ್ಷಿಯ ದೇಶದ ಅರಸ. ಆತನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸಿದರು. ಅದಕ್ಕಾಗಿಯೆ ಅರಸ ಸೈರಸನನ್ನು ಪ್ರೇರೇಪಿಸಿ ಅವನ ರಾಜ್ಯದಲ್ಲೆಲ್ಲಾ ಡಂಗುರ ಹಾಗು ಪತ್ರಗಳ ಮೂಲಕ ಹೀಗೆ ಪ್ರಕಟಿಸುವಂತೆ ಮಾಡಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರುಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 1:1
23 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನ್ ಎಪ್ಪತ್ತು ವರ್ಷಗಳವರೆಗೆ ಬಲಿಷ್ಠವಾಗಿರುವುದು. ಅನಂತರ ನಾನು ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ನಿಮ್ಮ ಬಳಿಗೆ ಬಂದು ನನ್ನ ವಾಗ್ದಾನದಂತೆ ನಿಮ್ಮನ್ನು ಜೆರುಸಲೇಮಿಗೆ ಮತ್ತೆ ಕರೆದುಕೊಂಡು ಬರುವೆನು.


ಯೆಹೋವನು ರಾಜನ ಮನಸ್ಸನ್ನು ನೀರಿನ ಕಾಲುವೆಯಂತೆ ಹತೋಟಿಯಲ್ಲಿಡುವನು. ಆತನು ತನ್ನ ಇಷ್ಟಾನುಸಾರ ಅದಕ್ಕೆ ಮಾರ್ಗದರ್ಶನ ನೀಡುವನು.


ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಗೌರವಿಸುವ ಮನಸ್ಸನ್ನು ರಾಜನ ಹೃದಯದಲ್ಲಿರಿಸಿದ್ದಕ್ಕೆ ಆತನಿಗೆ ಸ್ತೋತ್ರ!


ಅನ್ಯ ಜನಾಂಗಗಳು ಆತನ ಜನರನ್ನು ಸೆರೆಯಾಳುಗಳನ್ನಾಗಿ ಎಳೆದೊಯ್ದರು. ಅನ್ಯಜನಾಂಗಗಳು ತನ್ನ ಜನರಿಗೆ ದಯೆತೋರುವಂತೆ ಆತನು ಮಾಡಿದನು.


ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಅವರು ಏಳು ದಿನಗಳ ತನಕ ಸಂತಸದಿಂದ ಆಚರಿಸಿದರು. ಯಾಕೆಂದರೆ ಅಶ್ಶೂರದ ಅರಸನ ಮನಸ್ಸನ್ನು ಮಾರ್ಪಡಿಸುವುದರ ಮೂಲಕ ಯೆಹೋವನು ಯೆಹೂದ್ಯರನ್ನು ಬಹಳ ಸಂತೋಷಗೊಳಿಸಿದ್ದನು. ಇಸ್ರೇಲ್ ದೇವರ ಆಲಯದ ಕಟ್ಟಡವು ಪೂರ್ಣಗೊಳ್ಳಲು ಅಶ್ಶೂರದ ಅರಸನು ಸಹಾಯ ಮಾಡಿದನು.


ತನ್ನ ಆಳ್ವಿಕೆಯ ಎರಡನೇ ವರ್ಷದಲ್ಲಿ ನೆಬೂಕದ್ನೆಚ್ಚರನು ಕೆಲವು ಕನಸುಗಳನ್ನು ಕಂಡನು. ಆ ಕನಸುಗಳು ಅವನನ್ನು ತತ್ತರಿಸಿಬಿಟ್ಟವು ಮತ್ತು ಅವನಿಗೆ ನಿದ್ರೆ ಬರದಂತೆ ಮಾಡಿದವು.


ಅದಕ್ಕೆ ಯೋಹಾನನು, “‘ಪ್ರಭುವಿಗಾಗಿ ನೇರವಾದ ದಾರಿಯನ್ನು ಸಿದ್ಧಗೊಳಿಸಿರಿ’ ಎಂದು ಅಡವಿಯಲ್ಲಿ ಕೂಗುವವನ ಸ್ವರವೇ ನಾನು” ಎಂದು ಪ್ರವಾದಿಯಾದ ಯೆಶಾಯನ ಮಾತುಗಳಲ್ಲೇ ಉತ್ತರಕೊಟ್ಟನು.


ಆಗ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಪ್ರಧಾನರೂ ನಾಯಕರೂ ಜೆರುಸಲೇಮಿಗೆ ಹೊರಟರು. ದೇವಾಲಯವನ್ನು ಕಟ್ಟಲು ಅವರು ಹೊರಟಾಗ ದೇವರಿಂದ ಪ್ರೋತ್ಸಾಹಿಸಲ್ಪಟ್ಟ ಇತರ ಜನರೂ ಅವರೊಂದಿಗೆ ಜೆರುಸಲೇಮಿಗೆ ಹೊರಟರು.


ಆದರೆ ಜೆರುಬ್ಬಾಬೆಲ್, ಯೇಷೂವ ಮತ್ತು ಗೋತ್ರಪ್ರಧಾನರು ಅವರಿಗೆ ಹೇಳಿದ್ದೇನೆಂದರೆ: “ನೀವು ನಮ್ಮ ದೇವರಿಗೆ ದೇವಾಲಯವನ್ನು ಕಟ್ಟಬಾರದು. ನಾವು ಮಾತ್ರವೇ ಕಟ್ಟಬಹುದು. ಯಾಕೆಂದರೆ ಆತನು ಇಸ್ರೇಲ್ ಜನರ ದೇವರು. ಪರ್ಶಿಯ ರಾಜನಾದ ಸೈರಸನು ಅದೇ ರೀತಿಯಾಗಿ ನಮಗೆ ಅಪ್ಪಣೆ ಮಾಡಿರುತ್ತಾನೆ.”


ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಜೆರುಸಲೇಮಿನಲ್ಲಿರುವ ದೇವಾಲಯದ ವಿಷಯವಾಗಿ ಸೈರಸ್ ರಾಜನು ಹೊರಡಿಸಿದ ರಾಜಾಜ್ಞೆ: ದೇವಾಲಯವು ಮತ್ತೆ ಕಟ್ಟಲ್ಪಡಲಿ. ಅದು ಹೋಮಯಜ್ಞಾದಿಗಳನ್ನು ಸಮರ್ಪಿಸುವ ಸ್ಥಳವಾಗಲಿ. ದೇವಾಲಯದ ಅಸ್ತಿವಾರವು ಬಲವಾಗಿರಬೇಕು. ಅದರ ಎತ್ತರ ತೊಂಭತ್ತು ಅಡಿ ಇರಬೇಕು. ಅದರ ಅಗಲ ತೊಂಭತ್ತು ಅಡಿ ಇರಬೇಕು.


ಹೀಗೆ ಯೆಹೂದ್ಯರ ಹಿರಿಯರು ದೇವಾಲಯದ ಕಟ್ಟಡ ಕೆಲಸವನ್ನು ಮುಂದುವರಿಸಿದರು. ಪ್ರವಾದಿಯಾದ ಹಗ್ಗೈನಂತೆ ಮತ್ತು ಇದ್ದೋವಿನ ಮಗನಾದ ಜೆಕರೀಯನಂತೆ ಅವರನ್ನು ಪ್ರೋತ್ಸಾಹಿಸುತ್ತಾ ಇದ್ದರು. ಆದ್ದರಿಂದ ಅವರು ಯಶಸ್ವಿಯಾದರು. ದೇವಾಲಯದ ಕೆಲಸ ಮುಗಿಯಿತು. ಇಸ್ರೇಲಿನ ದೇವರ ಆಜ್ಞೆಗೆ ವಿಧೇಯರಾಗಿಯೂ, ಸೈರಸ್, ದಾರ್ಯಾವೆಷ ಮತ್ತು ಅರ್ತಷಸ್ತ ಎಂಬ ಪರ್ಶಿಯ ಅರಸರ ಆಜ್ಞೆಗೆ ವಿಧೇಯರಾಗಿಯೂ ಕಟ್ಟಡದ ಕೆಲಸವನ್ನು ಸಂಪೂರ್ಣ ಮಾಡಿದರು.


ಸೈರಸನಿಗೆ ಯೆಹೋವನು ಹೀಗೆನ್ನುತ್ತಾನೆ, “ನೀನೇ ನನ್ನ ಕುರುಬನು. ನಾನು ಬಯಸುವ ಕಾರ್ಯಗಳನ್ನು ನೀನು ಮಾಡುವೆ. ನೀನು ಜೆರುಸಲೇಮಿಗೆ, ‘ನೀನು ಕಟ್ಟಲ್ಪಡುವೆ’ ಎಂದೂ ದೇವಾಲಯಕ್ಕೆ ‘ನಿನ್ನ ಅಸ್ತಿವಾರವು ಮತ್ತೆ ಹಾಕಲ್ಪಡುವದು’ ಎಂದೂ ಹೇಳುವೆ.”


ಇವು ಯೆರೆಮೀಯನ ಸಂದೇಶಗಳು. ಯೆರೆಮೀಯನು ಹಿಲ್ಕೀಯನೆಂಬುವನ ಮಗನು. ಯೆರೆಮೀಯನು ಅನಾತೋತ್ ನಗರದ ಯಾಜಕ ಕುಟುಂಬಕ್ಕೆ ಸೇರಿದವನಾಗಿದ್ದನು. ಆ ನಗರವು ಬೆನ್ಯಾಮೀನ್ಯರ ಪ್ರದೇಶದಲ್ಲಿತ್ತು.


ಪರ್ಶಿಯ, ಇಥಿಯೋಪ್ಯ ಮತ್ತು ಪೂಟ್ ದೇಶಗಳ ಸೈನಿಕರು ಆ ಸೈನ್ಯದಲ್ಲಿರುವರು. ಅವರೆಲ್ಲರೂ ತಮ್ಮ ಆಯುಧಗಳನ್ನು ಧರಿಸಿಕೊಂಡಿರುವರು.


ಆಗ ಅರಸನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲಭಾಷೆಗಳವರಿಗೆ ಈ ಪತ್ರವನ್ನು ಬರೆದನು: ಶುಭಾಶಯಗಳು.


ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷ ದಾನಿಯೇಲನೆಂಬ ನಾನು ಕೆಲವು ಧರ್ಮಗ್ರಂಥಗಳನ್ನು ಓದುತ್ತಿದ್ದೆ. ಎಪ್ಪತ್ತು ವರ್ಷಗಳ ತರುವಾಯ ಜೆರುಸಲೇಮಿನ ಪುನರ್ನಿರ್ಮಾಣವಾಗುವದೆಂದು ಯೆಹೋವನು ಯೆರೆಮೀಯನಿಗೆ ಹೇಳಿದ್ದು ನನಗೆ ಈ ಧರ್ಮಗ್ರಂಥಗಳಿಂದ ತಿಳಿಯಿತು.


ತಾನು ಆರಿಸಿರುವ ಅರಸನಾದ ಸೈರಸನಿಗೆ ಯೆಹೋವನು ಹೇಳುವುದೇನೆಂದರೆ: “ನಾನು ಸೈರಸನ ಬಲಗೈಯನ್ನು ಹಿಡಿಯುವೆನು. ಅರಸರುಗಳಿಂದ ಅವರ ಅಧಿಕಾರವನ್ನು ತೆಗೆದುಬಿಡುವಂತೆ ಅವನಿಗೆ ಸಹಾಯ ಮಾಡುವೆನು. ನಗರದ್ವಾರಗಳು ಅವನ ಮುನ್ನುಗ್ಗುವಿಕೆಯನ್ನು ನಿಲ್ಲಿಸದು. ನಗರದ್ವಾರವನ್ನು ತೆರೆದು ಸೈರಸನು ಒಳಗೆ ಪ್ರವೇಶಿಸುವಂತೆ ಮಾಡುವೆನು.”


ದಾನಿಯೇಲನು ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆ ವರ್ಷದ ತನಕ ಅರಸನ ಸೇವಕನಾಗಿ ಮುಂದುವರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು